ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ. ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ […]

ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್

Updated on: Dec 16, 2019 | 12:25 PM

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ.

ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ ವಾರ್ನಿಂಗ್:
ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಪಿಐಎಲ್​ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ಧರಣಿ ನಿರತ ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿಯನ್ನು ಕೋರ್ಟ್​ ಸಹಿಸುವುದಿಲ್ಲ. ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದಿದೆ. ಇನ್ನು ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.18ರಂದು ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಿರ್ಧರಿಸಿದೆ.

ಪೊಲೀಸರ ಮೇಲೆ ಕಲ್ಲು ತೂರಾಟ:
ಲಖನೌ: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲೂ ಸಾವಿರಾರು ವಿದ್ಯಾರ್ಥಿಗಳ ಆಕ್ರೋಶ ಮುಂದುವರಿದಿದೆ. ನಾದ್ವಾ ವಿವಿ ಗೇಟ್ ಒಳಭಾಗದಿಂದ ಪೊಲೀಸರ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಹತ್ತಿಕ್ಕಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

Published On - 11:48 am, Mon, 16 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us