ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ. ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ […]

ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್
Follow us
ಸಾಧು ಶ್ರೀನಾಥ್​
|

Updated on:Dec 16, 2019 | 12:25 PM

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ.

ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ ವಾರ್ನಿಂಗ್: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಪಿಐಎಲ್​ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ಧರಣಿ ನಿರತ ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿಯನ್ನು ಕೋರ್ಟ್​ ಸಹಿಸುವುದಿಲ್ಲ. ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದಿದೆ. ಇನ್ನು ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.18ರಂದು ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಿರ್ಧರಿಸಿದೆ.

ಪೊಲೀಸರ ಮೇಲೆ ಕಲ್ಲು ತೂರಾಟ: ಲಖನೌ: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲೂ ಸಾವಿರಾರು ವಿದ್ಯಾರ್ಥಿಗಳ ಆಕ್ರೋಶ ಮುಂದುವರಿದಿದೆ. ನಾದ್ವಾ ವಿವಿ ಗೇಟ್ ಒಳಭಾಗದಿಂದ ಪೊಲೀಸರ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಹತ್ತಿಕ್ಕಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

Published On - 11:48 am, Mon, 16 December 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್