AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ
ಸಾಕ್ಷಿ ಮಹಾರಾಜ್​
TV9 Web
| Edited By: |

Updated on: Aug 04, 2021 | 11:35 AM

Share

ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ (Sakshi Maharaj)​ ಸದಾ ಒಂದಿಲ್ಲೊಂದು ವಿವಾದಗಳಿಗೇ ಸುದ್ದಿ ಮಾಡುತ್ತಿರುತ್ತಾರೆ. ಹಾಗೇ, ಈ ಸಲ ಸಮಾಜವಾದಿ ಪಾರ್ಟಿ(Samajwadi Party)ಯ ಅಖಿಲೇಶ್​ ಯಾದವ್(Akhilesh Yadav)​ಗೆ ಖಡಕ್​ ಎಚ್ಚರಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅದೂ ಕೂಡ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ತಂಟೆಗೆ ಬಂದರೆ ಸರಿ ಇರುವುದಿಲ್ಲ ನೋಡಿ..ಎಂದು ಎಚ್ಚರಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​ರಿಗೆ ಕಂಪ್ಯೂಟರ್​ ಕೂಡ ಆಪರೇಟ್ ಮಾಡಲು ಬರುವುದಿಲ್ಲ ಎಂದು ಅಖಿಲೇಶ್ ಯಾದವ್​ ಹೇಳಿದ್ದರು. ಅದರಿಂದ ಸಿಟ್ಟಾದ ಸಾಕ್ಷಿ ಮಹಾರಾಜ್​ ವಾರ್ನಿಂಗ್​ ನೀಡಿದ್ದಾರೆ.

ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದ ಸಾಕ್ಷಿ ಮಹಾರಾಜ್​, ಯೋಗಿ ಆದಿತ್ಯನಾಥ್​ ಅವರಿಗೆ ಕಂಪ್ಯೂಟರ್​ ಆಪರೇಟ್ ಮಾಡಲು ಬಾರದೆ ಇರಬಹುದು. ಆದರೆ ಜನರನ್ನು ಹೇಗೆ ಹೊಡೆದುರುಳಿಸಬೇಕು ಎಂಬುದು ಗೊತ್ತು. ಅಖಿಲೇಶ್​ ಯಾದವ್​ ಬಳಿ ಎಚ್ಚರಿಕೆಯಿಂದ ಇರಲು ಹೇಳಿ. ಮುಂದಿನ ಸರದಿ ಅವರದ್ದೇ ಆಗಿರಬಹುದು ಎಂದು ಹೇಳಿದ್ದಾರೆ. ಈ ಮಾತೀಗ ಸಿಕ್ಕಾಪಟೆ ವಿವಾದ ಸೃಷ್ಟಿಸಿದೆ. ಅಂದಹಾಗೆ ಈ ಕಾರ್ಯಕ್ರಮವನ್ನು ಬಿಜೆಪಿಯ ಸಾದರ್​ ಕ್ಷೇತ್ರದ ಶಾಸಕ ಪಂಕಜ್​ ಗುಪ್ತಾ ಆಯೋಜಿಸಿದ್ದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ. ನಮ್ಮ ರಾಜ್ಯಕ್ಕೆ ಇಷ್ಟು ಒಳ್ಳೆಯ ಮುಖ್ಯಮಂತ್ರಿ ಸಿಕ್ಕಿರಲಿಲ್ಲ ಮತ್ತು ದೇಶಕ್ಕೆ ಮೋದಿಯವರಷ್ಟು ಅದ್ಭುತ ವ್ಯಕ್ತಿ ಪ್ರಧಾನಿಯಾಗಿ ಸಿಕ್ಕಿರಲಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 2021ರಲ್ಲಿ ಹವಾಮಾನ ವೈಪರೀತ್ಯಗಳಿಂದ ತತ್ತರಿಸುತ್ತಿರುವ ಭಾರತ; ಕಾರಣವೇನು?

ಪ್ರಧಾನಿ ನಿವಾಸವನ್ನೇ ಬಾಡಿಗೆಗೆ ಇಟ್ಟ ಪಾಕಿಸ್ತಾನ ಸರ್ಕಾರ; ಬಂಗಲೆ ಬಿಟ್ಟ ಇಮ್ರಾನ್ ಖಾನ್​

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್