AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದೇ ಜೈಲು ಸೇರಿದ ಸಿಜೆಪಿ ನಾಯಕ ಅಶುತೋಷ್ ರಂಕಾ, ಸೌರವ್ ದಾಸ್​ಗೆ ಐದು ದಿನಗಳ ನ್ಯಾಯಾಂಗ ಬಂಧನ

ಜಂತರ್ ಮಂತರ್‌ನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಸಿಜೆಪಿ ನಾಯಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್‌ಗೆ ದೆಹಲಿ ನ್ಯಾಯಾಲಯ 5 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹುಟ್ಟುಹಬ್ಬದ ದಿನವೇ ರಂಕಾ ಜೈಲು ಸೇರಿದ್ದಾರೆ. ಈ ನಾಯಕರು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ ಮತ್ತೆ ಪ್ರತಿಭಟಿಸಿದ್ದರಿಂದ ನ್ಯಾಯಾಲಯ ಈ ಆದೇಶ ನೀಡಿದೆ. ಇದು ಸಿಜೆಪಿ ನಾಯಕರಿಗೆ ಹಿನ್ನಡೆಯಾಗಿದೆ.

ಹುಟ್ಟುಹಬ್ಬದಂದೇ ಜೈಲು ಸೇರಿದ ಸಿಜೆಪಿ ನಾಯಕ ಅಶುತೋಷ್ ರಂಕಾ, ಸೌರವ್ ದಾಸ್​ಗೆ ಐದು ದಿನಗಳ ನ್ಯಾಯಾಂಗ ಬಂಧನ
ಅಶುತೋಷ್Image Credit source: PTI
ನಯನಾ ರಾಜೀವ್
|

Updated on:Oct 14, 2026 | 9:16 AM

Share

ನವದೆಹಲಿ, ಅಕ್ಟೋಬರ್ 14: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಿಷೇಧಿತ ಜಂತರ್ ಮಂತರ್ ಪ್ರದೇಶಕ್ಕೆ ಬ್ಯಾರಿಕೇಡ್ ಮುರಿದು ಅಕ್ರಮವಾಗಿ ನುಸುಳಿದ್ದ ಕಾಕ್ರೋಚ್ ಜನತಾ ಪಾರ್ಟಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರಿಗೆ ದೆಹಲಿ ನ್ಯಾಯಾಲಯವು ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿಶೇಷವೆಂದರೆ, ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಹುಟ್ಟುಹಬ್ಬದಂದೇ ನ್ಯಾಯಾಲಯ ಈ ಆದೇಶ ನೀಡಿದ್ದು, ಹುಟ್ಟುಹಬ್ಬದ ದಿನವೇ ಅವರು ತಿಹಾರ್ ಜೈಲು ಪಾಲಾಗಿದ್ದಾರೆ.

ಭಾನುವಾರವಷ್ಟೇ ಷರತ್ತುಬದ್ಧ ಜಾಮೀನು ಪಡೆದಿದ್ದ ಈ ಇಬ್ಬರೂ ಮುಖಂಡರು, ಸೋಮವಾರ ಮತ್ತೆ ಜಂತರ್ ಮಂತರ್ ಒಳಗೆ ಬಲವಂತವಾಗಿ ನುಗ್ಗಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ನಿಷೇಧಿತ ಆವರಣವನ್ನು ಅತಿಕ್ರಮಿಸಿದ ಆರೋಪದಡಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಇಬ್ಬರನ್ನೂ 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ಕೋರ್ಟ್ ನೀಡಿದ್ದ ಆದೇಶದ ಪ್ರಕಾರ, ಮುಂದಿನ ಒಂದು ವರ್ಷ ಶಾಂತಿ ಕದಡಬಾರದು ಎಂದು ಇವರಿಬ್ಬರು 50,000 ರೂ. ಮುಚ್ಚಳಿಕೆ ಬಾಂಡ್‌ಗೆ ಸಹಿ ಹಾಕಿದ್ದರು. ಜಾಮೀನು ಪಡೆದ 24 ಗಂಟೆಯೊಳಗೆ ನಿಷೇಧಾಜ್ಞೆ ಉಲ್ಲಂಘಿಸಿ ಮತ್ತೆ ಪ್ರತಿಭಟನೆಗೆ ಧುಮುಕಿದ್ದರಿಂದ, ಹಳೆಯ ಜಾಮೀನು ರದ್ದಾಗುವುದರ ಜೊತೆಗೆ ಶ್ಯೂರಿಟಿ ಮೊತ್ತವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಪ್ರತಿಭಟನೆ ಮಾಡೋಕೂ ಲಕ್ಷ ಲಕ್ಷ ಹಣ ಕೊಡ್ಬೇಕು, ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಈ ವರ್ಷ 3 ದಿನ ಮಾತ್ರ ಅವಕಾಶ

ಮಂಗಳವಾರ ಅಶುತೋಷ್ ರಂಕಾ ಅವರ ಜನ್ಮದಿನವಾಗಿದ್ದು, ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರುತ್ತಿದ್ದ ವೇಳೆಯಲ್ಲೇ ನ್ಯಾಯಾಲಯ ಅವರನ್ನು ಜೈಲಿಗೆ ರವಾನಿಸಿದೆ. ಮಂಗಳವಾರ ಸಂಜೆ ನಡೆದ ರಾಹುಲ್ ಗಾಂಧಿ ಅವರ ‘ಹೈ ಟೀ’ ಸಭೆಯಲ್ಲಿ ‘ಇಂಡಿ’ ಮೈತ್ರಿಕೂಟದ ಪಕ್ಷಗಳು ಸಿಜೆಪಿ ಪ್ರತಿಭಟನೆಯಿಂದ ಅಧಿಕೃತವಾಗಿ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿವೆ. ಇದರಿಂದಾಗಿ ಸಿಜೆಪಿ ನಾಯಕರು ವಿರೋಧ ಪಕ್ಷಗಳ ಪ್ರಮುಖ ಬೆಂಬಲವಿಲ್ಲದೆ ಏಕಾಂಗಿ ಕಾನೂನು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ದೆಹಲಿಗೆ ಮರಳುತ್ತಿದ್ದು, ನಾಯಕರ ಬಂಧನವನ್ನು ಖಂಡಿಸಿ ಕಾರ್ಯಕರ್ತರು ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಜಂತರ್ ಮಂತರ್ ಸುತ್ತಮುತ್ತ ದೆಹಲಿ ಪೊಲೀಸರ ಬಿಗಿ ಕಣ್ಗಾವಲು ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Wed, 14 October 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಅಡುಗೆ, ಊಟ-ನಿದ್ದೆ!
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ