AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಂಗ್ ಸೆಂಟರ್​​ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH, 1.56 ಕೋಟಿ ರೂ ಪರಿಹಾರ

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 1.56 ಕೋಟಿ ರೂಪಾಯಿಗಳ ಪರಿಹಾರ ಒದಗಿಸಿದೆ. ಕೋಚಿಂಗ್ ಸೆಂಟರ್‌ಗಳ ವಂಚನೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಗಳು NCH ಗೆ ದೂರು ನೀಡಿದ್ದರು. ಇದರಿಂದಾಗಿ ಕೋಚಿಂಗ್ ಸೆಂಟರ್‌ಗಳು ವಿದ್ಯಾರ್ಥಿ ಕೇಂದ್ರಿತ ವಿಧಾನ ಅಳವಡಿಸಿಕೊಳ್ಳಬೇಕು ಮತ್ತು ಪಾರದರ್ಶಕ ಮರುಪಾವತಿ ನೀತಿಯನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ.

ಕೋಚಿಂಗ್ ಸೆಂಟರ್​​ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH, 1.56 ಕೋಟಿ ರೂ ಪರಿಹಾರ
ಕೋಚಿಂಗ್ ಸೆಂಟರ್​​ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH, 1.56 ಕೋಟಿ ರೂ ಪರಿಹಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 23, 2025 | 8:44 PM

ನವದೆಹಲಿ, ಫೆಬ್ರವರಿ 23: ಕೋಚಿಂಗ್ ಸೆಂಟರ್ (Coaching center) ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ.

ಇತ್ತೀಚಿನ ದಿನಗಳಲ್ಲಿ ನಾಗರಿಕ ಸೇವೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (ಕೋಚಿಂಗ್ ಸೆಂಟರ್) ತೆರೆದು ಶುಲ್ಕ ಪಾವತಿಸಿಕೊಂಡು ಬಳಿಕ ಸೀಟ್ ಇಲ್ಲವೆಂದು ವಂಚಿಸುವುದು ಮತ್ತು ಸೂಕ್ತ, ಸಮರ್ಪಕ ಅಭ್ಯಾಸ ಪರಿಕರ, ತರಗತಿ ನೀಡದೇ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಲೇ ಇದ್ದವು. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಅವರ ಮಾರ್ಗದರ್ಶನ, ಸೂಚನೆಯಂತೆ ಸಚಿವಾಲಯವು, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ನೇರವಾಗಿ ದೂರು ಸಲ್ಲಿಸಲು ಅವಕಾಶ ಒದಗಿಸಿದ್ದು ಅಲ್ಲದೇ, ಅಂತಹ ದೂರುಗಳಿಗೆ ತಕ್ಷಣವೇ ಪರಿಹಾರ ಸಹ ಕಲ್ಪಿಸಿಕೊಟ್ಟಿದೆ.

600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಿದ NCH

ದೇಶದ ವಿವಿಧೆಡೆಯಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ NCH ಗೆ ದೂರು ಸಲ್ಲಿಸಿದ ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳ 600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿದೆ. ಶಿಕ್ಷಣ ಸೇವೆಯಲ್ಲಿ ನ್ಯೂನ್ಯತೆ ವೆಸಗಿದ ಕೋಚಿಂಗ್ ಸೆಂಟರ್​ಗಳಿಂದಲೇ ಒಟ್ಟು 1.56 ಕೋಟಿ ರೂ. ಪರಿಹಾರ ರೂಪದಲ್ಲಿ ಮರುಪಾವತಿ ಮಾಡಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Fact Check: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕತ್ತಿವರಸೆ ಮಾಡುತ್ತಿರುವುದು ನಿಜವೇ?: ವೈರಲ್ ವಿಡಿಯೋದ ಸತ್ಯಾಂಶ ಏನು?

ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳಿಗೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ, ತರಬೇತಿ ಸಂಸ್ಥೆಗಳು ನಿಯಮಾನುಸಾರ ಮರುಪಾವತಿಗೆ ನಿರಾಕರಿಸುದ್ದವು. ಹೀಗಾಗಿ ಅಭ್ಯರ್ಥಿಗಳು ಅಂತಿಮವಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ನ್ಯಾಯಕ್ಕೆ ಮೊರೆ ಹೋಗಿದ್ದರು. ಗ್ರಾಹಕ ಇಲಾಖೆ ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿ ಅಗತ್ಯ ಸೇವೆ ಪೂರೈಸದ, ತರಗತಿ ವಿಳಂಬ ಮತ್ತು ರದ್ದಾದ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ತ್ವರಿತ ನ್ಯಾಯ ಕಲ್ಪಿಸುವ ಮೂಲಕ ನೆರವಾಗಿದೆ.

ಕೋಚಿಂಗ್ ಸೆಂಟರ್​​ಗಳಿಗೆ ನಿರ್ದೇಶನ

ತರಬೇತಿ ಕೇಂದ್ರಗಳು ಕೇವಲ ವ್ಯಾವಹಾರಿಕ ದೃಷ್ಟಿಯಿಂದ ನೋಡದೇ, ವಿದ್ಯಾರ್ಥಿ ಕೇಂದ್ರಿತ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಂದ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವಂತಹ ವಂಚನೆಗೆ ಅಂತ್ಯ ಹಾಡಬೇಕು ಎಂದು ಗ್ರಾಹಕ ವ್ಯವಹಾರಗಳ ಇಲಾಖೆ (DoCA) ನಿರ್ದೇಶಿಸಿದೆ.

ಮರುಪಾವತಿ ನಿರಾಕರಿಸಿದರೆ ಸಹಿಸಲ್ಲ

ಎಲ್ಲಾ ತರಬೇತಿ ಕೇಂದ್ರಗಳು ವಿದ್ಯಾರ್ಥಿ ಕೇಂದ್ರಿತ ವಿಧಾನ ಅಳವಡಿಸಿಕೊಳ್ಳುವ ಜತೆಗೆ ವಿದ್ಯಾರ್ಥಿಗಳ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಸ್ಪಷ್ಟ, ಪಾರದರ್ಶಕ ಮರುಪಾವತಿ ನೀತಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಕಾನೂನುಬದ್ಧ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವ ಇಂಥ ವಂಚನೆಯನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಶಿಕ್ಷಣ ಸಂಸ್ಥೆಗಳು ಗ್ರಾಹಕರ ಹಕ್ಕುಗಳನ್ನು ಎತ್ತಿ ಹಿಡಿಯಬೇಕು ಎಂದೂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಿವಿಧ ರಾಜ್ಯಗಳಿಂದ ಬಂದ ದೂರುಗಳು

  • ನಿರಂತರ ಅಧ್ಯಯನಕ್ಕಾಗಿ ಹಾಸ್ಟೆಲ್ ಸೌಲಭ್ಯ ಪಡೆದಿದ್ದರೂ ಸರಿಯಾದ ಸೇವೆ ನೀಡುವಲ್ಲಿ ಬಹು ನ್ಯೂನತೆಗಳಿವೆ ಎಂದು ಚೆನ್ನೈ, ತಮಿಳುನಾಡು ಭಾಗದ ವಿದ್ಯಾರ್ಥಿಗಳು NCH ಮೊರೆ ಹೋಗಿದ್ದರು.
  • ಕೆಲವೇ ಸೀಟುಗಳು ಉಳಿದಿವೆ ಎಂದು ಮನೋವಿಜ್ಞಾನ ಕಾರ್ಯಾಗಾರಕ್ಕೆ ಸೆಳೆದ ಸಂಸ್ಥೆಯೊಂದು ಪಾವತಿ ಮಾಡಿದ ನಂತರ ಸೀಟು ನಿರಾಕರಿಸಿತು ಮತ್ತು ಶುಲ್ಕ ಮರುಪಾವತಿಗೂ ನಿರಾಕರಿಸಿತು ಎಂದಿದ್ದರೆ ರಾಜ್‌ಕೋಟ್, ಗುಜರಾತ್ ಅಭ್ಯರ್ಥಿಗಳು.
  • JEE ಕೋರ್ಸ್ ಖರೀದಿಸಿದ್ದು, ಪಾವತಿಯ ಪುರಾವೆಯನ್ನು ಒದಗಿಸಿದರೂ ಸಂಸ್ಥೆ ಖರೀದಿಯನ್ನು ನಿರಾಕರಿಸಿತ್ತು. NCH ಮಧ್ಯಸ್ಥಿಕೆಯಿಂದ ಮರುಪಾವತಿ ಸುಲಭವಾಯಿತು ಎಂದಿವೆ ಜಮ್ಶೆಡ್ಪುರ, ಜಾರ್ಖಂಡ್.

ಇದನ್ನೂ ಓದಿ: ಮಹಾರಾಷ್ಟ್ರದ ಸರ್ಕಾರಿ ಬಸ್​ಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರಿಗೆ ನೀಡುತ್ತಿರುವ ರಿಯಾಯಿತಿ ರದ್ದಾಗುತ್ತಾ?

ಹೀಗೆ ದೇಶದ ವಿವಿಧೆಡೆಯ ವೆಲ್ಲೂರು, ತಮಿಳುನಾಡು, ಕೋಟಾ, ರಾಜಸ್ಥಾನ, ಕೊರ್ಬಾ, ಛತ್ತೀಸ್‌ಗಢ, ಔರಂಗಾಬಾದ್ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಅನ್ಯಾಯಕ್ಕೆ ಒಳಗಾದವರು NCH ಮೊರೆ ಹೋಗಿದ್ದು, ಇವರೆಲ್ಲರಿಗೂ ಪರಿಹಾರ ಕಲ್ಪಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ