AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 50 ಮಂದಿ ಸಾವು ಶಂಕೆ, ಕೇರಳದಲ್ಲಿ ಮುಂದುವರಿದ ಮಳೆ

ಆಗಸ್ಟ್ 4 ರಂದು ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3 ರಿಂದ 6 ರವರೆಗೆ ಮತ್ತು ಆಗಸ್ಟ್ 3 ರಿಂದ 7 ರವರೆಗೆ ಕ್ರಮವಾಗಿ ಮಧ್ಯ, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 50 ಮಂದಿ ಸಾವು ಶಂಕೆ, ಕೇರಳದಲ್ಲಿ ಮುಂದುವರಿದ ಮಳೆ
ಹಿಮಾಚಲ ಪ್ರದೇಶದಲ್ಲಿ ರಕ್ಷಣಾ ಕಾರ್ಯ
ರಶ್ಮಿ ಕಲ್ಲಕಟ್ಟ
|

Updated on: Aug 03, 2024 | 7:05 PM

Share

ದೆಹಲಿ ಆಗಸ್ಟ್ 03: ಹಿಮಾಚಲ ಪ್ರದೇಶದಲ್ಲಿ (Himachal Pradesh)ಮೇಘ ಸ್ಫೋಟದಿಂದ (cloud-burst) ಹಾನಿಗೊಳಗಾದ ಪ್ರದೇಶಗಳಲ್ಲಿ ಸುಮಾರು 50 ಜನರು ಸಾವಿಗೀಡಾಗಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಸಚಿವ ವಿಕ್ರಮಾದಿತ್ಯ ಸಿಂಗ್ (Vikramaditya Singh) ಹೇಳಿದ್ದಾರೆ. ಅಧಿಕೃತ ದೃಢೀಕರಣ ಮತ್ತು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರವೇ ಅಧಿಕೃತ ಸಂಖ್ಯೆಯನ್ನು ಘೋಷಿಸಬಹುದು ಎಂದು ಸಿಂಗ್ ಹೇಳಿದರು. ಸುದ್ದಿ ಸಂಸ್ಥೆ ಎಎನ್‌ಐ ಜತೆ ಮಾತನಾಡಿದ ಸಚಿವರು, ಈ ಸಮಯದಲ್ಲಿ ಮೃತದೇಹಗಳನ್ನು ಹೊರತೆಗೆಯುವುದು ಮತ್ತು ರಾಜ್ಯದ ಪ್ರವಾಹ ಪೀಡಿತ ಭಾಗಗಳಲ್ಲಿ ಸಂಪರ್ಕವನ್ನು ಪುನಃಸ್ಥಾಪಿಸುವುದು ಸರ್ಕಾರದ ದೊಡ್ಡ ಆದ್ಯತೆಯಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 7 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿನ ಪ್ರವಾಹದಿಂದ ಹಾನಿಗೊಳಗಾದ ಎಲ್ಲಾ ಕುಟುಂಬಗಳಿಗೆ ಸಿಎಂ ಸುಖವಿಂದರ್ ಸಿಂಗ್ ಸುಖು ₹ 50,000 ಪರಿಹಾರ ಧನ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಶನಿವಾರ ಗುಜರಾತ್, ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ, ಜಾರ್ಖಂಡ್, ಅಸ್ಸಾಂ ಮತ್ತು ಮೇಘಾಲಯ ಪ್ರದೇಶಗಳಿಗೆ ಆಗಸ್ಟ್ 3, 2024 ಕ್ಕೆ ರೆಡ್ ಅಲರ್ಟ್ ನೀಡಿದೆ. ಅದೇ ವೇಳೆ ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಕೊಂಕಣದಲ್ಲಿ ಪ್ರತ್ಯೇಕವಾದ, ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಶನಿವಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್ ಮತ್ತು ಬಿಹಾರದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಆಗಸ್ಟ್ 3 ಮತ್ತು 4 ರಂದು ಸತಾರಾ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪಾಲ್ಘರ್ ಮತ್ತು ಪುಣೆ ಜಿಲ್ಲೆಗಳಲ್ಲಿ ಆಗಸ್ಟ್ 4 ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್ 3 ರಂದು ವಿದರ್ಭದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಆಗಸ್ಟ್ 3 ಮತ್ತು 4 ರಂದು ಮರಾಠವಾಡ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಆಗಸ್ಟ್ 4 ರಂದು ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3 ರಿಂದ 6 ರವರೆಗೆ ಮತ್ತು ಆಗಸ್ಟ್ 3 ರಿಂದ 7 ರವರೆಗೆ ಕ್ರಮವಾಗಿ ಮಧ್ಯ, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕ, ಲಕ್ಷದ್ವೀಪ ಮತ್ತು ಕೇರಳ, ಮಾಹೆ, ಮತ್ತು ಕರ್ನಾಟಕ ಉಪವಿಭಾಗಗಳಲ್ಲಿ ಸಾಕಷ್ಟು ವ್ಯಾಪಕವಾಗಿ, ಹಗುರದಿಂದ ಸಾಧಾರಣ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಚದುರಿದ ಮಳೆಯಾಗುತ್ತದೆ.

ಕೇರಳ ಮತ್ತು ಮಾಹೆ ಮತ್ತು ತಮಿಳುನಾಡಿನಲ್ಲಿ, 300 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿರುವ ವಯನಾಡ್ ಭೂಕುಸಿತ ದುರಂತದಿಂದ ಕೇರಳ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಿರುವಾಗ ಆಗಸ್ಟ್ 5 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, 190ಕ್ಕೂ ಹೆಚ್ಚು ರಸ್ತೆಗಳ ಸಂಚಾರ ಬಂದ್

ಕಳೆದ 24 ಗಂಟೆಗಳಲ್ಲಿ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ, ಗುಜರಾತ್ ಮತ್ತು ಮಧ್ಯ ಮಹಾರಾಷ್ಟ್ರ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಕೇರಳ, ಪಂಜಾಬ್, ಪೂರ್ವ ಮಧ್ಯಪ್ರದೇಶ, ವಿದರ್ಭ, ಸೌರಾಷ್ಟ್ರ ಮತ್ತು ಕಚ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಕೊಂಕಣ ಮತ್ತು ಗೋವಾ, ಬಿಹಾರ, ಒಡಿಶಾ, ಉತ್ತರ ಒಳನಾಡು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ದಾಖಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ