AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ತೀವ್ರ ಸೋಂಕು ತಗುಲಿ ಸಿಜೆಐ ಬಿಆರ್ ಗವಾಯಿ ಆಸ್ಪತ್ರೆಗೆ ದಾಖಲು

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ಅವರು ತಮ್ಮ ಅಧಿಕೃತ ಜವಾಬ್ದಾರಿಗಳಿಗೆ ಮರಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ತೀವ್ರ ಸೋಂಕಿನಿಂದಾಗಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ತೀವ್ರ ಸೋಂಕು ತಗುಲಿ ಸಿಜೆಐ ಬಿಆರ್ ಗವಾಯಿ ಆಸ್ಪತ್ರೆಗೆ ದಾಖಲು
Br Gavai
ಸುಷ್ಮಾ ಚಕ್ರೆ
|

Updated on: Jul 14, 2025 | 4:31 PM

Share

ನವದೆಹಲಿ, ಜುಲೈ 14: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ (BR Gavai) ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ಅವರಿಗೆ ತೀವ್ರ ಸೋಂಕು ತಗುಲಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿ ಗವಾಯಿ ಪ್ರಸ್ತುತ ವೈದ್ಯಕೀಯ ನಿಗಾದಲ್ಲಿದ್ದಾರೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಅವರ ಅನಾರೋಗ್ಯದಿಂದಾಗಿ ಸಿಜೆಐ ಬಿಆರ್ ಗವಾಯಿ ಇಂದು ನ್ಯಾಯಾಲಯದ ವಿಚಾರಣೆಯ ಅಧ್ಯಕ್ಷತೆ ವಹಿಸಿರಲಿಲ್ಲ. ಈ ವಿಷಯದ ಮಾಹಿತಿ ನೀಡಿರುವ ಅಧಿಕಾರಿಗಳು, ಮುಖ್ಯ ನ್ಯಾಯಮೂರ್ತಿಗಳು ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮುಂದಿನ ಒಂದೆರಡು ದಿನಗಳಲ್ಲಿ ತಮ್ಮ ಅಧಿಕೃತ ಜವಾಬ್ದಾರಿಗಳಿಗೆ ಮರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬಿ.ಆರ್ ಗವಾಯಿ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅವರಿಗೆ ತಗುಲಿರುವ ಸೋಂಕಿನ ಬಗ್ಗೆ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. “ಸಿಜೆಐ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಿ ಕರ್ತವ್ಯಕ್ಕೆ ಮರಳುವ ನಿರೀಕ್ಷೆಯಿದೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿದ್ದು ದೃಢ; ರಾಜೀನಾಮೆಗೆ ಸೂಚನೆ

ಇದಕ್ಕೂ ಮೊದಲು ಸಿಜೆಐ ಜುಲೈ 12ರಂದು ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಲು ಹೈದರಾಬಾದ್‌ಗೆ ತೆರಳಿದ್ದರು. ಅದೇ ದಿನ, ಅವರು “ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ – ಸಂವಿಧಾನ ಸಭೆ – ಭಾರತದ ಸಂವಿಧಾನ” ಎಂಬ ಶೀರ್ಷಿಕೆಯ ವಿಶೇಷ ಅಂಚೆ ಕವರ್ ಮತ್ತು “ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ” ಕುರಿತು ಫೋಟೋ ಪೋಸ್ಟ್‌ಕಾರ್ಡ್‌ಗಳ ಸೆಟ್ ಅನ್ನು ಬಿಡುಗಡೆ ಮಾಡಿದರು. ಅದಾದ ನಂತರ ಸಿಜೆಐ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ