AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ಭಾರತದ ಆಂತರಿಕ ವಿಷಯ, ಅಮೆರಿಕ ಈ ಬಗ್ಗೆ ಹೇಳಿಕೆ ನೀಡುತ್ತಿರುವುದು ಅನಗತ್ಯ: ಎಂಇಎ

ಮಾರ್ಚ್ 11 ರಂದು ಪೌರತ್ವ (ತಿದ್ದುಪಡಿ) ಕಾಯಿದೆಯ ಅಧಿಸೂಚನೆಯ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಈ ಕಾಯ್ದೆಯನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂಬ ಯುಎಸ್ ಕಳವಳಕ್ಕೆ ಪ್ರತಿಕ್ರಿಯಿಸಿದ ಭಾರತ, "ಭಾರತದ ಬಹುತ್ವ ಸಂಪ್ರದಾಯಗಳ ಬಗ್ಗೆ ಸೀಮಿತ ತಿಳುವಳಿಕೆ ಹೊಂದಿರುವವರ ಉಪನ್ಯಾಸಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ.

ಸಿಎಎ ಭಾರತದ ಆಂತರಿಕ ವಿಷಯ, ಅಮೆರಿಕ ಈ ಬಗ್ಗೆ ಹೇಳಿಕೆ ನೀಡುತ್ತಿರುವುದು ಅನಗತ್ಯ: ಎಂಇಎ
ರಣಧೀರ್ ಜೈಸ್ವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 15, 2024 | 5:49 PM

Share

ದೆಹಲಿ ಮಾರ್ಚ್ 15 : ಪೌರತ್ವ (ತಿದ್ದುಪಡಿ) ಕಾಯ್ದೆ 2019 (Citizenship (Amendment) Act 2019) ಭಾರತದ ಆಂತರಿಕ ವಿಷಯವಾಗಿದೆ. ಅದರ ಅನುಷ್ಠಾನದ ಕುರಿತು ಅಮೆರಿಕದ (US) ಹೇಳಿಕೆಯು ತಪ್ಪು, ತಪ್ಪು ಮಾಹಿತಿ ಮತ್ತು ಅನಗತ್ಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್  (Randhir Jaiswal)ಹೇಳಿದ್ದಾರೆ. ಕಾಯ್ದೆಯ ಅಧಿಸೂಚನೆಯ ಬಗ್ಗೆ ಯುಎಸ್ ಕಳವಳ ವ್ಯಕ್ತಪಡಿಸಿದ ನಂತರ ಭಾರತ ಈ ರೀತಿ ಪ್ರತಿಕ್ರಿಯೆ ನೀಡಿದೆ. “ಮಾರ್ಚ್ 11 ರಂದು ಪೌರತ್ವ (ತಿದ್ದುಪಡಿ) ಕಾಯಿದೆಯ ಅಧಿಸೂಚನೆಯ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಈ ಕಾಯ್ದೆಯನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ”.”ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನಡಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನವಾದ ಪರಿಗಣನೆ ಮೂಲಭೂತ ಪ್ರಜಾಪ್ರಭುತ್ವದ ತತ್ವಗಳಾಗಿವೆ” ಎಂದು ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ.

ಯುಎಸ್ ಕಳವಳಕ್ಕೆ ಪ್ರತಿಕ್ರಿಯಿಸಿದ ಭಾರತ, “ಭಾರತದ ಬಹುತ್ವ ಸಂಪ್ರದಾಯಗಳ ಬಗ್ಗೆ ಸೀಮಿತ ತಿಳುವಳಿಕೆ ಹೊಂದಿರುವವರ ಉಪನ್ಯಾಸಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ.

ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿ

“31ನೇ ಡಿಸೆಂಬರ್ 2014 ರಂದು ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಸಿಖ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಈ ಕಾಯಿದೆ ಸುರಕ್ಷಿತ ಆಶ್ರಯವನ್ನು ನೀಡುತ್ತದೆ. ಸಿಎಎ ಪೌರತ್ವವನ್ನು ನೀಡುತ್ತದೆ. ಅದನ್ನು ಕಸಿದುಕೊಳ್ಳುತ್ತಿಲ್ಲ ಎಂಬುದನ್ನು ಒತ್ತಿಹೇಳಬೇಕು. ಇದು ಅಸ್ತಿತ್ವದ ಸಮಸ್ಯೆಯನ್ನು ಪರಿಹರಿಸುತ್ತದೆ, ಮಾನವ ಘನತೆಯನ್ನು ಒದಗಿಸುತ್ತದೆ ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ ಎಂಇಎ ವಕ್ತಾರರು ಹೇಳಿದ್ದಾರೆ.

ಭಾರತದ ಸಂವಿಧಾನವು ತನ್ನ ಎಲ್ಲಾ ನಾಗರಿಕರಿಗೆ ಧರ್ಮದ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಅಲ್ಪಸಂಖ್ಯಾತರ ಬಗ್ಗೆ ಕಳವಳ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಎಂಇಎ ಹೇಳಿದೆ. “ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಶ್ಲಾಘನೀಯ ಉಪಕ್ರಮದ ಬಗ್ಗೆ ವೋಟ್ ಬ್ಯಾಂಕ್ ರಾಜಕೀಯವು ಅಭಿಪ್ರಾಯಗಳನ್ನು ನಿರ್ಧರಿಸಬಾರದು. ಭಾರತದ ಬಹುಸಂಖ್ಯೆಯ ಸಂಪ್ರದಾಯಗಳು ಮತ್ತು ಪ್ರದೇಶದ ವಿಭಜನೆಯ ನಂತರದ ಇತಿಹಾಸದ ಬಗ್ಗೆ ಸೀಮಿತ ತಿಳುವಳಿಕೆಯನ್ನು ಹೊಂದಿರುವವರ ಉಪನ್ಯಾಸಗಳನ್ನು ನೀಡಲು ಪ್ರಯತ್ನಿಸದಿರುವುದು ಒಳ್ಳೇದು. ಭಾರತದ ಪಾಲುದಾರರು ಮತ್ತು ಹಿತೈಷಿಗಳು ಈ ಕ್ರಮವನ್ನು ತೆಗೆದುಕೊಂಡ ಉದ್ದೇಶವನ್ನು ಸ್ವಾಗತಿಸಬೇಕು ಎಂದು ಭಾರತದ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ಡಿಎಂಕೆ ಪಕ್ಷ ತಮಿಳುನಾಡಿನ ಭವಿಷ್ಯ ಮತ್ತು ಸಂಸ್ಕೃತಿಯ ಶತ್ರು: ಮೋದಿ

ಪೌರತ್ವ (ತಿದ್ದುಪಡಿ) ಕಾಯಿದೆ, 2019 ಅನ್ನು ಮಾರ್ಚ್ 11 ರಂದು ಕೇಂದ್ರವು ಅಧಿಸೂಚನೆ ಮಾಡಿದ್ದು, ಬಿಜೆಪಿಯೇತರ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾಯ್ದೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಕಾಯಿದೆಯಲ್ಲಿ, ಡಿಸೆಂಬರ್ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನ ಮತ್ತು ಪಾರ್ಸಿಗಳು ಶೀಘ್ರವಾಗಿ ಪೌರತ್ವವನ್ನು ಪಡೆಯುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!