AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ; ಜ್ಞಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ 3 ಬೇಡಿಕೆಗಳನ್ನಿಟ್ಟ ಸಿಜೆಪಿ

ನಾಳೆ (ಅಕ್ಟೋಬರ್ 2) ಮುಂಬೈನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ನಡೆಸಲಿದೆ. ಶಿವಾಜಿ ಪಾರ್ಕ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಲು ಸಿಜೆಪಿ ಯೋಜಿಸಿತ್ತು. ಆದರೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದರು. ಇದರ ನಂತರ, ಪಕ್ಷವು "ಜೈಲ್ ಭರೋ" ಚಳುವಳಿಯನ್ನು ಘೋಷಿಸಿದೆ. ಸಿಜೆಪಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

ನಾಳೆ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ; ಜ್ಞಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ 3 ಬೇಡಿಕೆಗಳನ್ನಿಟ್ಟ ಸಿಜೆಪಿ
ಜ್ಞಾನೇಶ್ ಕುಮಾರ್Image Credit source: TV9
ಸುಷ್ಮಾ ಚಕ್ರೆ
|

Updated on: Oct 01, 2026 | 9:56 PM

Share

ಮುಂಬೈ, ಅಕ್ಟೋಬರ್ 1: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಅಕ್ಟೋಬರ್ 2ರಂದು (ನಾಳೆ) ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಭಾರತೀಯ ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಮಾಧ್ಯಮ ವರದಿಗಳು ಹೊರಬಿದ್ದ ಬೆನ್ನಲ್ಲೇ ಈ ಪ್ರತಿಭಟನೆಯನ್ನು ಘೋಷಿಸಲಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂಬ ಪ್ರಮುಖ ಆಗ್ರಹದ ಜೊತೆಗೆ, ಸಿಜೆಪಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಮತ್ತಷ್ಟು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

ಸಿಜೆಪಿಯ ಪ್ರಮುಖ ಬೇಡಿಕೆಗಳು:

  • ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನುಬದ್ಧ ಅಪರಾಧಿಕ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು.
  • ಪ್ರಸ್ತುತ ನಡೆಯುತ್ತಿರುವ ಎಸ್​ಐಆರ್​ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಮತ್ತು ಜನವರಿ 2025ರ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು.
  • ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ 2023ರ ಚುನಾವಣಾ ಆಯೋಗದ ಕಾಯ್ದೆಯನ್ನು ರದ್ದುಗೊಳಿಸಬೇಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕ ಸುಧಾರಣೆಗಳನ್ನು ತರಬೇಕು.

ಇದನ್ನೂ ಓದಿ: ಜ್ಞಾನೇಶ್ ಕುಮಾರ್ ವಿವಾದ: ರಾಹುಲ್ ಗಾಂಧಿಗೆ ತಿರುಗೇಟು ನೀಡಲು ಬಿಜೆಪಿಯ 12 ಮುಖ್ಯಮಂತ್ರಿಗಳ ಅಖಾಡ ಪ್ರವೇಶ

ಚುನಾವಣಾ ಆಯೋಗದ ಸ್ಪಷ್ಟನೆ:

ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯೋಗವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಜೆಪಿ ಆರೋಪಿಸಿದೆ. ಆದರೆ, ಆಯೋಗದಲ್ಲಿ ಆಂತರಿಕ ಬಿಕ್ಕಟ್ಟಿದೆ ಎಂಬ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಚುನಾವಣಾ ಆಯೋಗವು ಎಸ್‍ಐಆರ್ ಸೇರಿದಂತೆ ತನ್ನ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಮೂವರೂ ಚುನಾವಣಾ ಆಯುಕ್ತರ ಒಮ್ಮತದ ಒಪ್ಪಿಗೆಯೊಂದಿಗೇ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ