ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ
ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
Updated By: sandhya thejappa

Updated on: Apr 07, 2022 | 9:15 AM

ದೆಹಲಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ (BJP) ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಮೈಸೂರಿಗೆ ತೆರಳಲಿರುವ ಬೊಮ್ಮಾಯಿ:
ಮೈಸೂರಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸುತ್ತಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿರುವ ಬೊಮ್ಮಾಯಿ, ಸಂಜೆ 4 ಗಂಟೆಗೆ ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೊಮ್ಮಾಯಿ ಭೇಟಿ ನೀಡುತ್ತಾರೆ. ನಂತರ ಮಠದಲ್ಲಿ ಸುತ್ತೂರುಶ್ರೀಗಳ ಆಶೀರ್ವಾದ ಪಡೆದು ಸಂಜೆ 6.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಾರೆ.

ಇದನ್ನೂ ಓದಿ

JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ

Published On - 9:10 am, Thu, 7 April 22