ಸುದೀರ್ಘ ಚರ್ಚೆ: ಪ್ರಧಾನಿ ಮೋದಿ ಮುಂದೆ ಸಿಎಂ BSY ಬೇಡಿಕೆಗಳ ಸರಮಾಲೆ
ದೆಹಲಿ: ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಯಡಿಯೂರಪ್ಪ ರಾಜ್ಯದ ಕುರಿತು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ಭೇಟಿ ವೇಳೆ ಸಿಎಂ B.S.ಯಡಿಯೂರಪ್ಪ ರಾಜ್ಯದಲ್ಲಿ ಪ್ರವಾಹ ಕಾಣಿಸಿಕೊಂಡ ಹಿನ್ನೆಲೆಯಲ್ಲಿ NDRFನಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದಾರಂತೆ. ಜೊತೆಗೆ, ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆಗೆ ಆರ್ಥಿಕ ವ್ಯವಹಾರಗಳ ಸಮಿತಿಯಿಂದ ಒಪ್ಪಿಗೆ ಕೊಡಿಸಿ ಎಂದು ಸಹ ಕೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕದ ಹಲವು ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿದ್ದು ಮೇಕೆದಾಟು ಹಾಗೂ ಕಳಸಾ ಬಂಡೂರಿ […]
ದೆಹಲಿ: ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಯಡಿಯೂರಪ್ಪ ರಾಜ್ಯದ ಕುರಿತು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಭೇಟಿ ವೇಳೆ ಸಿಎಂ B.S.ಯಡಿಯೂರಪ್ಪ ರಾಜ್ಯದಲ್ಲಿ ಪ್ರವಾಹ ಕಾಣಿಸಿಕೊಂಡ ಹಿನ್ನೆಲೆಯಲ್ಲಿ NDRFನಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದಾರಂತೆ. ಜೊತೆಗೆ, ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆಗೆ ಆರ್ಥಿಕ ವ್ಯವಹಾರಗಳ ಸಮಿತಿಯಿಂದ ಒಪ್ಪಿಗೆ ಕೊಡಿಸಿ ಎಂದು ಸಹ ಕೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕದ ಹಲವು ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿದ್ದು ಮೇಕೆದಾಟು ಹಾಗೂ ಕಳಸಾ ಬಂಡೂರಿ ಯೋಜನೆಗಳಿಗೆ ಎದುರಾಗಿರುವ ಅಡಚಣೆಗಳನ್ನ ಬಗೆಹರಿಸಲು ಸಹ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೆ, ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದಾರಂತೆ.
ನವೆಂಬರ್ 19 ರಂದು ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ನ ಉದ್ಘಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಸಹ ಸಿಕ್ಕಿದೆ.