ಸಿಕ್ಕಿಂನಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, ನಾಪತ್ತೆಯಾದ 142 ಜನ

|

Updated on: Oct 07, 2023 | 1:03 PM

Sikkim Flood: ಏಳು ಸೇನಾ ಸಿಬ್ಬಂದಿ ಸೇರಿದಂತೆ ಸಾವಿನ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 142 ಜನ ನಾಪತ್ತೆಯಾಗಿದ್ದಾರೆ. ಈ ಪ್ರವಾಹವು 25,000 ಜನರ ಮೇಲೆ ಪ್ರಭಾವ ಬೀರಿದೆ. 12 ಸಾವಿರಕ್ಕೂ ಹೆಚ್ಚು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ.

ಸಿಕ್ಕಿಂನಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, ನಾಪತ್ತೆಯಾದ 142 ಜನ
ಸಾಂದರ್ಭಿಕ ಚಿತ್ರ
Follow us on

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ (Cloudburst in Sikkim) ಹಲವು ಸಾವು ನೋವುಗಳು ಸಂಭವಿಸಿದೆ. ಇದೀಗ ಏಳು ಸೇನಾ ಸಿಬ್ಬಂದಿ ಸೇರಿದಂತೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 142 ಜನ ನಾಪತ್ತೆಯಾಗಿದ್ದಾರೆ. ಈ ಪ್ರವಾಹವು 25,000 ಜನರ ಮೇಲೆ ಪ್ರಭಾವ ಬೀರಿದೆ. 12 ಸಾವಿರಕ್ಕೂ ಹೆಚ್ಚು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. 13 ಸೇತುವೆಗಳು ಕೊಚ್ಚಿಕೊಂಡು ಹೋಗಿದೆ ಎಂದು ಹೇಳಲಾಗಿದೆ. ಬುಧವಾರದಂದು ಉಂಟಾದ ಮೇಘಸ್ಫೋಟದಿಂದ ಅನೇಕ ನಷ್ಟ ಉಂಟಾಗಿದೆ ಎಂದು ಸರ್ಕಾರ ವರದಿಯಲ್ಲಿ ತಿಳಿಸಿದೆ.

ಇನ್ನು ಪ್ರವಾಹದಿಂದ ಸಾವನ್ನಪ್ಪಿರುವವರ ಕುಟುಂಬಗಳಿಗೆ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು 4 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇನ್ನು ಅನೇಕ ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ತಕ್ಷಣಕ್ಕೆ ಎಲ್ಲರಿಗೂ 2 ಸಾವಿರ ರೂ.ಗಳನ್ನು ಸಹಾಯಧನವನ್ನು ಘೋಷಣೆ ಮಾಡಲಾಗಿದೆ.

ಇಲ್ಲಿಯವರೆಗೆ ಈ ಪ್ರದೇಶದಲ್ಲಿ 2,413 ಜನರನ್ನು ರಕ್ಷಿಸಲಾಗಿದೆ. ರಾಜ್ಯದಾದ್ಯಂತ 22 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ 6,875 ಜನರು ಆಶ್ರಯ ಪಡೆಯುತ್ತಿದ್ದಾರೆ. ಇನ್ನು ತೀಸ್ತಾ ನದಿಯ ಕೆಳಭಾಗದ ವಿವಿಧ ಪ್ರದೇಶಗಳಿಂದ ಏಳು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ.

ಇದನ್ನೂ ಓದಿ: ಸಿಕ್ಕಿಂನಲ್ಲಿ ಭಾರಿ ಪ್ರವಾಹ, 19 ಮಂದಿ ಸಾವು 100ಕ್ಕೂ ಅಧಿಕ ಮಂದಿ ನಾಪತ್ತೆ

ಹಿಮಾಲಯ ಪ್ರದೇಶದ ಕೆಟ್ಟ ಹವಾಮಾನದಿಂದ ರಕ್ಷಣೆ ಕಾರ್ಯ ನಡೆಸಲು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಭಾಗದಲ್ಲಿ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಗಳು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಕ್ಕಿಂಗೆ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯ (ಎಸ್‌ಡಿಆರ್‌ಎಫ್) ಎರಡೂ ಕಂತುಗಳನ್ನು 2023-24 ನೇ ಸಾಲಿಗೆ ಮುಂಗಡವಾಗಿ 44.80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಅನುಮೋದಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Sat, 7 October 23