ದೆಹಲಿ ಶಾಲೆಗಳಿಗೆ ಬಂದ 23 ಬಾಂಬ್ ಬೆದರಿಕೆ ಇ-ಮೇಲ್​ಗಳ ಹಿಂದಿದೆ ವಿದ್ಯಾರ್ಥಿಯ ಕೈವಾಡ

ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಕಳುಹಿಸಿದ್ದಕ್ಕಾಗಿ 12 ನೇ ತರಗತಿಯ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ವಿವಿಧ ಶಾಲೆಗಳಿಗೆ ಬಂದ ಕೊನೆಯ 23 ಬೆದರಿಕೆ ಇಮೇಲ್‌ಗಳನ್ನು 12 ನೇ ತರಗತಿಯ ವಿದ್ಯಾರ್ಥಿ ಕಳುಹಿಸಿದ್ದಾನೆ.ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ದೆಹಲಿ ಶಾಲೆಗಳಿಗೆ ಬಂದ 23 ಬಾಂಬ್ ಬೆದರಿಕೆ ಇ-ಮೇಲ್​ಗಳ ಹಿಂದಿದೆ ವಿದ್ಯಾರ್ಥಿಯ ಕೈವಾಡ
ಪೊಲೀಸ್Image Credit source: Deccan Herald
Follow us
ನಯನಾ ರಾಜೀವ್
|

Updated on: Jan 10, 2025 | 10:02 AM

ದೆಹಲಿಯ ವಿವಿಧ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆಯ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಕೈವಾಡವಿದೆ ಎಂಬುದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್, ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಬಾಂಬ್ ಬೆದರಿಕೆಗಳು ಶಾಲಾ ಅಧಿಕಾರಿಗಳಲ್ಲಿ ಭೀತಿಯನ್ನು ಉಂಟು ಮಾಡಿತ್ತು. ದೆಹಲಿ ಪೊಲೀಸರು ಈ ವಾರ ಇಂತಹ ಬಿಕ್ಕಟ್ಟುಗಳನ್ನು ಎದುರಿಸಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೊಲೀಸರು ವಿಚಾರ ಸಂಕಿರಣವನ್ನು ಆಯೋಜಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದರು. ಶಾಲೆಗಳಲ್ಲಿ ಬಾಂಬ್ ಬೆದರಿಕೆಯ ಸಂದರ್ಭದಲ್ಲಿ ಶಾಂತವಾಗಿರುವುದು, ಪ್ರತಿಕ್ರಿಯಿಸುವುದು ಮತ್ತು ಪೊಲೀಸರೊಂದಿಗೆ ಸಮನ್ವಯ ಸಾಧಿಸುವುದು ಹೇಗೆ ಎಂಬುದರ ಕುರಿತು ಈ ಸೆಮಿನಾರ್ ಇದೆ. ಬುಧವಾರ ಬೆಳಗ್ಗೆ ದೆಹಲಿಯ ಕನಿಷ್ಠ 16 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಪತ್ತೆ ದಳಗಳು ಶಾಲೆಗಳಲ್ಲಿ ಸಮೀಕ್ಷೆ ನಡೆಸಿದ್ದು, ಅನುಮಾನಾಸ್ಪದವಾಗಿ ಏನೂ ಸಿಗದ ಹಿನ್ನೆಲೆಯಲ್ಲಿ ಸುಳ್ಳು ಬೆದರಿಕೆ ಎಂದು ಹೇಳಿದ್ದಾರೆ.

ಮದರ್ಸ್ ಇಂಟರ್‌ನ್ಯಾಶನಲ್ ಸ್ಕೂಲ್, ಮಾಡರ್ನ್ ಸ್ಕೂಲ್, ಸ್ಪ್ರಿಂಗ್‌ಡೇಲ್ ಸ್ಕೂಲ್, ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್, ಸೇಂಟ್ ಕೊಲಂಬಾಸ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್, ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್, ಏರ್ ಫೋರ್ಸ್ ಬಾಲ್ ಭಾರತಿ, ವಸಂತ್ ವಿಹಾರ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಆರ್‌ಕೆ ಪುರಂಗೆ ಇಮೇಲ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ಈಸ್ಟ್ ಆಫ್ ಕೈಲಾಶ್‌ನಲ್ಲಿರುವ ಟಾಗೋರ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲರಾದ ಮಲ್ಲಿಕಾ ಪ್ರೇಮನ್, ಚಳಿಗಾಲದ ರಜೆಗಾಗಿ ಶಾಲೆಯನ್ನು ಮುಚ್ಚಲಾಗಿದೆ ಮತ್ತು ಯಾವುದೇ ವಿದ್ಯಾರ್ಥಿಗಳು ಆವರಣದಲ್ಲಿ ಇರಲಿಲ್ಲ ಎಂದು ಹೇಳಿದರು ಇದರ ಹಿಂದೆಯೂ ಇದೇ ವಿದ್ಯಾರ್ಥಿಗಳ ಕೈವಾಡವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?