3ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿ ಕಾಲುವೆಗೆ ಎಸೆದ ಅಪ್ರಾಪ್ತ ಬಾಲಕರು

ಮೂವರು ಅಪ್ರಾಪ್ತ ಬಾಲಕರು ಸೇರಿ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಅತ್ಯಾಚಾರ ಮಾಡಿ ಬಳಿಕ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ.

3ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿ ಕಾಲುವೆಗೆ ಎಸೆದ ಅಪ್ರಾಪ್ತ ಬಾಲಕರು
ಬಾಲಕಿ-ಸಾಂದರ್ಭಿಕ ಚಿತ್ರ
Image Credit source: Live Law

Updated on: Jul 11, 2024 | 2:48 PM

ಹನ್ನೆರಡು, ಹದಿಮೂರು ವರ್ಷದ ಬಾಲಕರು 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿ, ಕಾಲುವೆಗೆ ಎಸೆದಿರುವ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ನಂದ್ಯಾಲ್​ ಜಿಲ್ಲೆಯಲ್ಲಿ ನಡೆದಿದೆ. ಮೂವರು ಅಪ್ರಾಪ್ತ ಹುಡುಗರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊನೆಗೆ ಕೊಲೆ ಮಾಡಿದ್ದಾರೆ. ಬಳಿಕ ಸಾಕ್ಷ್ಯವನ್ನು ನಾಶಪಡಿಸಲು ಆಕೆಯ ದೇಹವನ್ನು ಕಾಲುವೆಗೆ ಎಸೆದಿದ್ದಾರೆ.

ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಪಾರ್ಕ್​ನಲ್ಲಿ ಆಟವಾಡುತ್ತಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಭಾನುವಾರ ದೂರು ದಾಖಲಿಸಿದ್ದರು.

ಮುಚ್ಚುಮರ್ರಿ ಪಾರ್ಕ್​ನಲ್ಲಿ ಪೊಲೀಸರು , ಪೋಷಕರೆಲ್ಲರೂ ಹುಡುಕಾಟ ನಡೆಸಿದ್ದರು, ಆದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಸ್ನಿಫರ್​ ಡಾಗ್​ನ್ನು ಕರೆದುಕೊಂಡು ಬರಲಾಯಿತು.
ನಾಯಿಯ ಸುಳಿವು ಪೊಲೀಸರನ್ನು ಮೂವರು ಅಪ್ರಾಪ್ತ ಬಾಲಕರ ನಿವಾಸಗಳಿಗೆ ಕರೆದೊಯ್ಯಿತು.

ಮತ್ತಷ್ಟು ಓದಿ: ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ

ಪ್ರಾಥಮಿಕ ತನಿಖೆಯ ನಂತರ, ಹುಡುಗರನ್ನು ಬಂಧಿಸಲಾಯಿತು. ವಿಚಾರಣೆ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಬಾಲಕರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಅವರ ಹೇಳಿಕೆ ಪ್ರಕಾರ ಮುಚ್ಚುಮರ್ರಿ ಪಾರ್ಕ್ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಹುಡುಗರು ಗಮನಿಸಿದ್ದಾರೆ. ಅವರು ಅವಳನ್ನು ಆಟಕ್ಕೆ ಸೇರಲು ಕೇಳಿದರು ಮತ್ತು ಆಕೆ ಒಪ್ಪಿಕೊಂಡಳು.

ನಂತರ ಆಕೆಯನ್ನು ಮುಚ್ಚುಮರ್ರಿ ಏತ ನೀರಾವರಿ ಯೋಜನೆ ಬಳಿಯ ಏಕಾಂತ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಬಾಲಕಿಯು ತನ್ನ ಪೋಷಕರಿಗೆ ತನ್ನ ಮೇಲಿನ ದೌರ್ಜನ್ಯದ ಬಗ್ಗೆ ತಿಳಿಸಿದರೆ ಪರಿಣಾಮ ಬೀರಬಹುದೆಂಬ ಭಯದಿಂದ ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದಾರೆ. ಬಳಿಕ ಆಕೆಯ ಶವವನ್ನು ಸಮೀಪದ ಕಾಲುವೆಯಲ್ಲಿ ವಿಲೇವಾರಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ