ದೆಹಲಿಯಲ್ಲಿ ಹನುಮಾನ್​ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ; ಹಿಂಸಾಚಾರದಲ್ಲಿ 6 ಪೊಲೀಸರಿಗೆ ಗಾಯ

ಗಲಭೆ ನಡೆದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ಪ್ರತಿಯೊಬ್ಬರೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಹನುಮಾನ್​ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ; ಹಿಂಸಾಚಾರದಲ್ಲಿ 6 ಪೊಲೀಸರಿಗೆ ಗಾಯ
ಧ್ವಂಸಗೊಂಡ ವಾಹನ (ಪಿಟಿಐ ಚಿತ್ರ)
Follow us
TV9 Web
| Updated By: Lakshmi Hegde

Updated on: Apr 17, 2022 | 8:14 AM

ದೆಹಲಿಯ ವಾಯುವ್ಯ ಭಾಗದಲ್ಲಿರುವ ಜಹಂಗೀರ್​ಪುರಿಯಲ್ಲಿ ಹನುಮಾನ್​ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ಶೋಭಾಯಾತ್ರೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದರಿಂದ ಎರಡು ಸಮುದಾಯಗಳ ಮಧ್ಯೆ ಘರ್ಷಣೆ ಉಂಟಾಗಿದೆ. ಸಂಜೆ ಸುಮಾರು 6ಗಂಟೆ ಹೊತ್ತಿಗೆ ನಡೆದ ಹಿಂಸಾಚಾರದಲ್ಲಿ ಒಂದಷ್ಟು ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಬಳಿಕ ಸ್ಥಳಕ್ಕೆ ದೆಹಲಿಯ ಹಿರಿಯ ಪೊಲೀಸ್​ ಅಧಿಕಾರಿಗಳು ಭೇಟಿ ಕೊಟ್ಟು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಘಟನೆಯಲ್ಲಿ ಆರು ಮಂದಿ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಒಬ್ಬರು ಸಬ್ ಇನ್​ಸ್ಪೆಕ್ಟರ್​ ಆಗಿದ್ದು, ಅವರ ಕೈಯಿಗೇ ಗುಂಡು ಹಾರಿಸಲಾಗಿದೆ. ಆದರೆ ಹಿಂಸಾಚಾರದಲ್ಲಿ ತೊಡಗಿಕೊಂಡಿರುವವರ ಮೇಲೆ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸಿಲ್ಲ, ನಾವು ಅಶ್ರುವಾಯು ಪ್ರಯೋಗ ಮಾಡಿದ್ದಷ್ಟೇ. ಹೀಗೆ ಪೊಲೀಸರ ಮೇಲೆ ದಾಳಿ ಮಾಡಿದ್ದು ಯಾರು ಎಂಬ ಗುರುತೂ ಸಿಕ್ಕಿಲ್ಲ. ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೀಪಕ್ ಪಾಠಕ್​ ತಿಳಿಸಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸ್ ಆಯುಕ್ತ ರಾಕೇಶ್​ ಆಸ್ತಾನಾ  ಮತ್ತು ವಿಶೇಷ ಆಯುಕ್ತ ದೀಪೇಂದ್ರ ಪಾಠಕ್​ ಬಳಿ ಮಾತನಾಡಿ, ವರದಿ ಕೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದೂ ಸೂಚಿಸಿದ್ದಾರೆ.  ಇನ್ನು ಗಲಾಟೆ ನಡೆದ ಜಹಂಗೀರ್​ಪುರಿ ಸುತ್ತಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜನರು ಶಾಂತಿಯಿಂದ ಇರಬೇಕು, ದಂಗೆಕೋರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್​ ಟ್ವೀಟ್ ಗಲಭೆ ನಡೆದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ಪ್ರತಿಯೊಬ್ಬರೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕು. ಕೇಂದ್ರ ಸರ್ಕಾರದ ಅಡಿಯಲ್ಲಿರುವ ಪೊಲೀಸ್ ತಂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.  ಹಾಗೇ, ಟ್ವೀಟ್ ಮಾಡಿ ದೆಹಲಿಯ ಜಹಂಗೀರ್​ಪುರಿಯಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.  ಹಾಗೇ, ಆರ್​ಜೆಡಿ ನಾಯಕ, ರಾಜ್ಯ ಸಭಾ ಸಂಸದ ಮನೋಜ್ ಕುಮಾರ್ ಝಾ ಟ್ವೀಟ್ ಮಾಡಿ, ಜಹಂಗೀರ್​ಪುರಿ ಏರಿಯಾದಲ್ಲಿ ಶಾಂತಿ ಮತ್ತು ಸಾಮರಸ್ಯ ಕದಡುವ ಕೆಲಸ ಆಗಿದೆ. ಕೇಂದ್ರ ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಗುರುತಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೂ ಹಲವು ರಾಜಕೀಯ ಗಣ್ಯರು ಘಟನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಶೀಘ್ರ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Chanakya Niti: ಮಕ್ಕಳ ಯಶಸ್ಸನ್ನು ನೀವು ಬಯಸುವುದಾದರೆ ಅವರ ಪಾಲನೆಯಲ್ಲಿ ಈ ವಿಷಯಗಳನ್ನು ನೆನಪಿಡಿ- ಚಾಣಕ್ಯ ನೀತಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ