ಪಂಜಾಬ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ಗಳ ಘರ್ಷಣೆ; ಸಿಧು ಮೂಸೆವಾಲ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಸಾವು

ಪಂಜಾಬ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ಗಳು ಪರಸ್ಪರ ಹೊಡೆದಾಡಿಕೊಂಡಿದ್ದು ಇಬ್ಬರು ಕೈದಿಗಳು ಸಾವಿಗೀಡಾಗಿದ್ದಾರೆ. ಘರ್ಷಣೆಯಲ್ಲಿ ಸಾವಿಗೀಡಾದ ಕೈದಿಗಳು ಸಿಧು ಮೂಸೆವಾಲ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದಾರೆ.

ಪಂಜಾಬ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ಗಳ ಘರ್ಷಣೆ; ಸಿಧು ಮೂಸೆವಾಲ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಸಾವು
ಸಿಧು ಮೂಸೆವಾಲ
Follow us
ರಶ್ಮಿ ಕಲ್ಲಕಟ್ಟ
|

Updated on:Feb 26, 2023 | 6:51 PM

ಪಂಜಾಬ್‌ನ (Punjab) ಗೋಯಿಂಡ್ವಾಲ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ಗಳ ಗುಂಪುಗಳ ನಡುವೆ ನಡೆದ ಭಾರೀ ಘರ್ಷಣೆಯಲ್ಲಿ, ಸಿಧು ಮೂಸೆವಾಲ (Sidhu Moosewala) ಹತ್ಯೆಯ ಆರೋಪಿಗಳಾಗಿರುವ ಇಬ್ಬರು ಕೈದಿಗಳು ಭಾನುವಾರ ಸಾವನ್ನಪ್ಪಿದ್ದಾರೆ. ಮೃತರನ್ನು ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಬುಧಲಾನಾದ ಮನಮೋಹನ್ ಸಿಂಗ್ ಅಲಿಯಾಸ್ ಮೊಹ್ನಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಕೈದಿಯನ್ನು ಬಟಿಂಡಾದ ಕೇಶವ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಈತನನ್ನು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಮೂವರೂ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಮೂಸೆವಾಲಾ ಶೂಟರ್‌ಗಳಿಗೆ ವಾಹನ ಒದಗಿಸಿದ ಆರೋಪ ತೂಫಾನ್ ಮೇಲಿತ್ತು.

28 ವರ್ಷದ ಗಾಯಕ ಸಿಧು ಮೂಸೆವಾಲ ಅವರನ್ನು ಮೇ 29, 2022 ರಂದು ರಾಜ್ಯ ಸರ್ಕಾರವು ಅವರ ಭದ್ರತೆಯನ್ನು ಮೊಟಕುಗೊಳಿಸಿದ ಒಂದು ದಿನದ ನಂತರ ಗುಂಡಿಕ್ಕಿ ಕೊಲ್ಲಲಾಯಿತು. ಪಾಯಿಂಟ್-ಬ್ಲಾಂಕ್ ರೇಂಜ್ನಲ್ಲಿ ಗುಂಡು ಹಾರಿಸಿದ ಗಾಯಕನನ್ನು ಕೊಲೆ ಮಾಡಲಾಗಿತ್ತು.  ಮೂಸೆವಾಲ ಮೇಲೆ ದುಷ್ಕರ್ಮಿಗಳು 30 ಸುತ್ತು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವವರೆಲ್ಲರೂ ಒಂದಾಗಬೇಕು: ಪ್ರಿಯಾಂಕಾ ಗಾಂಧಿ

ಈ ಹತ್ಯೆಯ ಮಾಸ್ಟರ್ ಮೈಂಡ್ ಲಾರೆನ್ಸ್ ಬಿಷ್ಣೋಯ್ ಎಂದು ತನಿಖೆ ಸೂಚಿಸಿದೆ. ಆತ ಕೆನಡಾದಲ್ಲಿ ನೆಲೆಸಿದ್ದು, ಈತನ ಆಪ್ತ ಸಹಾಯಕ ಗೋಲ್ಡಿ ಬ್ರಾರ್ ಕೂಡ ಈ ಪ್ರಕರಣದಲ್ಲಿ ತನಿಖೆಗೊಳಗಾಗಿದ್ದ. ನವೆಂಬರ್ 23 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆಯು ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಯುವಕರನ್ನು ನೇಮಿಸಿಕೊಳ್ಳಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಷ್ಣೋಯ್ ನ್ನು ಬಂಧಿಸಲಾಗಿತ್ತು

ಅಮೃತಪಾಲ್ ಸಿಂಗ್ ಅವರು ಖಲಿಸ್ತಾನ್‌ಗಾಗಿ ಬೇಡಿಕೆಗಳನ್ನು ಸಲ್ಲಿಸುವುದರೊಂದಿಗೆ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯ ನಡುವೆ ಈ ಘಟನೆ ನಡೆದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭಾನುವಾರ ಪಂಜಾಬ್‌ನಲ್ಲಿ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sun, 26 February 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್