‘ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸಾಧ್ಯವಿಲ್ಲ’

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಮೊಳಗುತ್ತಿರುವಾಗಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಹೇಳಿಕೆಯೊಂದನ್ನ ನೀಡಿದ್ದಾರೆ. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯೋದು ಅಸಾಧ್ಯ, ಪೌರತ್ವ ಕಾಯ್ದೆ ಜಾರಿಯಾಗೇ ತೀರುತ್ತದೆ ಅಂತಾ ತಿಳಿಸಿದ್ದಾರೆ. ಅತ್ಯಾಚಾರಿಗಳಿಗೆ ನೇಣುಗಂಬ ಗ್ಯಾರಂಟಿ..? ನಿರ್ಭಯಾ ಅಪರಾಧಿಗಳ ಗಲ್ಲು ಶಿಕ್ಷೆಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಇವತ್ತು ಮಹತ್ವದ ಆದೇಶ ನೀಡಲಿದೆ. ನಾಲ್ವರು ಅಪರಾಧಿಗಳ ಪೈಕಿ ಅಕ್ಷಯ್ ಠಾಕೂರ್ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನು ಇಂದು ಸುಪ್ರೀಂಕೋರ್ಟ್‌ ನೀಡಲಿದೆ. ಹೀಗಾಗಿ […]

‘ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸಾಧ್ಯವಿಲ್ಲ’

Updated on: Dec 18, 2019 | 7:23 AM

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಮೊಳಗುತ್ತಿರುವಾಗಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಹೇಳಿಕೆಯೊಂದನ್ನ ನೀಡಿದ್ದಾರೆ. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯೋದು ಅಸಾಧ್ಯ, ಪೌರತ್ವ ಕಾಯ್ದೆ ಜಾರಿಯಾಗೇ ತೀರುತ್ತದೆ ಅಂತಾ ತಿಳಿಸಿದ್ದಾರೆ.

ಅತ್ಯಾಚಾರಿಗಳಿಗೆ ನೇಣುಗಂಬ ಗ್ಯಾರಂಟಿ..?
ನಿರ್ಭಯಾ ಅಪರಾಧಿಗಳ ಗಲ್ಲು ಶಿಕ್ಷೆಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಇವತ್ತು ಮಹತ್ವದ ಆದೇಶ ನೀಡಲಿದೆ. ನಾಲ್ವರು ಅಪರಾಧಿಗಳ ಪೈಕಿ ಅಕ್ಷಯ್ ಠಾಕೂರ್ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನು ಇಂದು ಸುಪ್ರೀಂಕೋರ್ಟ್‌ ನೀಡಲಿದೆ. ಹೀಗಾಗಿ ಎಲ್ಲರ ಚಿತ್ತ ಸುಪ್ರೀಂ ಆದೇಶದತ್ತ ನೆಟ್ಟಿದೆ.

ಶಾಸಕ ಸ್ಥಾನದಿಂದ ಕುಲದೀಪ್ ಅನರ್ಹ..?
ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​ಗೆ ಶಿಕ್ಷೆ ಪ್ರಮಾಣ ನಾಳೆ ಪ್ರಕಟವಾಗಲಿದೆ. ದೆಹಲಿ ತೀಸ್ ಹಜಾರಿ ಕೋರ್ಟ್​ಕುಲದೀಪ್ ದೋಷಿ ಎಂದು ತೀರ್ಪು ನೀಡಿದ ಬೆನ್ನಲ್ಲೇ ಶಾಸಕ ಸ್ಥಾನ ರದ್ದುಗೊಳ್ಳುವ ಸಾಧ್ಯತೆಯೂ ದಟ್ಟವಾಗಿದೆ.

ನಿಂತಿದ್ದ ರೈಲಿನ ಬೋಗಿ ಬೆಂಕಿಗಾಹುತಿ:
ಉತ್ತರ ಪ್ರದೇಶದ ಕಾನ್ಪುರದಲ್ಲಿ ಕ್ಲೀನಿಂಗ್ ಲೈನ್​ನಲ್ಲಿ ನಿಲ್ಲಿಸಲಾಗಿದ್ದ ರೈಲಿನ 2 ಬೋಗಿಗಳು ಸುಟ್ಟು ಕರಕಲಾಗಿವೆ. ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ದುಷ್ಕರ್ಮಿಗಳು ರೈಲಿನ ಬೋಗಿಗಳಿಗೆ ಬೆಂಕಿ ಇಟ್ಟಿರುವ ಸಾಧ್ಯತೆ ಇದ್ದು, ರೈಲ್ವೇ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us