AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ದಿನದ ಜೈಲುವಾಸಕ್ಕೆ ಮುಕ್ತಿ; ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ ಜಾಮೀನು ಮಂಜೂರು

ಪ್ರತಿಭಟನಾ ಸ್ಥಳದ ಪಟ್ಟಿಯಿಂದ ತೆಗೆದುಹಾಕಲಾಗಿರುವ ಜಂತರ್ ಮಂತರ್ ಪ್ರವೇಶಿಸಿ ರಾಷ್ಟ್ರಧ್ವಜ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 14ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಬಿಡುಗಡೆ ಮಾಡುವಂತೆ ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ. ದೆಹಲಿ ಪೊಲೀಸರು ಸೌರವ್ ದಾಸ್ ಮತ್ತು ಅಶುತೋಶ್ ರಾಂಕಾ ಅವರ ಬಂಧನ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸುವಂತೆ ಕೋರಿದ್ದರಾದರೂ, ಎಸ್‌ಇಎಂ ನ್ಯಾಯಾಲಯವು ಅವರ ಮನವಿಯನ್ನು ಪುರಸ್ಕರಿಸದೆ ಇಬ್ಬರೂ ನಾಯಕರನ್ನು ಬಿಡುಗಡೆ ಮಾಡಲು ಆದೇಶಿಸಿತು.

7 ದಿನದ ಜೈಲುವಾಸಕ್ಕೆ ಮುಕ್ತಿ; ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ ಜಾಮೀನು ಮಂಜೂರು
ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾImage Credit source: PTI
ಸುಷ್ಮಾ ಚಕ್ರೆ
|

Updated on: Oct 21, 2026 | 7:19 PM

Share

ನವದೆಹಲಿ, ಅಕ್ಟೋಬರ್ 21: ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ 7 ದಿನಗಳ ನ್ಯಾಯಾಂಗ ಬಂಧನದ ನಂತರ ಜಾಮೀನು ಮಂಜೂರಾಗಿದೆ. ಇಂದು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಎದುರು ಇಬ್ಬರನ್ನೂ ಹಾಜರುಪಡಿಸಿದ ಬಳಿಕ ಈ ಆದೇಶ ಹೊರಬಿದ್ದಿದೆ. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಮೊದಲಿಗೆ ಆದೇಶವನ್ನು ಕಾಯ್ದಿರಿಸಿ ನಂತರ ಅಂತಿಮ ತೀರ್ಪು ಪ್ರಕಟಿಸಿದರು. ಆದರೆ, ದಾಖಲೆಗಳ ಪ್ರಕ್ರಿಯೆ ಬಾಕಿ ಇರುವ ಕಾರಣದಿಂದ ಇಂದೇ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಇದೆ. ದೆಹಲಿ ಪೊಲೀಸರು ಅವರಿಬ್ಬರ ನ್ಯಾಯಾಂಗ ಬಂಧನವನ್ನು 3 ದಿನಗಳ ಕಾಲ ವಿಸ್ತರಿಸುವಂತೆ ಕೋರಿದ್ದರಾದರೂ, ನ್ಯಾಯಾಲಯವು ಇಬ್ಬರನ್ನೂ ಬಿಡುಗಡೆ ಮಾಡಲು ಆದೇಶಿಸಿತು.

ಸೌರವ್ ದಾಸ್ ಮತ್ತು ಅಶುತೋಶ್ ರಾಂಕಾ ಅವರ ಬಂಧನದಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವು ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಹೈಕೋರ್ಟ್ ಅರ್ಜಿದಾರರಿಗೆ ಎಸ್‌ಇಎಂ ನಿರ್ಧಾರಕ್ಕಾಗಿ ಕಾಯುವಂತೆ ಮತ್ತು ತಮ್ಮ ಕುಂದುಕೊರತೆಗಳು ಪರಿಹಾರವಾಗದಿದ್ದರೆ ಮೇಲ್ಮನವಿ ನ್ಯಾಯಾಲಯವನ್ನು ಸಂಪರ್ಕಿಸುವಂತೆ ತಿಳಿಸಿತ್ತು.

ಇದನ್ನೂ ಓದಿ: ನೀವೇನು ಜೆನ್​-ಝಿಗಳಲ್ಲ, ನಿಮ್ಮ ಅಸಲಿ ಉದ್ದೇಶವೇನು? ಸಿಜೆಪಿ ನಾಯಕರಿಗೆ ದೆಹಲಿ ಹೈಕೋರ್ಟ್ ತಪರಾಕಿ

ನಿಷೇಧಿತ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್‌ನಲ್ಲಿ ಶಾಂತಿ ಬಾಂಡ್ ಉಲ್ಲಂಘಿಸಿ ರಾಷ್ಟ್ರಧ್ವಜ ಪ್ರದರ್ಶಿಸಿದ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಅಕ್ಟೋಬರ್ 13ರಂದು ಇಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು. ಅಕ್ಟೋಬರ್ 14ರಂದು ಅವರನ್ನು ಜೈಲಿಗೆ ಹಾಕಲಾಗಿತ್ತು.

ಬಂಧನದ ಅವಧಿ ವಿಸ್ತರಣೆಯಾಗಿದ್ದು ಹೇಗೆ?

ಅಕ್ಟೋಬರ್ 13ರಂದು ವಶಕ್ಕೆ ಪಡೆಯಲಾದ ಸೌರವ್ ದಾಸ್ ಮತ್ತು ಅಶುತೋಶ್ ರಾಂಕಾ ಅವರನ್ನು ಅಕ್ಟೋಬರ್ 14ರಂದು ಆರಂಭದಲ್ಲಿ 5 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ನಂತರ ಅಕ್ಟೋಬರ್ 19ರಂದು ಅವರ ಬಂಧನದ ಅವಧಿಯನ್ನು ಮತ್ತೂ 2 ದಿನಗಳ ಕಾಲ ವಿಸ್ತರಿಸಲಾಗಿತ್ತು. ಈ ಅವಧಿಯು ಬುಧವಾರಕ್ಕೆ ಮುಕ್ತಾಯಗೊಳ್ಳುತ್ತಿತ್ತು.

ಹೈಕೋರ್ಟ್ ನಿರ್ದೇಶನ:

ತಮ್ಮ ನ್ಯಾಯಾಂಗ ಬಂಧನವನ್ನು ಪ್ರಶ್ನಿಸಿ ಇಬ್ಬರೂ ನಾಯಕರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರೂ, ಹೈಕೋರ್ಟ್ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಮ್ಯಾಜಿಸ್ಟ್ರೇಟ್ ನಿರ್ಧಾರಕ್ಕೆ ಕಾಯುವಂತೆ ಸೂಚಿಸಿತ್ತು. ನಂತರ ನಡೆದ ವಿಚಾರಣೆಯಲ್ಲಿ ಎಸ್‌ಇಎಂ ಇಬ್ಬರಿಗೂ ಜಾಮೀನು ನೀಡಿ ಬಿಡುಗಡೆಗೆ ಆದೇಶಿಸಿದೆ.

ಇದನ್ನೂ ಓದಿ: ಸಿಜೆಪಿ ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ ನ್ಯಾಯಾಂಗ ಬಂಧನ ಅವಧಿ 2 ದಿನ ವಿಸ್ತರಣೆ

ಬುಧವಾರ ಪ್ರಕರಣದ ಪರಿಶೀಲನೆ ನಡೆಸಲು ನಿಗದಿಯಾಗಿದ್ದ ಎಸ್‌ಇಎಂ ಎದುರು ಮೊದಲಿಗೆ ಕಲಾಪವನ್ನು ಮುಂದುವರಿಸುವಂತೆ ಹೈಕೋರ್ಟ್ ಸಿಜೆಪಿ ಸಹ-ಸಂಚಾಲಕರಿಗೆ ತಿಳಿಸಿತ್ತು. ಮ್ಯಾಜಿಸ್ಟ್ರೇಟ್ ನಿರ್ಧಾರದ ನಂತರವೂ ಸಮಸ್ಯೆಗಳಿದ್ದರೆ ಮೇಲ್ಮನವಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದೂ ಸುಳಿವು ನೀಡಿತ್ತು. ದಸರಾ ರಜೆಯ ಕಾರಣ ಹೈಕೋರ್ಟ್ ಮುಚ್ಚಲ್ಪಟ್ಟಿದ್ದರೂ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆಗೆ ತೆಗೆದುಕೊಳ್ಳಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ