ಬಿಹಾರದ SIR ಕುರಿತು ಸೆ. 30ರ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನೂ ಪರಿಗಣಿಸುತ್ತೇವೆ; ಸುಪ್ರೀಂ ಕೋರ್ಟ್​ಗೆ ಚುನಾವಣಾ ಆಯೋಗ ಮಾಹಿತಿ

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸೆಪ್ಟೆಂಬರ್ 30ರ ನಂತರ ಸಲ್ಲಿಸಿದರೂ ಅದನ್ನು ಪರಿಗಣಿಸಲಾಗುವುದು ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದೆ. ಚುನಾವಣಾ ಆಯೋಗ ಪ್ರಕಟಿಸಿದ ಕರಡು ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 1ರ ಗಡುವನ್ನು ವಿಸ್ತರಿಸುವಂತೆ ಕೋರಿ ರಾಜ್ಯದ ರಾಜಕೀಯ ನಾಯಕರು ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಬಿಹಾರದ SIR ಕುರಿತು ಸೆ. 30ರ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನೂ ಪರಿಗಣಿಸುತ್ತೇವೆ; ಸುಪ್ರೀಂ ಕೋರ್ಟ್​ಗೆ ಚುನಾವಣಾ ಆಯೋಗ ಮಾಹಿತಿ
Supreme Court

Updated on: Sep 01, 2025 | 4:53 PM

ನವದೆಹಲಿ, ಸೆಪ್ಟೆಂಬರ್ 1: ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತ ಗೊಂದಲವು ವಿಶ್ವಾಸದ ಸಮಸ್ಯೆಯಾಗಿದ್ದು, ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ತಮ್ಮನ್ನು ತಾವು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಸೂಚಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಚುನಾವಣಾ ಆಯೋಗ ಪ್ರಕಟಿಸಿದ ಕರಡು ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 1ರ ಗಡುವನ್ನು ವಿಸ್ತರಿಸುವಂತೆ ಕೋರಿ ಬಿಹಾರದ ರಾಜಕೀಯ ನಾಯಕರು ಸಲ್ಲಿಸಿದ ಅರ್ಜಿಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದೆ.

ಇಂದಿನ (ಸೆಪ್ಟೆಂಬರ್ 1) ಗಡುವಿನ ನಂತರವೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಮತ್ತು ಪಟ್ಟಿಯನ್ನು ಅಂತಿಮಗೊಳಿಸಿದ ನಂತರವೂ ಅವುಗಳನ್ನು ಪರಿಗಣಿಸಲಾಗುವುದು ಎಂಬ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್​ಗೆ ಹೇಳಿದೆ. ಚುನಾವಣಾ ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಸೆಪ್ಟೆಂಬರ್ 1ರ ನಂತರವೂ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಯಾವುದೇ ಮಾನ್ಯ ಅರ್ಜಿಗಳನ್ನು ಮತದಾರರ ಪಟ್ಟಿಗಳನ್ನು ಅಂತಿಮಗೊಳಿಸುವವರೆಗೆ ಅದನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಮತದಾರರಿಗೆ ಆಧಾರ್ ಅಥವಾ 11 ದಾಖಲೆಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ; ರಾಜಕೀಯ ಪಕ್ಷಗಳ ಬಗ್ಗೆ ಅಸಮಾಧಾನ

ಸೆಪ್ಟೆಂಬರ್ 30ರ ನಂತರವೂ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಪರಿಷ್ಕರಣೆಗಳು ಮುಂದುವರಿಯುತ್ತವೆ ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ ಎಂದು ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಗಮನಿಸಿತು. “ಸಮಯ ವಿಸ್ತರಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 1ರ ನಂತರ ಆಕ್ಷೇಪಣೆಗಳು ಅಥವಾ ತಿದ್ದುಪಡಿಗಳನ್ನು ಸಲ್ಲಿಸುವುದನ್ನು ನಿಷೇಧಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಗಡುವಿನ ನಂತರವೂ ಅಂದರೆ ಸೆಪ್ಟೆಂಬರ್ 1ರ ನಂತರವೂ ಆಕ್ಷೇಪಣೆಗಳು ಅಥವಾ ತಿದ್ದುಪಡಿಗಳನ್ನು ಸಲ್ಲಿಸಬಹುದು ಮತ್ತು ಪಟ್ಟಿಯನ್ನು ಅಂತಿಮಗೊಳಿಸಿದ ನಂತರವೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ

ಬಿಹಾರದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾದ 2.74 ಕೋಟಿ ಮತದಾರರಲ್ಲಿ ಶೇ. 99.5ರಷ್ಟು ಜನರು ಈಗಾಗಲೇ ತಮ್ಮ ಅರ್ಹತಾ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅಪೂರ್ಣ ದಾಖಲೆಗಳನ್ನು ಹೊಂದಿರುವ ಉಳಿದ ಮತದಾರರಿಗೆ 7 ದಿನಗಳಲ್ಲಿ ನೋಟಿಸ್ ನೀಡಲಾಗುತ್ತಿದೆ.

ಆಧಾರ್‌ನಿಂದ ಬೆಂಬಲಿತವಾದ ಹಕ್ಕುಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ ಎಂದು ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ವಾದಿಸಿದರು. ಆದರೆ, 11 ಮಾನ್ಯತೆ ಪಡೆದ ದಾಖಲೆಗಳಲ್ಲಿ ಆಧಾರ್ ಅನ್ನು ಕೂಡ ಸ್ವೀಕರಿಸಬೇಕು ಎಂದು ಕೋರ್ಟ್ ಪುನರುಚ್ಚರಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ