ಮನೆಯಲ್ಲಿ ಅಕ್ರಮ ಹಣ ಪತ್ತೆ; ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣದ ತನಿಖೆಗೆ ಸಿಜೆಐ ಸಂಜೀವ್ ಖನ್ನಾ ಆದೇಶ
ದೆಹಲಿಯ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಗಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ 3 ಸದಸ್ಯರ ಸಮಿತಿ ರಚಿಸಿದ್ದಾರೆ. ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಆಂತರಿಕ ತನಿಖೆಯನ್ನು ಪ್ರಾರಂಭಿಸಲು ಆದೇಶಿಸಿದ್ದಾರೆ.

ನವದೆಹಲಿ, ಮಾರ್ಚ್ 22: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಇಂದು ಆಂತರಿಕ ತನಿಖೆಗೆ ಆದೇಶಿಸಿದ್ದು, ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ನಗದು ವಿವಾದದ ನಡುವೆ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಸಿಜೆಐ ಸಂಜೀವ್ ಖನ್ನಾ ಅವರು 3 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರಿಂದ ವರದಿ ಪಡೆದ ನಂತರ ಆಂತರಿಕ ತನಿಖೆಗೆ ಸಿಜೆಐ ಆದೇಶಿಸಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸದಂತೆ ಸಿಜೆಐ ಸಂಜೀವ್ ಖನ್ನಾ ಅವರು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸೂಚಿಸಿದ್ದಾರೆ. ಸಿಜೆಐ ಸೂಚನೆಯಂತೆ ರಚಿಸಲಾದ ಮೂವರು ಸದಸ್ಯರ ಸಮಿತಿಯ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ದೆಹಲಿ ನ್ಯಾಯಮೂರ್ತಿ ವರ್ಗಾವಣೆಗೂ ನಗದು ತನಿಖೆಗೂ ಸಂಬಂಧವಿಲ್ಲ; ಸುಪ್ರೀಂ ಕೋರ್ಟ್
– ನ್ಯಾಯಮೂರ್ತಿ ಶೀಲ್ ನಾಗು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು
– ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು
– ನ್ಯಾಯಮೂರ್ತಿ ಅನು ಶಿವರಾಮನ್, ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರು
ನ್ಯಾಯಾಂಗ ವ್ಯವಸ್ಥೆಯ ಸಮಗ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿರುವ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ವರದಿಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಅನುಸರಿಸಿ ಸಮಿತಿಯನ್ನು ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಘಟನೆಯ ತನಿಖೆ ಮತ್ತು ಅದರ ಸಂಶೋಧನೆಗಳನ್ನು ಸಲ್ಲಿಸುವ ಕಾರ್ಯವನ್ನು ಸಮಿತಿಗೆ ವಹಿಸಲಾಗುವುದು.
ಇದನ್ನೂ ಓದಿ: ಹೈಕೋರ್ಟ್‌ನ ಸಂಭಾವ್ಯ ನ್ಯಾಯಮೂರ್ತಿಗಳ ಜತೆ ಮಾತುಕತೆ ಆರಂಭಿಸಿದ ಸುಪ್ರೀಂ ಕೊಲಿಜಿಯಂ
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿಯ ಅಧಿಕೃತ ನಿವಾಸದ ವಿವಿಧ ಕೋಣೆಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ದಳದವರು ದೊಡ್ಡ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದರು. ನ್ಯಾಯಮೂರ್ತಿ ಯಶವಂತ್ ವರ್ಮಾ ಊರಿನಿಂದ ಹೊರಗಿದ್ದಾಗ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅವರ ಕುಟುಂಬದ ಸದಸ್ಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅವರು ಬೆಂಕಿಯನ್ನು ನಂದಿಸಿದ ನಂತರ ರೂಂಗಳಲ್ಲಿ ನಗದು ಪತ್ತೆಯಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ