ಕಡಲೂರಿನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ, ತಮಿಳುನಾಡಿನಲ್ಲಿ ಕಳೆದ 24ಗಂಟೆಗಳಲ್ಲಿ ಇದು ಎರಡನೇ ಪ್ರಕರಣ
ತಾಯಿ ಗದರಿಸಿದ್ದರಿಂದ ಬಾಲಕಿ ಬೇಸರಗೊಂಡು ಆತ್ಮಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಚೆನ್ನೈ: ತಮಿಳುನಾಡಿನ (Tamil Nadu) ತಿರುವಳ್ಳೂರಿನಲ್ಲಿ 12 ನೇ ತರಗತಿಯ ಬಾಲಕಿಯೊಬ್ಬಳ ಸಾವು ನಂತರ 24 ಗಂಟೆಗಳಲ್ಲಿ , ಕಡಲೂರು ಜಿಲ್ಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಕೇವಲ 2 ವಾರಗಳಲ್ಲಿ ಇದು ಮೂರನೇ ಘಟನೆಯಾಗಿದೆ. ತಾಯಿ ಗದರಿಸಿದ್ದರಿಂದ ಬಾಲಕಿ ಬೇಸರಗೊಂಡು ಆತ್ಮಹತ್ಯೆ (Suicide) ಮಾಡಿದ್ದಾಳೆ ಎನ್ನಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸೋಮವಾರ ಸರ್ಕಾರಿ ಅನುದಾನಿತ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ಎಂ ಸತ್ಯ ಪ್ರಿಯಾ ಸುದ್ದಿಗಾರರಿಗೆ ತಿಳಿಸಿದರು. ಈ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್-ಸಿಐಡಿ (ಸಿಬಿ-ಸಿಐಡಿ) ಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು.
ಜುಲೈ 13 ರಂದು, ಕಲ್ಲಾಕುರಿಚಿ ಜಿಲ್ಲೆಯಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಳು. ಆಕೆಯ ಸಾವಿನ ನಂತರ ನಮಗೆ ನ್ಯಾಯ ಬೇಕು ಎಂದು ಬಾಲಕಿಯ ಸಂಬಂಧಿಕರು ಮತ್ತು ಸ್ಥಳೀಯ ಜನರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರಸ್ತುತ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.
ಹದಿಹರೆಯದ ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ‘ಮನವರ್ ಮನಸು’ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ಮಾನಸಿಕ ಸಮಾಲೋಚನೆ ನೀಡಲು 800 ವೈದ್ಯರನ್ನು ನೇಮಿಸಲು ನಿರ್ಧರಿಸಿದೆ.
ರಾಜ್ಯ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು, ಹದಿಹರೆಯದ ಮಕ್ಕಳ ಸಮಸ್ಯೆಗಳು, ಅಧ್ಯಯನದ ಒತ್ತಡ, ಗೆಳೆಯರ ಒತ್ತಡ ಮತ್ತು ಮಕ್ಕಳಲ್ಲಿ ವರ್ತನೆಯ ಬದಲಾವಣೆಗೆ ಸಂಬಂಧಿಸಿದ ಇತರ ಸಮಸ್ಯೆಗಳ ನಡುವೆ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಈ ಯೋಜನೆಯು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ
Published On - 4:36 pm, Tue, 26 July 22