AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಉಗ್ರರ ಗುಂಡಿಗೆ ಫಾರ್ಮಸಿ ಉದ್ಯೋಗಿ ಬಲಿ

ಬೋಹ್ರಿ ಕಡಲ್​ ಏರಿಯಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ನಡೆದ ಬಗ್ಗೆ ಸಂಜೆ ಸುಮಾರು 8.10ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ನಾವು ಹೋಗಿ ನೋಡಿದಾಗ ಇಬ್ರಾಹಿಂ ಖಾನ್​ ರಕ್ತದ ಮಡುವಲ್ಲಿ ಬಿದ್ದಿದ್ದರು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಉಗ್ರರ ಗುಂಡಿಗೆ ಫಾರ್ಮಸಿ ಉದ್ಯೋಗಿ ಬಲಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 08, 2021 | 10:04 PM

Share

ಜಮ್ಮು-ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರಿದಿದೆ. ಇಂದು ಸಂಜೆ ಶ್ರೀನಗರದ ಬೊಹ್ರಿ ಕಡಾಲ್​ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತನನ್ನು ಮೊಹಮ್ಮದ್​ ಇಬ್ರಾಹಿಂ ಖಾನ್​ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು. ಅವರು ಸೇಲ್ಸ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್​​ರ ಹೊಟ್ಟೆಗೆ ಗುಂಡು ಹೊಡೆದಿದ್ದರು. ಇದರಿಂದಾಗಿ ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಅವರನ್ನು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು. 

ಇಬ್ರಾಹಿಂ ಫಾರ್ಮಸಿಯೊಂದರ ಸೇಲ್ಸ್​ಮ್ಯಾನ್​ ಆಗಿದ್ದರು. ಈ ಫಾರ್ಮಸಿ ನಡೆಸುತ್ತಿರುವ ವೈದ್ಯರು ಕಾಶ್ಮೀರಿ ಪಂಡಿತರಾಗಿದ್ದಾರೆ ಎಂದು ಹೇಳಲಾಗಿದೆ.  ಬೋಹ್ರಿ ಕಡಲ್​ ಏರಿಯಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ನಡೆದ ಬಗ್ಗೆ ಸಂಜೆ ಸುಮಾರು 8.10ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ನಾವು ಹೋಗಿ ನೋಡಿದಾಗ ಇಬ್ರಾಹಿಂ ಖಾನ್​ ರಕ್ತದ ಮಡುವಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಪೊಲೀಸ್​ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಭಯೋತ್ಪಾದಕರನ್ನು ಹುಡುಕುವ ಕಾರ್ಯಾಚರಣೆಯೂ ಮುಂದುವರಿದಿದೆ. ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಈ ಹತ್ಯೆಯನ್ನು ಖಂಡಿಸಿದ್ದಾರೆ.

ಇನ್ನು ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಪ್ರಮಾಣ ಹೆಚ್ಚಾಗಿದೆ. ಬಿಹಾರದ ಕಾರ್ಮಿಕರು, ಶಾಲೆಯೊಂದರ ಇಬ್ಬರು ಶಿಕ್ಷಕರು ಸೇರಿ ಹಲವು ನಾಗರಿಕರನ್ನು ಈಗಾಗಲೇ ಉಗ್ರರು ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್​ ಶಾ, ಇಲ್ಲಿನ ನಾಗರಿಕರ ಸುರಕ್ಷತೆ ನಮ್ಮ ಜವಾಬ್ದಾರಿ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್