Video Viral: ಚೆನ್ನೈ ವಿಮಾನ ನಿಲ್ದಾಣದಲ್ಲಿ CPR ನೀಡಿ ವೃದ್ಧನ ಜೀವ ಉಳಿಸಿದ CISF ಅಧಿಕಾರಿ

ಚೆನ್ನೈ ದೇಶೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯೊಬ್ಬರು ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ನೀಡುವ ಮೂಲಕ ವೃದ್ಧ ಪ್ರಯಾಣಿಕನ ಜೀವ ಉಳಿಸಿದ್ದಾರೆ.

Video Viral: ಚೆನ್ನೈ ವಿಮಾನ ನಿಲ್ದಾಣದಲ್ಲಿ CPR ನೀಡಿ ವೃದ್ಧನ ಜೀವ ಉಳಿಸಿದ CISF ಅಧಿಕಾರಿ
CISF officer who saved an old man's life by giving CPR at Chennai airport
TV9kannada Web Team

| Edited By: ಅಕ್ಷಯ್​ ಕುಮಾರ್​​

Sep 27, 2022 | 3:25 PM

ಚೆನ್ನೈ: ಭಾನುವಾರ ಚೆನ್ನೈ ದೇಶೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯೊಬ್ಬರು ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ನೀಡುವ ಮೂಲಕ ವೃದ್ಧ ಪ್ರಯಾಣಿಕನ ಜೀವ ಉಳಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಿಐಎಸ್‌ಎಫ್ ಅಧಿಕಾರಿಯೊಬ್ಬರು 69 ವರ್ಷದ ವ್ಯಕ್ತಿಗೆ ಸಿಪಿಆರ್ ನೀಡುತ್ತಿರುವುದನ್ನು ಕಾಣಬಹುದು, ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾದರು. ವೈದ್ಯಕೀಯ ತಂಡ ಬಂದು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವ ಮುನ್ನವೇ ಸಿಐಎಸ್‌ಎಫ್ ಸಿಬ್ಬಂದಿ ವೃದ್ಧನ ಪ್ರಾಣ ಉಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಮತ್ತು ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada