ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ; ಪೊಲೀಸರಿದ್ದ ಬೆಂಗಾವಲು ವಾಹನಕ್ಕೆ ಅಪಘಾತ

ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ; ಪೊಲೀಸರಿದ್ದ ಬೆಂಗಾವಲು ವಾಹನಕ್ಕೆ ಅಪಘಾತ
ಶಿವರಾಜ್ ಸಿಂಗ್ ಚೌಹಾಣ್

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಾಗೌಡ್‌ನಿಂದ ದುರ್ಗಾಪುರಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಹೆಲಿಕಾಪ್ಟರ್ ತಾಂತ್ರಿಕ ದೋಷಕ್ಕೆ ತುತ್ತಾಯಿತು.

TV9kannada Web Team

| Edited By: Sushma Chakre

Jan 29, 2022 | 8:01 PM

ಭೂಪಾಲ್: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ನಾಗೋಡ್‌ಗೆ ಆಗಮಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಹೀಗಾಗಿ, ತಮ್ಮ ಮುಂದಿನ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ರಸ್ತೆ ಮಾರ್ಗವಾಗಿ ದುರ್ಗಾಪುರ ತಲುಪಿದರು. ರಾಯಗಾಂವ್‌ನ ದುರ್ಗಾಪುರದಲ್ಲಿ ಶನಿವಾರ ಆಯೋಜಿಸಿದ್ದ ಮತಗಟ್ಟೆ ವಿಸ್ತರಣೆ ಕಾರ್ಯಕ್ರಮ ಮತ್ತು ಪ್ರಯೋಜನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸತ್ನಾ ತಲುಪಿದ್ದಾರೆ.

ನಾಗೋಡ್‌ನಲ್ಲಿರುವ ಬಿಜೆಪಿ ಶಾಸಕ ನಾಗೇಂದ್ರ ಸಿಂಗ್ ಅವರ ಮನೆಯಲ್ಲಿ ಅವರ ಕಿರಿಯ ಸಹೋದರ ಕಾಂತಿದೇವ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳು ನಾಗೌಡ್‌ನಿಂದ ದುರ್ಗಾಪುರಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಹೆಲಿಕಾಪ್ಟರ್ ತಾಂತ್ರಿಕ ದೋಷಕ್ಕೆ ತುತ್ತಾಯಿತು. ಇದಾದ ನಂತರ ಮುಖ್ಯಮಂತ್ರಿ ಚೌಹಾಣ್ ನಾಗೌಡ್‌ನಿಂದ ದುರ್ಗಾಪುರಕ್ಕೆ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕಾಯಿತು.

ಇದೇ ವೇಳೆ ಮುಖ್ಯಮಂತ್ರಿ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ವಾಹನ ಜಖಂಗೊಂಡಿದೆ ಎಂಬ ಮಾಹಿತಿಯೂ ಸಿಕ್ಕಿದೆ. ಈ ಅಪಘಾತದಲ್ಲಿ 6 ಪೊಲೀಸರು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಯೋಧರು ಜೀಪಿನಲ್ಲಿ ದುರ್ಗಾಪುರಕ್ಕೆ ಹೋಗುತ್ತಿದ್ದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ವಾಹನ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 6 ಪೊಲೀಸರು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಯೋಧರು ಜೀಪಿನಲ್ಲಿ ದುರ್ಗಾಪುರಕ್ಕೆ ಹೋಗುತ್ತಿದ್ದರು. ಈ ವೇಳೆ ರೇರುವಾ ಬಳಿ ಜೀಪ್ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ವಾಹನದಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ. ಇನ್ನೊಂದು ವಾಹನದಲ್ಲಿದ್ದ ಮಹಿಳಾ ವೈದ್ಯೆ ಹಾಗೂ ಅವರ ಪುತ್ರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 4 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಭದ್ರತಾ ಲೋಪದ ನಂತರ ಮೋದಿ ದೀರ್ಘಾಯುಷ್ಯಕ್ಕಾಗಿ ಶಿವರಾಜ್ ಸಿಂಗ್ ಚೌಹಾಣ್ ಪ್ರಾರ್ಥನೆ

Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Follow us on

Related Stories

Most Read Stories

Click on your DTH Provider to Add TV9 Kannada