ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ: ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ-2019 ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿ.15ರಂದು ದೆಹಲಿಯಲ್ಲಿ ನಾಲ್ಕ ಸರ್ಕಾರಿ ಬಸ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ 3 ಬಸ್​ಗಳ ಮೇಲೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 7 ಮೆಟ್ರೋ ಸ್ಟೇಷನ್‌ ಬಂದ್:  ಡಿಟಿಸಿಯ ಕ್ಲಸ್ಟರ್ ಬಸ್, ಸ್ಕೂಲ್ ಬಸ್‌ ಮೇಲೆ ಕಲ್ಲೆಸೆದು, ಪ್ರತಿಭಟನಾಕಾರರು ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 5 ಮೆಟ್ರೋ ಸ್ಟೇಷನ್‌ ಬಂದ್ ಮಾಡಲಾಗಿದ್ದು, […]

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ: ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
ಸಾಧು ಶ್ರೀನಾಥ್​

Updated on: Dec 17, 2019 | 4:21 PM

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ-2019 ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿ.15ರಂದು ದೆಹಲಿಯಲ್ಲಿ ನಾಲ್ಕ ಸರ್ಕಾರಿ ಬಸ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ 3 ಬಸ್​ಗಳ ಮೇಲೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

7 ಮೆಟ್ರೋ ಸ್ಟೇಷನ್‌ ಬಂದ್: 
ಡಿಟಿಸಿಯ ಕ್ಲಸ್ಟರ್ ಬಸ್, ಸ್ಕೂಲ್ ಬಸ್‌ ಮೇಲೆ ಕಲ್ಲೆಸೆದು, ಪ್ರತಿಭಟನಾಕಾರರು ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 5 ಮೆಟ್ರೋ ಸ್ಟೇಷನ್‌ ಬಂದ್ ಮಾಡಲಾಗಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಜಫರಾಬಾದ್​ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷವುಂಟಾಗಿದ್ದು, ಪ್ರತಿಭಟನಾನಿರತರ ಮೇಲೆ ಡ್ರೋನ್ ಮೂಲಕ ಪೊಲೀಸರ ಹದ್ದಿನಗಣ್ಣಿಟ್ಟಿದ್ದಾರೆ.

Published On - 4:20 pm, Tue, 17 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us