ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಟ್ವೀಟ್

PM Narendra Modi: ಕರ್ನಾಟಕ ಮುನ್ನಡೆಸುವುದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಭೇಟಿಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ganapathi bhat

Updated on:Jul 30, 2021 | 7:02 PM

ದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಸಲ ದೆಹಲಿ ಭೇಟಿ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಭೇಟಿಯ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಕರ್ನಾಟಕ ಮುನ್ನಡೆಸುವುದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಭೇಟಿಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಅಭಿವೃದ್ಧಿಯ ಹೊಸಪಯಣಕ್ಕೆ ಶುಭಾಶಯ ಕೋರಿದ್ದೇನೆ. ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ.

ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನರೇಂದ್ರ ಮೋದಿ ಭೇಟಿಯಾಗಿದ್ದರು. ಪ್ರಧಾನಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದರು. ಪ್ರಧಾನಿ ಭೇಟಿ ಬಳಿಕ ಸಚಿವ ಜೋಶಿ ನಿವಾಸಕ್ಕೆ ಬೊಮ್ಮಾಯಿ ಆಗಮಿಸಿದ್ದರು. ಅಕ್ಬರ್ ರಸ್ತೆಯಲ್ಲಿರುವ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಬೊಮ್ಮಾಯಿ ತೆರಳಿದ್ದರು.

ಇದೇ ವೇಳೆ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯಾಗಿದ್ದಾರೆ. ದೆಹಲಿಯ ಜೆ.ಪಿ.ನಡ್ಡಾ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದಾರೆ. ಈ ಮೊದಲು, ರಾತ್ರಿ ಸಿಎಂ ಬೊಮ್ಮಾಯಿ ಭೇಟಿಗೆ ನಡ್ಡಾ ಸಮಯ ನೀಡಿದ್ದರು. ಬಳಿಕ ಸಂಜೆ 5.30 ಕ್ಕೆ ಭೇಟಿಗೆ ಸಮಯ ನೀಡಲಾಗಿತ್ತು. ಹೀಗಾಗಿ ಈಗ ಬಸವರಾಜ ಬೊಮ್ಮಾಯಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ. ಸಂಪುಟ ರಚನೆಯ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?

ಸಿಎಂ ಬೊಮ್ಮಾಯಿ ಸಂಪುಟ ರಚನೆಗೆ ಸಿದ್ಧವಾಗಿದೆ ಆರ್​ಎಸ್​​ಎಸ್​ ಸೂತ್ರ: ಕ್ಲೀನ್ ಮಂತ್ರಿಮಂಡಲಕ್ಕೆ ಒತ್ತು, ಒತ್ತಡ ತಂದಿದೆ

(CM Basavaraj Bommai meets PM Narendra Modi at his residence PM Assures full support to Karnataka)

Published On - 7:00 pm, Fri, 30 July 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್