
ಮುಂಬೈ, ಅಕ್ಟೋಬರ್ 1: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಅಕ್ಟೋಬರ್ 2ರಂದು (ನಾಳೆ) ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಭಾರತೀಯ ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಮಾಧ್ಯಮ ವರದಿಗಳು ಹೊರಬಿದ್ದ ಬೆನ್ನಲ್ಲೇ ಈ ಪ್ರತಿಭಟನೆಯನ್ನು ಘೋಷಿಸಲಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂಬ ಪ್ರಮುಖ ಆಗ್ರಹದ ಜೊತೆಗೆ, ಸಿಜೆಪಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಮತ್ತಷ್ಟು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.
ಸಿಜೆಪಿಯ ಪ್ರಮುಖ ಬೇಡಿಕೆಗಳು:
ಇದನ್ನೂ ಓದಿ: ಜ್ಞಾನೇಶ್ ಕುಮಾರ್ ವಿವಾದ: ರಾಹುಲ್ ಗಾಂಧಿಗೆ ತಿರುಗೇಟು ನೀಡಲು ಬಿಜೆಪಿಯ 12 ಮುಖ್ಯಮಂತ್ರಿಗಳ ಅಖಾಡ ಪ್ರವೇಶ
ಚುನಾವಣಾ ಆಯೋಗದ ಸ್ಪಷ್ಟನೆ:
ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯೋಗವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಜೆಪಿ ಆರೋಪಿಸಿದೆ. ಆದರೆ, ಆಯೋಗದಲ್ಲಿ ಆಂತರಿಕ ಬಿಕ್ಕಟ್ಟಿದೆ ಎಂಬ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಚುನಾವಣಾ ಆಯೋಗವು ಎಸ್ಐಆರ್ ಸೇರಿದಂತೆ ತನ್ನ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಮೂವರೂ ಚುನಾವಣಾ ಆಯುಕ್ತರ ಒಮ್ಮತದ ಒಪ್ಪಿಗೆಯೊಂದಿಗೇ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ