ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ವಿಶೇಷ ಕಾರ್ಯಾಚರಣೆ, 800 ಜನರ ಬಂಧನ

ಅಸ್ಸಾಂನಲ್ಲಿ ಬಾಲ್ಯ ವಿವಾಹ(Child Marriage)ಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಮಂಗಳವಾರ 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬಾಲ್ಯವಿವಾಹದ ವಿರುದ್ಧದ ಬೃಹತ್ ಶಿಸ್ತುಕ್ರಮದಲ್ಲಿ, ಅಸ್ಸಾಂ ಪೊಲೀಸರು 800 ಕ್ಕೂ ಹೆಚ್ಚು ಆರೋಪಿಗಳನ್ನು ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ವಿಶೇಷ ಕಾರ್ಯಾಚರಣೆ, 800 ಜನರ ಬಂಧನ
ಬಾಲ್ಯ ವಿವಾಹImage Credit source: Northeast Now
Follow us
|

Updated on:Oct 03, 2023 | 12:42 PM

ಅಸ್ಸಾಂನಲ್ಲಿ ಬಾಲ್ಯ ವಿವಾಹ(Child Marriage)ಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಮಂಗಳವಾರ 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬಾಲ್ಯವಿವಾಹದ ವಿರುದ್ಧದ ಬೃಹತ್ ಶಿಸ್ತುಕ್ರಮದಲ್ಲಿ, ಅಸ್ಸಾಂ ಪೊಲೀಸರು 800 ಕ್ಕೂ ಹೆಚ್ಚು ಆರೋಪಿಗಳನ್ನು ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಕಾರ್ಯಾಚರಣೆ ಬೆಳಗ್ಗೆಯಿಂದಲೇ ಪ್ರಾರಂಭವಾಗಿತ್ತು, ಬಂಧಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ ಎಂದು ಸೆಪ್ಟೆಂಬರ್ 11 ರಂದು ಅಸ್ಸಾಂ ಅಸೆಂಬ್ಲಿಗೆ ಶರ್ಮಾ ತಿಳಿಸಿದ್ದರು, ಅವರಲ್ಲಿ 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, 2012 (ಪೋಕ್ಸೊ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಬಾಲ್ಯ ವಿವಾಹವೆಂದರೆ ಎರಡೂ ಕುಟುಂಬಗಳು ಒಪ್ಪಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳ, ಇದನ್ನು ತಡೆಯಲು ಅಧಿಕಾರಿಗಳಿಂದ ಹೊಸ ತಂತ್ರ

ಬಾಲ್ಯವಿವಾಹದ ಪದ್ದತಿಯನ್ನು ನಿಯಂತ್ರಿಸಲು ರಾಜಸ್ಥಾನ್, ಗುಜರಾತ್, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಬಿಹಾರ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳು ಮದುವೆಯ ಗಂಡು ಹೆಣ್ಣಿನ ವಯಸ್ಸುಗಳನ್ನು ದೃಢ ಪಡಿಸಲು ಮತ್ತು ನ್ಯಾಯಬದ್ಧಗೊಳಿಸಲು ವಿವಾಹವನ್ನು ನೊಂದಣಿ ಮಾಡಿಸುವುದನ್ನು ಕಡ್ಡಾಯ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Tue, 3 October 23