AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ದಾಸ್ತಾನು ಇಲ್ಲ ಎಂದ ದೆಹಲಿ ಸರ್ಕಾರ; ಎನ್​ಟಿಪಿಸಿ ಹೇಳಿದ್ದೇ ಬೇರೆ!

ತೀವ್ರ ಕಲ್ಲಿದ್ದಲಿನ ಕೊರತೆಯ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ಮತ್ತು ಆಸ್ಪತ್ರೆಗಳ ಕಾರ್ಯ ಸ್ಥಗಿತಗೊಳ್ಳುವ ಮುನ್ಸೂಚನೆಯನ್ನು ದೆಹಲಿ ಸರ್ಕಾರ ನೀಡಿತ್ತು. ಆದರೆ, ಎನ್​ಟಿಪಿಸಿ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದೆ.

ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ದಾಸ್ತಾನು ಇಲ್ಲ ಎಂದ ದೆಹಲಿ ಸರ್ಕಾರ; ಎನ್​ಟಿಪಿಸಿ ಹೇಳಿದ್ದೇ ಬೇರೆ!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Apr 29, 2022 | 2:01 PM

Share

ನವದೆಹಲಿ: ದಾದ್ರಿ-II ಮತ್ತು ಉಂಚಹಾರ್‌ ವಿದ್ಯುತ್‌ ಸ್ಥಾವರಗಳಲ್ಲಿ ಕೇವಲ ಎರಡು ದಿನಗಳ ಕಾಲ ಮಾತ್ರ ಕಲ್ಲಿದ್ದಲು ದಾಸ್ತಾನು (Coal Supply) ಇದೆ ಎಂದು ದೆಹಲಿ ಸರ್ಕಾರ (Delhi Government) ಹೇಳಿಕೆ ನೀಡಿತ್ತು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಎನ್‌ಟಿಪಿಸಿ ಲಿಮಿಟೆಡ್‌ ಹೇಳಿಕೆ ನೀಡಿದ್ದು, ಎರಡೂ ಸ್ಥಾವರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ, ನಿಯಮಿತ ಪೂರೈಕೆಗಳನ್ನು ಪಡೆಯುತ್ತಿವೆ ಎಂದು ಹೇಳಿದೆ. ಪ್ರಸ್ತುತ ಉಂಚಹಾರ್ ಮತ್ತು ದಾದ್ರಿ ಸ್ಥಾವರಗಳು ಗ್ರಿಡ್‌ಗೆ ಶೇ. 100ಕ್ಕಿಂತ ಹೆಚ್ಚು ದರದ ಸಾಮರ್ಥ್ಯವನ್ನು ಘೋಷಿಸುತ್ತಿವೆ. ಉಂಚಹಾರ್ ಮತ್ತು ದಾದ್ರಿಯ ಎಲ್ಲಾ ಘಟಕಗಳು ಉಂಚಹಾರ್ ಘಟಕ 1 ಅನ್ನು ಹೊರತುಪಡಿಸಿ ಪೂರ್ಣ ಲೋಡ್‌ನಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು NTPC ಹೇಳಿಕೆಯಲ್ಲಿ ತಿಳಿಸಿದೆ.

ತೀವ್ರ ಕಲ್ಲಿದ್ದಲಿನ ಕೊರತೆಯ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ಮತ್ತು ಆಸ್ಪತ್ರೆಗಳ ಕಾರ್ಯ ಸ್ಥಗಿತಗೊಳ್ಳುವ ಮುನ್ಸೂಚನೆಯನ್ನು ದೆಹಲಿ ಸರ್ಕಾರ ನೀಡಿತ್ತು. ಕಲ್ಲಿದ್ದಲು ಕೊರತೆಯ ಬಿಕ್ಕಟ್ಟಿನ ತೀವ್ರತೆಯ ಮಧ್ಯೆ, ದೆಹಲಿ ಸರ್ಕಾರವು ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ದೆಹಲಿಯ ಪ್ರಮುಖ ಸಂಸ್ಥೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಸಂಭವನೀಯ ಹಿನ್ನಡೆಯ ಬಗ್ಗೆ ಎಚ್ಚರಿಕೆ ನೀಡಿತ್ತು. ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಈ ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಸಭೆ ನಡೆಸಿದ್ದು, ರಾಷ್ಟ್ರ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಸ್ಥಾವರಗಳಲ್ಲಿ ಸಾಕಷ್ಟು ಕಲ್ಲಿದ್ದಲು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ಮನವಿ ಮಾಡಿದ್ದರು.

ದಾದ್ರಿ-II ಮತ್ತು ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಿಂದಾಗಿ, ದೆಹಲಿ ಮೆಟ್ರೋ ಮತ್ತು ದೆಹಲಿ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಅನೇಕ ಅಗತ್ಯ ಸಂಸ್ಥೆಗಳಿಗೆ 24 ಗಂಟೆಗಳ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಬಹುದು ಎಂದು ಸರ್ಕಾರ ಹೇಳಿತ್ತು. ದೆಹಲಿಯ ವಿದ್ಯುತ್ ಬೇಡಿಕೆಯ ಶೇ. 25ರಿಂದ 30ರಷ್ಟನ್ನು ಈ ವಿದ್ಯುತ್ ಕೇಂದ್ರಗಳ ಮೂಲಕ ಪೂರೈಸಲಾಗುತ್ತಿದೆ. ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್​ನ ದಾದ್ರಿ-II ಮತ್ತು ಝಜ್ಜರ್ (ಅರಾವಲಿ) ಅನ್ನು ಪ್ರಾಥಮಿಕವಾಗಿ ದೆಹಲಿಯ ವಿದ್ಯುತ್ ಅಗತ್ಯವನ್ನು ಪೂರೈಸಲು ಸ್ಥಾಪಿಸಲಾಯಿತು. ಆದರೆ, ಈ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ದಾಸ್ತಾನು ಬಹಳ ಕಡಿಮೆ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ದಾದ್ರಿ-II, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಮತ್ತು ಝಜ್ಜರ್ ವಿದ್ಯುತ್ ಸ್ಥಾವರಗಳು ದೆಹಲಿಗೆ ದಿನಕ್ಕೆ 1,751 ಮೆಗಾವ್ಯಾಟ್ ವಿದ್ಯುತ್ ಅನ್ನು ಪೂರೈಸುತ್ತವೆ. ದಾದ್ರಿ-II ಪವರ್ ಸ್ಟೇಷನ್‌ನಿಂದ ದೆಹಲಿಯು ಗರಿಷ್ಠ 728 ಮೆಗಾವ್ಯಾಟ್ ಪೂರೈಕೆಯನ್ನು ಪಡೆದರೆ ಉಂಚಹಾರ್ ಕೇಂದ್ರದಿಂದ 100 ಮೆಗಾವ್ಯಾಟ್ ವಿದ್ಯುತ್ ಪಡೆಯುತ್ತದೆ. ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವುದರ ಜೊತೆಗೆ ದಾಸ್ತಾನುಗಳನ್ನು ನಿರ್ಮಿಸಲು ಮುಂದಿನ 3 ವರ್ಷಗಳವರೆಗೆ ಅದರ ಆಮದುಗಳನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳನ್ನು ಕೇಳಿದೆ.

ದೆಹಲಿ ಸರ್ಕಾರ ಗುರುವಾರ ತಾನು ವಿದ್ಯುತ್‌ ಪಡೆಯುವ ಐದು ಕೇಂದ್ರಗಳ ಪೈಕಿ ಎರಡರಲ್ಲಿ ಕಲ್ಲಿದ್ದಲು ಕೇವಲ ಒಂದು ಅಥವಾ ಎರಡು ದಿನ ಮಾತ್ರ ಇರುತ್ತದೆ ಎಂದು ಹೇಳಿತ್ತು. ಸಾಕಷ್ಟು ದಾಸ್ತಾನು ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ದೆಹಲಿಯ ಕೆಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌ಗಳನ್ನು ತಡೆಗಟ್ಟುವಲ್ಲಿ ಈ ವಿದ್ಯುತ್ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತವೆ ಮತ್ತು ದೆಹಲಿ ಮೆಟ್ರೋ ರೈಲು ನಿಗಮ, ಆಸ್ಪತ್ರೆಗಳು ಮತ್ತು ಬೇಸಿಗೆಯಲ್ಲಿ ಹಲವಾರು ಪ್ರದೇಶಗಳಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಾತ್ರಿಪಡಿಸುವಲ್ಲಿ ಇದು ಅತ್ಯಗತ್ಯ ಎಂದು ರಾಜ್ಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಗುರುವಾರ ಹೇಳಿದ್ದರು.

ಆದರೆ, ಉಂಚಹಾರ್ ಮತ್ತು ದಾದ್ರಿ ಸ್ಥಾವರಗಳು ಗ್ರಿಡ್‌ಗೆ ಶೇ. 100ಕ್ಕಿಂತ ಹೆಚ್ಚು ದರದ ಸಾಮರ್ಥ್ಯವನ್ನು ಘೋಷಿಸುತ್ತಿವೆ. ಉಂಚಹಾರ್ ಮತ್ತು ದಾದ್ರಿಯ ಎಲ್ಲಾ ಘಟಕಗಳು ಉಂಚಹಾರ್ ಘಟಕ 1 ಅನ್ನು ಹೊರತುಪಡಿಸಿ ಪೂರ್ಣ ಲೋಡ್‌ನಲ್ಲಿ ಕಾರ್ಯ ನಿರ್ವಹಿಸುತ್ತಿವೆ, ಇದು ವಾರ್ಷಿಕ ಯೋಜಿತ ಕೂಲಂಕುಷ ಪರೀಕ್ಷೆಗೆ ಒಳಪಟ್ಟಿದೆ ಎಂದು ಎನ್​ಟಿಪಿಸಿ ಹೇಳಿಕೆ ನೀಡಿದೆ. ದಾದ್ರಿಯ ಎಲ್ಲಾ 6 ಘಟಕಗಳು ಮತ್ತು ಉಂಚಹಾರ್‌ನ 5 ಘಟಕಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೆ, ನಿಯಮಿತವಾಗಿ ಕಲ್ಲಿದ್ದಲು ಪೂರೈಕೆಯನ್ನು ಕೂಡ ಪಡೆಯುತ್ತಿವೆ. ಪ್ರಸ್ತುತ ದಾಸ್ತಾನು ಕ್ರಮವಾಗಿ 140000 MT ಮತ್ತು 95000 MT ಮತ್ತು ಆಮದು ಕಲ್ಲಿದ್ದಲು ಸರಬರಾಜು ಕೂಡ ಪೈಪ್‌ಲೈನ್‌ನಲ್ಲಿದೆ.

ಇದನ್ನೂ ಓದಿ: Coal Shortage-Load Shedding: ದೇಶದಲ್ಲಿ ಮತ್ತೆ ಕಲ್ಲಿದ್ದಲು ಕೊರತೆ; ಕೆಲವು ಕಡೆ ದಿನಕ್ಕೆ 8 ಗಂಟೆ ವಿದ್ಯುತ್ ಕಡಿತ ಶುರು

ಕಲ್ಲಿದ್ದಲು ಕೊರತೆ ಹಿನ್ನೆಲೆಯಲ್ಲಿ ಮೆಟ್ರೋ, ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ದೆಹಲಿ ಸರ್ಕಾರ ಎಚ್ಚರಿಕೆ

Published On - 2:00 pm, Fri, 29 April 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!