AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಸ್ಫೋಟ, ಭೂಕುಸಿತ, ಪ್ರವಾಹ; ಉತ್ತರ ಭಾರತದ ಕೆಲ ಪ್ರದೇಶಗಳಲ್ಲಿ ಭೀಕರ ಅನಾಹುತ

ಜಮ್ಮು ಮತ್ತು ಕಾಶ್ಮೀರದ ಹಳ್ಳಿಯೊಂದರ ಬಳಿ ಸಂಭವಿಸಿದ ಮೇಘಸ್ಫೋಟದಿಂದ ಸುಮಾರು 7 ಮಂದಿ ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಮೇಘಸ್ಫೋಟ, ಭೂಕುಸಿತ, ಪ್ರವಾಹ; ಉತ್ತರ ಭಾರತದ ಕೆಲ ಪ್ರದೇಶಗಳಲ್ಲಿ ಭೀಕರ ಅನಾಹುತ
ರಕ್ಷಣಾ ಕಾರ್ಯದಲ್ಲಿ ನಿರತರಾದ ಸಿಬ್ಬಂದಿ
TV9 Web
| Edited By: |

Updated on: Jul 30, 2021 | 7:31 AM

Share

ದೆಹಲಿ: ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮಳೆಯ ತೀವ್ರತೆಗೆ ಉತ್ತರ ಭಾರತದ ಕೆಲ ಪ್ರದೇಶಗಳು ನಲುಗಿಹೋಗಿವೆ. ಮೇಘಸ್ಫೋಟ, ಪ್ರವಾಹ, ಭೂ ಕುಸಿತಗಳಿಂದ ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ಅನಾಹುತ ಸಂಭವಿಸಿದ್ದು, ಸಾವು, ನೋವುಗಳು ವರದಿಯಾಗಿವೆ. ಈ ಭಾಗಗಳಲ್ಲಿ ಅಧಿಕ ಮಳೆಯಾಗುತ್ತಿದ್ದು, ಬುಧವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಹಳ್ಳಿಯೊಂದರ ಬಳಿ ಸಂಭವಿಸಿದ ಮೇಘಸ್ಫೋಟದಿಂದ ಸುಮಾರು 7 ಮಂದಿ ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಕಿಶ್ತ್​ವರ್ ಜಿಲ್ಲೆಯಲ್ಲಿ ಸದರಿ ದುರಂತ ಸಂಭವಿಸಿದ್ದು, ಜನರು ಕಂಗಾಲಾಗಿ ಹೋಗಿದ್ದಾರೆ.

ಇತ್ತ ಹಿಮಾಚಲ ಪ್ರದೇಶದಲ್ಲಿ ಘಟಿಸಿದ ಪ್ರವಾಹದಲ್ಲಿ 9 ಜನರು ದುರ್ಮರಣಕ್ಕೀಡಾಗಿದ್ದು, ಈ ಪೈಕಿ ಲಾಹೂಲ್ ಸ್ಪಿತಿಯಲ್ಲಿ 7 ಜನ ಹಾಗೂ ಚಾಂಬಾ ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೋಕ್ತಾ ತಿಳಿಸಿದ್ದಾರೆ. ಉದಯ್​ಪುರದ ತೋಜಿಂಗ್​ ನುಲ್ಹಾ ಬಳಿ ಸಂಭವಿಸಿದ ಮೇಘಸ್ಫೋಟ ಲಾಹೂಲ್ ಸ್ಪಿತಿಯ ಅನಾಹುತಕ್ಕೆ ಕಾರಣವಾಗಿದೆ ಎಂದೂ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತ್​ವರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಜಾರ್ ಎಂಬ ಕುಗ್ರಾಮದಲ್ಲಿ ಬುಧವಾರ ಮುಂಜಾನೆ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಭೂಕುಸಿತ ಮತ್ತು ಪ್ರವಾಹದಿಂದ ಡೆಬ್ರೀಸ್​ನಲ್ಲಿ 7 ಶವಗಳು ಪತ್ತೆಯಾಗಿದ್ದು, ಇನ್ನೂ 12 ಮಂದಿ ನಾಪತ್ತೆಯಾಗಿದ್ದಾರೆ. ಹೊಂಜಾರ್ ಪ್ರದೇಶದ 100 ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಅಮರನಾಥ ದೇವಾಲಯದ ಬಳಿಯೂ ಭೂಕುಸಿತ ಸಂಭವಿಸಿದೆ.

ಕಳೆದೊಂದು ವಾರದಿಂದ ಜಮ್ಮುವಿನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

(Cloudbursts flash floods and landslides wreak havoc in North India)

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹದ ಅಬ್ಬರ; ಸಾವಿನ ಸಂಖ್ಯೆ 209ಕ್ಕೆ ಏರಿಕೆ, 8 ಜನರು ನಾಪತ್ತೆ 

ಮೇಘಸ್ಫೋಟ! ಉತ್ತರಾಖಂಡದಲ್ಲಿ ಮತ್ತೊಮ್ಮೆ ಘರ್ಜಿಸುತ್ತಿವೆ ಮೋಡಗಳು

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ