West Bengal: ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ, ಸಣ್ಣಪುಟ್ಟ ಗಾಯ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್​​​ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ. ಇನ್ನು ಮಮತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 3:34 PM

ದುರ್ಗಾಪುರ, ಏ.27: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು (ಏ.27)ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಎಎನ್​​ಐ ಎಕ್ಸ್​​ನಲ್ಲಿ ಹಂಚಿಕೊಂಡಿದೆ.

ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತ ಸಿಬ್ಬಂದಿಗಳು ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಮೇ ತಿಂಗಳಿನಲ್ಲಿ ಕೋಲ್ಕತ್ತಾದ ತನ್ನ ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹಣೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ​​​ ಮುಖದ ಕೆಳಗೆ ರಕ್ತ ಸುರಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾಗಿತ್ತು. ಅವರನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಜೂನ್ 2023ರಲ್ಲಿ, ಇಂತಹದೇ ಮತ್ತೊಂದು ಘಟನೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್​​​​ನ್ನು ಸಿಲಿಗುರಿಯ ಸಮೀಪವಿರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಸಮಯದಲ್ಲಿ ಅವರ ಕಾಲಿಗೆ ಗಾಯವಾಯಿತು. ಎಡ ಮೊಣಕಾಲು ಕೀಲು ಮತ್ತು ಸೊಂಟದ ಎಡ ಭಾಗಕ್ಕೆ ಗಾಯಗಳಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:24 pm, Sat, 27 April 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು