AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ, ತಿರುಪತಿ ದೇವಸ್ಥಾನದಲ್ಲಿ ಶುದ್ಧೀಕರಣ ಹೋಮ

ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಅಷ್ಟೇ ಅಲ್ಲದೆ ಇಂದು ಶುದ್ಧೀಕರಣ ಹೋಮವನ್ನು ಕೂಡ ಮಾಡಲಾಗಿದೆ. ತಿರುಪತಿ ತಿರುಮಲ ಆಡಳಿತ ಮಂಡಳಿಯು ರಾಮಕೃಷ್ಣ ದೀಕ್ಷಿತ್​ ನೇತೃತ್ವದಲ್ಲಿ ನಡೆದ ಹೋಮ ನಡೆದಿದೆ. ತಿಮ್ಮಪ್ಪನ ಭಕ್ತರಲ್ಲಿ ನಂಬಿಕೆ ಮೂಡಿಸಲು, ಬಂಗಾರು ಬಾವಿ ಯಾಗ ಶಾಲೆಯಲ್ಲಿ ಹೋಮ ನಡೆದಿದೆ.

ನಯನಾ ರಾಜೀವ್
|

Updated on: Sep 23, 2024 | 11:29 AM

Share

ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಅಷ್ಟೇ ಅಲ್ಲದೆ ಇಂದು ಶುದ್ಧೀಕರಣ ಹೋಮವನ್ನು ಕೂಡ ಮಾಡಲಾಗಿದೆ. ತಿರುಪತಿ ತಿರುಮಲ ಆಡಳಿತ ಮಂಡಳಿಯು ರಾಮಕೃಷ್ಣ ದೀಕ್ಷಿತ್​ ನೇತೃತ್ವದಲ್ಲಿ ನಡೆದ ಹೋಮ ನಡೆದಿದೆ. ತಿಮ್ಮಪ್ಪನ ಭಕ್ತರಲ್ಲಿ ನಂಬಿಕೆ ಮೂಡಿಸಲು, ಬಂಗಾರು ಬಾವಿ ಯಾಗ ಶಾಲೆಯಲ್ಲಿ ಹೋಮ ನಡೆದಿದೆ.

ವಾಸ್ತು ಶುದ್ಧಿ, ಯಂತ್ರ ಶುದ್ಧಿ, ಸ್ಥಳ ಶುದ್ಧಿ , ಪಂಚಗವ್ಯ ಸಂಪ್ರೋಕ್ಷಣ ಮೂಲಕ, ಅನ್ನ ಪ್ರಸಾದ​​ ತಯಾರಾಗುವ ಸ್ಥಳ, ಲಡ್ಡು ತಯಾರಾಗುವ ಸ್ಥಳ, ತುಪ್ಪ ಬಳಸುತ್ತಿದ್ದ ಎಲ್ಲಾ ಸ್ಥಳಗಳಲ್ಲಿ ಪಂಚಗವ್ಯ ಸಂಪ್ರೋಕ್ಷಣೆ ನಡೆಸಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ತುಪ್ಪ ಖರೀದಿಗೆ ಇದ್ದ ನಿಯಮಗಳ ಬದಲಾವಣೆ ಸೇರಿದಂತೆ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಮತ್ತಷ್ಟು ಓದಿ: ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ; ಟಿಟಿಡಿ ಸ್ಪಷ್ಟನೆ

ಹಿಂದಿನ ವೈಎಸ್‌ಆರ್‌ಸಿಪಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ತುಪ್ಪ ಖರೀದಿಗೆ ಇದ್ದ ಹಲವು ನಿಯಮಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ಬದಲಾಯಿಸಲಾಯಿತು ಎಂದು ಆರೋಪಿಸಿದರು. ತಿರುಮಲದ ಶುದ್ಧೀಕರಣಕ್ಕೆ ಇಂದು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣ ನಡೆದಿದೆ ಎಂದೂ ಅವರು ತಿಳಿಸಿದರು.

ತುಪ್ಪ ಪೂರೈಸುವವರಿಗೆ ಕನಿಷ್ಠ ಮೂರು ವರ್ಷಗಳ ಅನುಭವ ಇರಬೇಕು ಎಂಬ ನಿಯಮ ಇತ್ತು. ಇದನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು, ಒಂದು ವರ್ಷಕ್ಕೆ ಇಳಿಸಿತು. ತುಪ್ಪ ಪೂರೈಕೆದಾರರ ವಹಿವಾಟು 250 ಕೋಟಿ ರೂ. ಇರಬೇಕು ಎಂಬ ನಿಯಮ ಇತ್ತು. ಇದನ್ನು 150 ಕೋಟಿಗರೂ. ಇಳಿಸಲಾಗಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ