ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಮುಷ್ಕರ, ಪ್ರತಿಭಟನೆ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ

ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆ ನಡುವೆ ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ, ಪ್ರತಿಭಟನೆ, ಧರಣಿ ನಡೆಸದಂತೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ನಿಷೇಧ ಹೇರಿದೆ. ಈ ನಿಯಮವು ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಅನ್ವಯಿಸಲಿದೆ.

ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಮುಷ್ಕರ, ಪ್ರತಿಭಟನೆ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ
ಸಿಎಂ ಯೋಗಿ ಆದಿತ್ಯನಾಥ್
Follow us
ಗಂಗಾಧರ​ ಬ. ಸಾಬೋಜಿ
|

Updated on:Feb 16, 2024 | 10:34 PM

ಲಖನೌ, ಫೆಬ್ರವರಿ 16: ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಆಂದೋಲನದ ನಡುವೆ ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ, ಪ್ರತಿಭಟನೆ, ಧರಣಿ ನಡೆಸದಂತೆ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ನಿಷೇಧ ಹೇರಿದೆ. ಈ ನಿಯಮವು ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಅನ್ವಯಿಸಲಿದೆ. ಒಂದು ವೇಳೆ ಮುಷ್ಕರ ಅಥವಾ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದರೆ, ವಾರಂಟ್ ಇಲ್ಲದೆ ಬಂಧಿಸಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಿಬ್ಬಂದಿ ಡಾ.ದೇವೇಶ್ ಚತುರ್ವೇದ್​ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ.

ಆರು ತಿಂಗಳ ಕಾಲ ಮುಷ್ಕರಕ್ಕೆ ನಿಷೇಧ ಏಕೆ?

ಎಸ್ಮಾ ಕಾಯ್ದೆ ಜಾರಿಯಾದ ನಂತರ ಯಾವುದೇ ನೌಕರರು ಮುಷ್ಕರ ಅಥವಾ ಪ್ರತಿಭಟನೆ ಮಾಡುವ ಮೂಲಕ ಕಾಯ್ದೆ ಉಲ್ಲಂಘಿಸಿದಲ್ಲಿ ವಾರಂಟ್ ಇಲ್ಲದೇ ಬಂಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದಕ್ಕೂ ಮೊದಲು, ಯೋಗಿ ಸರ್ಕಾರವು 2023 ರಲ್ಲಿ ಆರು ತಿಂಗಳ ಕಾಲ ಮುಷ್ಕರವನ್ನು ನಿಷೇಧಿಸಿತ್ತು. ಆಗ ವಿದ್ಯುತ್ ಇಲಾಖೆ ನೌಕರರು ಮುಷ್ಕರ ನಡೆಸಿದ್ದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು.

ಇದನ್ನೂ ಓದಿ: Dilli Chalo: ದಿಲ್ಲಿ ಚಲೋ ಪ್ರತಿಭಟನೆ: ಶಂಭು ಗಡಿಯಲ್ಲಿ ಹೃದಯಾಘಾತದಿಂದ ರೈತ ಸಾವು

ನಾನಾ ಬೇಡಿಕೆಗಳನ್ನು ಮುಂದಿಟ್ಟು ರೈತರು ಬೀದಿಗಿಳಿದಿದ್ದಾರೆ. ಯುಪಿ-ದೆಹಲಿ ಗಡಿಭಾಗದ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.

ಎಸ್ಮಾ ಕಾಯ್ದೆ ಎಂದರೇನು ಮತ್ತು ಅದು ಯಾರಿಗೆ ಅನ್ವಯಿಸುತ್ತದೆ?

ಉತ್ತರ ಪ್ರದೇಶ ಸರ್ಕಾರವು ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ 1966 ರ ಅಡಿಯಲ್ಲಿ ಜಾರಿಗೊಳಿಸಿದ ಎಸ್ಮಾ ಕಾಯ್ದೆಯನ್ನು ರಾಜ್ಯಪಾಲರಿಂದ ಅನುಮೋದನೆ ಪಡೆದ ನಂತರ ಜಾರಿಗೆ ತರಲಾಯಿದೆ. ಪ್ರತಿಭಟನೆ ಮತ್ತು ಮುಷ್ಕರ ಮಾಡುವವರಿಗಾಗಿ AMSA ಕಾಯ್ದೆಯನ್ನು ಮಾಡಲಾಗಿದೆ. ಅದರ ಅನುಷ್ಠಾನದ ನಂತರ, ರಾಜ್ಯದಲ್ಲಿ ಪ್ರತಿಭಟನೆ, ಮುಷ್ಕರಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: Bharat bandh: ಈಗ ನಡೆಯುತ್ತಿರುವ ರೈತರ ಪ್ರತಿಭಟನೆ, ನಾಳೆಯ ಭಾರತ್ ಬಂದ್ ಭಿನ್ನ, ಹೇಗೆ?

ಈ ಕಾಯ್ದೆಯನ್ನು ಉತ್ತರ ಪ್ರದೇಶ ಸರ್ಕಾರವು ಕಳೆದ ವರ್ಷ ಜಾರಿಗೆ ತಂದಿತು. ಇದನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಆರು ತಿಂಗಳವರೆಗೆ ವಿಸ್ತರಿಸಲಾಗಿತ್ತು. ಎಸ್ಮಾ ಕಾಯ್ದೆ ಜಾರಿಯಾದ ನಂತರವು ಯಾವುದೇ ನೌಕರರು ಮುಷ್ಕರ ಅಥವಾ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಲ್ಲಿ, ಕಾಯಿದೆ ಉಲ್ಲಂಘಿಸಿದ ಆರೋಪದ ಮೇಲೆ ವಾರಂಟ್ ಇಲ್ಲದೆ ಮುಷ್ಕರ ನಿರತರನ್ನು ಬಂಧಿಸುವ ಮೂಲಕ ಸರ್ಕಾರದಿಂದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Fri, 16 February 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ