AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿನ ಬಗ್ಗೆ ಗೌರವವೇ ಇಲ್ಲ: ಸೌರವ್ ದಾಸ್, ಅಶುತೋಷ್ ರಂಕಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದಕ್ಕೆ ಕಾರಣಗಳು ಇಲ್ಲಿವೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರ ನ್ಯಾಯಾಂಗ ಬಂಧನವನ್ನು 2026 ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ ಶಾಂತಿ ಭಂಗ ಮತ್ತು ನಿಯಮಗಳ ಉಲ್ಲಂಘನೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ನಕಲಿ ಜಾಮೀನುದಾರರು ಪತ್ತೆಯಾದದ್ದು ಜಾಮೀನು ನಿರಾಕರಣೆಗೆ ಪ್ರಮುಖ ಕಾರಣವಾಗಿದೆ. ಕಾನೂನಿಗೆ ಗೌರವವಿಲ್ಲದ ಇವರ ವರ್ತನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾನೂನಿನ ಬಗ್ಗೆ ಗೌರವವೇ ಇಲ್ಲ: ಸೌರವ್ ದಾಸ್, ಅಶುತೋಷ್ ರಂಕಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದಕ್ಕೆ ಕಾರಣಗಳು ಇಲ್ಲಿವೆ
ರಾಂಕಾ, ಸೌರವ್
ನಯನಾ ರಾಜೀವ್
|

Updated on: Oct 20, 2026 | 8:04 AM

Share

ನವದೆಹಲಿ, ಅಕ್ಟೋಬರ್ 20: ಸಾರ್ವಜನಿಕ ಶಾಂತಿ ಕದಡುವ ಆತಂಕ ಹಾಗೂ ನಿಯಮಗಳ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಕಾಕ್ರೋಚ್ ಜನತಾ ಪಾರ್ಟಿಯ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರ ನ್ಯಾಯಾಂಗ ಬಂಧನವನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಕ್ಟೋಬರ್ 21, 2026 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

ಅಕ್ಟೋಬರ್ 11 ರಂದು ನೈಋತ್ಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಎದುರು ಸಲ್ಲಿಸಲಾಗಿದ್ದ ಮುಚ್ಚಳಿಕೆ ಪತ್ರಗಳನ್ನು ಇಬ್ಬರೂ ಆರೋಪಿಗಳು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿ, ಸಾರ್ವಜನಿಕ ಶಾಂತಿಗೆ ತಕ್ಷಣವೇ ಭಂಗ ತಂದಿದ್ದಾರೆ ಎಂದು ನ್ಯಾಯಾಲಯದ ಆದೇಶದ ಪ್ರತಿ ಸ್ಪಷ್ಟಪಡಿಸಿದೆ. ಪ್ರತಿವಾದಿಗಳ ವರ್ತನೆಯು ಕಾನೂನಿನ ಚೌಕಟ್ಟನ್ನು ಮೀರಿದ್ದು ಹಾಗೂ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವವಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಮ್ಯಾಜಿಸ್ಟ್ರೇಟ್ ಕಟುವಾಗಿ ಅಭಿಪ್ರಾಯಪಟ್ಟಿದ್ದಾರೆ.

ಅಪರಾಧ ಪುನರಾವರ್ತನೆಯ ಭೀತಿ: ಪ್ರತಿಭಟನೆಗೆ ಅನುಮತಿ ಇಲ್ಲದ ನಿರ್ಬಂಧಿತ ಪ್ರದೇಶಗಳಲ್ಲೇ ಗುಂಪು ಸೇರಿಸಿ ಪ್ರತಿಭಟಿಸುವ ಚಾಳಿ ಇವರಲ್ಲಿದೆ. ತನಿಖಾಧಿಕಾರಿ (IO) ಸಲ್ಲಿಸಿರುವ ದಾಖಲೆಗಳ ಪ್ರಕಾರ, ಇವರು ಹೊರಬಂದರೆ ಮತ್ತೆ ಕಾನೂನು ಉಲ್ಲಂಘಿಸುವುದಿಲ್ಲ ಎಂಬ ಭರವಸೆಯ ಮೇಲೆ ನ್ಯಾಯಾಲಯಕ್ಕೆ ಯಾವುದೇ ನಂಬಿಕೆ ಉಳಿದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಶಾಂತಿ ಕದಡುವ ಸಾಧ್ಯತೆ: ತನಿಖಾಧಿಕಾರಿ ಮಂಡಿಸಿದ ವಾದ ಮತ್ತು ಸಾಕ್ಷ್ಯಗಳು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿರುವುದನ್ನು ಪುಷ್ಟೀಕರಿಸಿವೆ. ತಮ್ಮ ವಾದವನ್ನು ಎರಡು ದಿನಗಳೊಳಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಆರೋಪಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಜಾಮೀನು ತಿರಸ್ಕೃತಿಗೆ ‘ಶ್ಯೂರಿಟಿ’ (ಜಾಮೀನುದಾರರ) ಎಡವಟ್ಟು ಪ್ರಮುಖ ಕಾರಣ

ವಿಚಾರಣೆ ವೇಳೆ ನಾಯಕರ ಪರವಾಗಿ ಹಾಜರುಪಡಿಸಲಾದ ಜಾಮೀನುದಾರರು ಸಂಪೂರ್ಣ ಅನರ್ಹರು ಎಂದು ಮ್ಯಾಜಿಸ್ಟ್ರೇಟ್ ಪತ್ತೆಹಚ್ಚಿದ್ದಾರೆ. ಜಾಮೀನು ಬಾಂಡ್‌ನಲ್ಲಿದ್ದ ವ್ಯಕ್ತಿಯ ಫೋಟೋಗೂ, ಆತ ನೀಡಿದ ಆಧಾರ್ ಕಾರ್ಡ್‌ನ ಫೋಟೋಗೂ ಯಾವುದೇ ಸ್ಪಷ್ಟ ಹೋಲಿಕೆ ಇರಲಿಲ್ಲ. ಬೇರೆ ಯಾವುದೇ ಅಧಿಕೃತ ಗುರುತಿನ ಚೀಟಿ ನೀಡಲು ಜಾಮೀನುದಾರ ವಿಫಲನಾಗಿದ್ದು, ಮ್ಯಾಜಿಸ್ಟ್ರೇಟ್ ಕೇಳಿದ ಪ್ರಶ್ನೆಗಳಿಗೆ ಅಸ್ಪಷ್ಟ ಉತ್ತರ ನೀಡಿದ್ದಾನೆ.

ಮೂಲಭೂತ ವಿವರಗಳ ಅರಿವಿಲ್ಲ: ಸೌರವ್ ದಾಸ್ ಪರ ಜಾಮೀನುದಾರನಾಗಿ ನಿಂತಿದ್ದರೂ, ದಾಸ್ ಅವರ ಪೋಷಕರ ಹೆಸರು ಮತ್ತು ವಿಳಾಸದಂತಹ ಕನಿಷ್ಠ ವಿವರಗಳೂ ಆತನಿಗೆ ತಿಳಿದಿರಲಿಲ್ಲ. ಜಾಮೀನುದಾರರಿಗೆ ಆರೋಪಿಗಳ ಮೇಲೆ ಯಾವುದೇ ನಿಯಂತ್ರಣವಿಲ್ಲದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಹಳೆಯ ಶ್ಯೂರಿಟಿಗಳನ್ನು ತಿರಸ್ಕರಿಸಿ ಹೊಸದಾಗಿ ಮಾನ್ಯ ಜಾಮೀನುದಾರರನ್ನು ಹಾಜರುಪಡಿಸಲು ನ್ಯಾಯಾಲಯ ಸೂಚಿಸಿದೆ.

ಆರೋಪಿಗಳ ಪರ ವಕೀಲರ ವಾದವೇನು? ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಪರ ವಾದ ಮಂಡಿಸಿದ ವಕೀಲರು, ತಮ್ಮ ಕಕ್ಷಿದಾರರು ಅಕ್ಟೋಬರ್ 10 ರ ನಂತರ ಯಾವುದೇ ಪ್ರತಿಭಟನೆಗೆ ಕರೆ ನೀಡಿಲ್ಲ. ಇಬ್ಬರೂ ಪ್ರತ್ಯೇಕವಾಗಿಯೇ ಜಂತರ್ ಮಂತರ್‌ಗೆ ತೆರಳಿದ್ದರು. ಅವರು ಯಾವುದೇ ಅಪರಾಧವನ್ನು ಪುನರಾವರ್ತಿಸುವುದಿಲ್ಲವಾದ್ದರಿಂದ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೋರಿದರು. ಆದರೆ ಈ ವಾದವನ್ನು ಮ್ಯಾಜಿಸ್ಟ್ರೇಟ್ ಒಪ್ಪಲಿಲ್ಲ.

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಜಂತರ್ ಮಂತರ್‌ನ ಮುಚ್ಚಿದ ಬ್ಯಾರಿಕೇಡ್‌ಗಳನ್ನು ದಾಟಿ ನುಗ್ಗಿದ ಆರೋಪದ ಮೇಲೆ ಅಕ್ಟೋಬರ್ 13 ರಂದು ಇಬ್ಬರನ್ನೂ ದೆಹಲಿ ಪೊಲೀಸರು ಬಂಧಿಸಿದ್ದರು. ಇಬ್ಬರೂ ಸದ್ಯ ತಿಹಾರ್ ಜೈಲಿನಲ್ಲಿದ್ದು, ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ 21, 2026 ರಂದು ನಡೆಯಲಿದೆ. ಅಂದು ಹೊಸ ಹಾಗೂ ವಿಶ್ವಾಸಾರ್ಹ ಜಾಮೀನುದಾರರನ್ನು ಹಾಜರುಪಡಿಸಿದರೆ ಮಾತ್ರ ಅವರ ಜಾಮೀನು ಅರ್ಜಿಯನ್ನು ಮರುಪರಿಶೀಲಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 5 ಕೆಜಿ ಡ್ರಗ್ಸ್ ವಶ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 5 ಕೆಜಿ ಡ್ರಗ್ಸ್ ವಶ
ಇಂದು ಈ ರಾಶಿಯವರಿಗೆ ಹಳೆಯ ಸ್ನೇಹಿತರ ಭೇಟಿಯ ಅವಕಾಶ
ಇಂದು ಈ ರಾಶಿಯವರಿಗೆ ಹಳೆಯ ಸ್ನೇಹಿತರ ಭೇಟಿಯ ಅವಕಾಶ
ಎಣ್ಣೆ ಪಾರ್ಟಿ ಮೆಲುಕು ಹಾಕಿ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದು
ಎಣ್ಣೆ ಪಾರ್ಟಿ ಮೆಲುಕು ಹಾಕಿ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದು
ಕನ್ನಡಿಗರ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಕರವೇ ನಾರಾಯಣ ಗೌಡ ಪ್ರತಿಕ್ರಿಯೆ
ಕನ್ನಡಿಗರ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಕರವೇ ನಾರಾಯಣ ಗೌಡ ಪ್ರತಿಕ್ರಿಯೆ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ