ತಮಿಳುನಾಡಲ್ಲಿ 12 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಎರಡು ವಾರಗಳಲ್ಲಿ ಇದು 5ನೇ ಪ್ರಕರಣ

ಎರಡು ವಾರಗಳಲ್ಲಿ ಇದು ಐದನೇ ಪ್ರಕರಣ ಮತ್ತು ಕೇವಲ 24 ಗಂಟೆಗಳಲ್ಲಿ ಎರಡನೇ ಪ್ರಕರಣವಾಗಿದೆ. ಶಿವಗಂಗಾ ಜಿಲ್ಲೆಯಲ್ಲಿ  ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರ ಕಲಿಯಲು ಕಷ್ಟವಾಗುತ್ತಿದೆ.

ತಮಿಳುನಾಡಲ್ಲಿ 12 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಎರಡು ವಾರಗಳಲ್ಲಿ ಇದು 5ನೇ ಪ್ರಕರಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 27, 2022 | 7:54 PM

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಇಂದು 12 ನೇ ತರಗತಿಯ ಬಾಲಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿದ್ದು, ಶಾಲಾ ಮಕ್ಕಳ ಸಾವಿನ ಪ್ರಕರಣಗಳು ರಾಜ್ಯದಲ್ಲಿ ಆತಂಕ ಮತ್ತು ಪ್ರತಿಭಟನೆಯನ್ನು ಉಂಟುಮಾಡಿದೆ. ಎರಡು ವಾರಗಳಲ್ಲಿ ಇದು ಐದನೇ ಪ್ರಕರಣ ಮತ್ತು ಕೇವಲ 24 ಗಂಟೆಗಳಲ್ಲಿ ಎರಡನೇ ಪ್ರಕರಣವಾಗಿದೆ. ಶಿವಗಂಗಾ ಜಿಲ್ಲೆಯಲ್ಲಿ  ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರ ಕಲಿಯಲು ಕಷ್ಟವಾಗುತ್ತಿದೆ ಎಂದು ಬಾಲಕ ಆತ್ಮಹತ್ಯೆ ಪತ್ರವನ್ನು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ ಮೂವರು 12 ನೇ ತರಗತಿಯಲ್ಲಿ ಓದುತ್ತಿದ್ದವರು. ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಬಾಲಕಿ ದೀರ್ಘಕಾಲದ, ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯ ಸಾವಿಗೆ ಕೆಲವೇ ಗಂಟೆಗಳ ಮೊದಲು ಕಡಲೂರು ಜಿಲ್ಲೆಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸ್ ಅಧಿಕಾರಿ ಕಾರ್ತಿಕ್ ಪ್ರಕಾರ, ನಾಲ್ಕು ಪುಟಗಳ ಆತ್ಮಹತ್ಯಾ ಟಿಪ್ಪಣಿಯಲ್ಲಿ, ವಿದ್ಯಾರ್ಥಿನಿಯು ತನ್ನ “ಐಎಎಸ್ ಆಕಾಂಕ್ಷೆಗಳನ್ನು ಪೂರೈಸಲು ಸಾಧ್ಯವಾಗದೇ ಇರುವ ಬಗ್ಗೆ ಬರೆದಿದ್ದಾಳೆ.

ಸೋಮವಾರ  ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಜುಲೈ 13ರಂದು ಕಲ್ಲಾಕುರುಚ್ಚಿ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬಳ ಶವ ಖಾಸಗಿ ವಸತಿ ಶಾಲೆಯಲ್ಲಿ ಪತ್ತೆಯಾಗಿತ್ತು. ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣದಲ್ಲಿ ಇದು ಮೊದಲನೆಯದು. ಆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಯಲ್ಲಿ ಹಲವರಿಗೆ ಗಾಯಗಳಾಗಿತ್ತು.

ಓದಿನಲ್ಲಿ ಹಿಂದುಳಿದಿದ್ದಕ್ಕೆ ಇಬ್ಬರು ಶಿಕ್ಷಕರು ಆಕೆಯನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಮೇರೆಗೆ ಶಾಲೆಯ ಪ್ರಿನ್ಸಿಪಾಲ್, ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು