AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್ ಮಂತರ್ ಸ್ವಚ್ಛತೆಗೆ 500ಕ್ಕೂ ಹೆಚ್ಚು ಎನ್‌ಡಿಎಂಸಿ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆ ಅಂತ್ಯಗೊಂಡ ನಂತರ, ನವದೆಹಲಿಯ ಜಂತರ್ ಮಂತರ್ ಪ್ರದೇಶವನ್ನು ಸ್ವಚ್ಛಗೊಳಿಸಲು ಎನ್‌ಡಿಎಂಸಿ ಬೃಹತ್ ಅಭಿಯಾನ ಆರಂಭಿಸಿದೆ. 500ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರನ್ನು ನಿಯೋಜಿಸಲಾಗಿದ್ದು, ತ್ಯಾಜ್ಯ, ಬ್ಯಾನರ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಕನ್ನಾಟ್ ಪ್ಲೇಸ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸ್ವಚ್ಛತಾ ಕಾರ್ಯ ತೀವ್ರಗೊಳಿಸಲಾಗಿದೆ.

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್ ಮಂತರ್ ಸ್ವಚ್ಛತೆಗೆ 500ಕ್ಕೂ ಹೆಚ್ಚು ಎನ್‌ಡಿಎಂಸಿ ಸಿಬ್ಬಂದಿ ನಿಯೋಜನೆ
CJP
ನಯನಾ ರಾಜೀವ್
|

Updated on: Jul 26, 2026 | 10:55 AM

Share

ನವದೆಹಲಿ, ಜುಲೈ 26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರ ರಾಜೀನಾಮೆ ಹಾಗೂ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ನಡೆಸುತ್ತಿದ್ದ ವಾರಗಳ ಕಾಲದ ಆಂದೋಲನ ಮುಕ್ತಾಯಗೊಂಡಿದೆ. ಪ್ರತಿಭಟನೆ ಹಿಂತೆಗೆದುಕೊಂಡ ಬೆನ್ನಲ್ಲೇ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲು ಬೃಹತ್ ನೈರ್ಮಲ್ಯ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

ಪ್ರತಿಭಟನಾ ಸ್ಥಳದಲ್ಲಿ ಹರಿದು ಬಿದ್ದಿರುವ ತ್ಯಾಜ್ಯ, ಬ್ಯಾನರ್‌ಗಳು, ತಾತ್ಕಾಲಿಕ ಟೆಂಟ್‌ಗಳು ಹಾಗೂ ನಿರ್ಮಾಣ ಭಗ್ನಾವಶೇಷಗಳನ್ನು ತೆರವುಗೊಳಿಸಲು ಎನ್​ಡಿಎಂಸಿ 500ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರನ್ನು ನಿಯೋಜಿಸಿದೆ. ಪ್ರದೇಶವನ್ನು ಶೀಘ್ರವೇ ಯಥಾಸ್ಥಿತಿಗೆ ತರಲು ಸಿಬ್ಬಂದಿ ದಿನದ 24 ಗಂಟೆಯೂ ಬಹು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ವಚ್ಛತಾ ಕಾರ್ಯವನ್ನು ವೇಗಗೊಳಿಸಲು ಟ್ರಕ್‌ಗಳು, ಆಟೋ-ಟಿಪ್ಪರ್‌ಗಳು ಹಾಗೂ ಯಾಂತ್ರಿಕೃತ ಗಾಬ್ಲರ್ ಯಂತ್ರಗಳನ್ನು ಬಳಸಲಾಗುತ್ತಿದೆ. ಕೇವಲ ಜಂತರ್ ಮಂತರ್ ಅಷ್ಟೇ ಅಲ್ಲದೆ, ಪ್ರತಿಭಟನೆಯಿಂದಾಗಿ ಭಾರೀ ಜನದಟ್ಟಣೆ ಕಂಡಿದ್ದ ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಮತ್ತು ಕನ್ನಾಟ್ ಪ್ಲೇಸ್‌ನ ಪ್ರಮುಖ ಭಾಗಗಳಲ್ಲೂ ನೈರ್ಮಲ್ಯ ಅಭಿಯಾನ ಬಿರುಸಿನಿಂದ ಸಾಗಿದೆ.

ಮತ್ತಷ್ಟು ಓದಿ: ಈ ಹಿಂದೆ ಪೇಪರ್ ಲೀಕ್ ವಿರುದ್ಧ ಹೋರಾಟ; ಈಗ ನೀಟ್​​​​​​ ಪ್ರಶ್ನೆ ಪತ್ರಿಕೆ ಸೋರಿಕೆಗೆ ರಾಜೀನಾಮೆ; ಯಾರೀ ಧರ್ಮೇಂದ್ರ ಪ್ರಧಾನ್?

ಕಳೆದ ಎರಡು ದಿನಗಳಲ್ಲಿ ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಇಡೀ ಪ್ರದೇಶವು ಸಂಪೂರ್ಣವಾಗಿ ಸ್ವಚ್ಛಗೊಳ್ಳುವವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಎನ್‌ಡಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಿವಾಸಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಉಂಟಾಗಿದ್ದ ಅಡಚಣೆಯನ್ನು ನಿವಾರಿಸಲು ಹೆದ್ದಾರಿ ಸಾರಿಗೆ ಮತ್ತು ಸಂಚಾರ ಪೊಲೀಸರು ಸ್ಥಳದಲ್ಲಿದ್ದು ಸಹಕರಿಸುತ್ತಿದ್ದಾರೆ. ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರ ಬಳಕೆಗೆ ಯಥಾಸ್ಥಿತಿಯಲ್ಲಿ ಮುಕ್ತಗೊಳಿಸುವವರೆಗೆ ಈ ಅಭಿಯಾನ ಮುಂದುವರೆಯಲಿದೆ ಎಂದು ಎನ್‌ಡಿಎಂಸಿ ಸ್ಪಷ್ಟಪಡಿಸಿದೆ.

ವಿಡಿಯೋ

ಎನ್‌ಡಿಎಂಸಿ ಅಧಿಕಾರಿಗಳ ಪ್ರಕಾರ, ಕಾರ್ಯಾಚರಣೆಯನ್ನು ವೇಗಗೊಳಿಸಲು ಟ್ರಕ್‌ಗಳು, ಆಟೋ-ಟಿಪ್ಪರ್‌ಗಳು ಹಾಗೂ ಯಾಂತ್ರಿಕೃತ ಗಾಬ್ಲರ್ ಯಂತ್ರಗಳು ಬಂದಿವೆ . ಸಿವಿಲ್ ಎಂಜಿನಿಯರಿಂಗ್ ವಿಭಾಗದ ಹೆಚ್ಚುವರಿ ಸಿಬ್ಬಂದಿ ಸಹ ಶ್ರಮಿಸುತ್ತಿದ್ದು, ದಿನದ 24 ಗಂಟೆಯೂ ಮೂರು ಪಾಳಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಜಂತರ್ ಮಂತರ್ ರಸ್ತೆ ಸೇರಿದಂತೆ ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಮತ್ತು ಕನ್ನಾಟ್ ಪ್ಲೇಸ್‌ನ ಸುತ್ತಮುತ್ತಲಿನ ಪ್ರದೇಶಗಳಲ್ಲೂ ನೈರ್ಮಲ್ಯ ಕಾರ್ಯ ಬಿರುಸಿನಿಂದ ಸಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!