ದುರ್ಗಾಪುರ, ಏ.27: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು (ಏ.27)ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್ನಲ್ಲಿ ಹಂಚಿಕೊಂಡಿದೆ.
ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತ ಸಿಬ್ಬಂದಿಗಳು ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಮೇ ತಿಂಗಳಿನಲ್ಲಿ ಕೋಲ್ಕತ್ತಾದ ತನ್ನ ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹಣೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ಮುಖದ ಕೆಳಗೆ ರಕ್ತ ಸುರಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾಗಿತ್ತು. ಅವರನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು
ಜೂನ್ 2023ರಲ್ಲಿ, ಇಂತಹದೇ ಮತ್ತೊಂದು ಘಟನೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ನ್ನು ಸಿಲಿಗುರಿಯ ಸಮೀಪವಿರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಸಮಯದಲ್ಲಿ ಅವರ ಕಾಲಿಗೆ ಗಾಯವಾಯಿತು. ಎಡ ಮೊಣಕಾಲು ಕೀಲು ಮತ್ತು ಸೊಂಟದ ಎಡ ಭಾಗಕ್ಕೆ ಗಾಯಗಳಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:24 pm, Sat, 27 April 24