ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರಿಗೆ ಕೊವಿಡ್-19 ಪಾಸಿಟಿವ್ (COVID Positive) ದೃಢಪಟ್ಟಿದೆ. ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. 2ನೇ ಬಾರಿಗೆ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೊವಿಡ್ ಸಾಂಕ್ರಾಮಿಕ ಶುರುವಾದ ಬಳಿಕ ಈ ವರ್ಷದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಹಿಂದೆ ಜನವರಿಯಲ್ಲಿ ನಿತೀಶ್ ಕುಮಾರ್ ಅವರು ಕೊವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.
Bihar Chief Minister Nitish Kumar tests positive for #COVID19, he has been suffering from fever for the past four days.
(File photo) pic.twitter.com/EnNqsGVGWd
— ANI (@ANI) July 26, 2022
ಇದನ್ನೂ ಓದಿ: New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು
ಭಾರತದಲ್ಲಿ ಇಂದು 14,830 ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಕೊರೋನಾವೈರಸ್ ಸೋಂಕಿನ ಸಂಖ್ಯೆ 4,39,20,451ಕ್ಕೆ ಏರಿಕೆಯಾಗಿದೆ. ಆದರೆ, ಸಕ್ರಿಯ ಕೊವಿಡ್ ಪ್ರಕರಣಗಳ ಸಂಖ್ಯೆ 1,47,512ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.
Published On - 11:18 am, Tue, 26 July 22