AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕರು ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ಗೆ ಸಮಾನ ಗೌರವ ನೀಡಬೇಕು: ಕೇಂದ್ರ ಸರ್ಕಾರ

ದೇಶದ ನಾಗರಿಕರು 'ಜನ ಗಣ ಮನ' ಮತ್ತು ರಾಷ್ಟ್ರಗೀತೆ 'ವಂದೇ ಮಾತರಂ'ಗೆ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ನಾಗರಿಕರು 'ಜನ ಗಣ ಮನ' ಮತ್ತು 'ವಂದೇ ಮಾತರಂ'ಗೆ ಸಮಾನ ಗೌರವ ನೀಡಬೇಕು: ಕೇಂದ್ರ ಸರ್ಕಾರ
ರಾಷ್ಟ್ರ ಧ್ವಜ
TV9 Web
| Edited By: |

Updated on:Nov 05, 2022 | 10:28 PM

Share

ನವದೆಹಲಿ: ದೇಶದ ನಾಗರಿಕರು ರಾಷ್ಟ್ರಗೀತೆ ‘ಜನ ಗಣ ಮನ’ (National Anthem) ಮತ್ತು ರಾಷ್ಟ್ರೀಯ ಗಾಯನ ‘ವಂದೇ ಮಾತರಂ’ (Vande Mataram) ಗೆ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ (Minister of Home Affairs) ಹೇಳಿದೆ. ಸುಪ್ರೀಂ ಕೋರ್ಟ್‌ನ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಉತ್ತರಿಸಿದ ಗೃಹ ಸಚಿವಾಲಯ ‘ಜನ ಗಣ ಮನ’ ಮತ್ತು ರಾಷ್ಟ್ರಗೀತೆ ‘ವಂದೇ ಮಾತರಂ’ ಒಂದೇ ಸಾಲಿನಲ್ಲಿ ನಿಲ್ಲುತ್ತೇವೆ, ಹೀಗಾಗಿ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಲ್ಲಿಸಿದ್ದರು. ಈ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಕೇಂದ್ರ ಸರ್ಕಾರದ ವಕೀಲ ಮನೀಶ್ ಮೋಹನ್ ಮೂಲಕ ಇಂದು (ನ. 5) ಪ್ರತಿಕ್ರಿಯಿಸಿದೆ.

ಮುಂದುವರೆದು ವಂದೇ ಮಾತರಂ ಹಾಡುವ ಅಥವಾ ನುಡಿಸುವ ಬಗ್ಗೆ ಯಾವುದೇ ದಂಡದ ನಿಬಂಧನೆಗಳು ಅಥವಾ ಸೂಚನೆಗಳಿಲ್ಲ. ಈ ಹಾಡು ಭಾರತೀಯರ ಭಾವನೆಗಳು ಮತ್ತು ಮನಸ್ಸಿನಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ. ಹಾಡಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ನ ಎಲ್ಲಾ ನಿರ್ದೇಶನಗಳು ಅನುಸರಿಸಲಾಗುತ್ತಿದೆ. ಎರಡಕ್ಕೂ ತನ್ನದೇ ಆದ ಪಾವಿತ್ರ್ಯತೆ ಇದೆ ಮತ್ತು ಸಮಾನ ಗೌರವಕ್ಕೆ ಅರ್ಹವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಹಾಡು ಎರಡೂ ತಮ್ಮದೇ ಪಾವಿತ್ರ್ಯ ಹೊಂದಿವೆ ಮತ್ತು ಸಮಾನ ಗೌರವಕ್ಕೆ ಅರ್ಹವಾಗಿವೆ ಎಂದು ಒತ್ತಿ ಹೇಳಿರುವ ಕೇಂದ್ರ, ಪ್ರಸ್ತುತದ ವಿಚಾರಣೆಯಲ್ಲಿ ಎತ್ತಿಕೊಂಡಿರುವ ಸಂಗತಿಯು ರಿಟ್ ಅರ್ಜಿಗೆ ಪೂರಕವಾದ ವಿಷಯವಾಗುವುದಿಲ್ಲ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Sat, 5 November 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ