AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಶೂಟ್ ಮಾಡಿ ಮೂವರ ಬಂಧನ

ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧನದ ಸಮಯದಲ್ಲಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ದಾಳಿ ಮಾಡಿದರು. ಹೀಗಾಗಿ, ಪೊಲೀಸರು ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸುವ ಮೂಲಕ ಅವರನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡಿದ್ದ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಶೂಟ್ ಮಾಡಿ ಮೂವರ ಬಂಧನ
Coimbatore Gang Rape
ಸುಷ್ಮಾ ಚಕ್ರೆ
|

Updated on: Nov 04, 2025 | 4:56 PM

Share

ಕೊಯಮತ್ತೂರು, ನವೆಂಬರ್ 4: ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಭಾನುವಾರ ತಮಿಳುನಾಡಿನ ಕೊಯಮತ್ತೂರಿನ (Coimbatore Gang Rape) ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿದ್ದರು. ನಂತರ ಅವರನ್ನು ಬಂಧಿಸಿದ್ದರು. ಆದರೆ, ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದರೂ ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸರು ತೋರಿಸಿದ ಸುಮಾರು 60 ಶಂಕಿತರ ಫೋಟೋಗಳಲ್ಲಿ ಯಾರೊಬ್ಬರನ್ನೂ ಇನ್ನೂ ಗುರುತಿಸಿಲ್ಲ.

ಭಾನುವಾರ ರಾತ್ರಿ 10.30ರ ಸುಮಾರಿಗೆ ಮೂವರು ಪುರುಷರು ಮೊಪೆಡ್‌ನಲ್ಲಿ ಬಂದು, ಕಾರಿನ ವಿಂಡ್ ಷೀಲ್ಡ್ ಅನ್ನು ಪುಡಿಮಾಡಿ, ಆ ಯುವತಿಯ ಗೆಳೆಯನ ಮೇಲೆ ದಾಳಿ ಮಾಡಿದ್ದರು. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಪದೇಪದೆ ಅತ್ಯಾಚಾರ ನಡೆಸಿದ್ದರು.

ಇದನ್ನೂ ಓದಿ: ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ 15 ವರ್ಷದ ಬಾಲಕ

ರಾತ್ರಿ 11 ಗಂಟೆ ಸುಮಾರಿಗೆ ಆಕೆಯ ಗೆಳೆಯ ಪೀಲಮೇಡು ಪೊಲೀಸರನ್ನು ಸಂಪರ್ಕಿಸಿದ್ದ. ಆ ರಾತ್ರಿಯೇ ಪೊಲೀಸರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ವಿವಸ್ತ್ರಳಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆ ಯುವತಿ ಪೊಲೀಸರಿಗೆ ಸಿಕ್ಕಿದ್ದಳು. ವೈದ್ಯಕೀಯ ಚಿಕಿತ್ಸೆಗಾಗಿ, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಮೂವರು ಶಂಕಿತರಾದ ಸತೀಶ್, ಗುಣ ಮತ್ತು ಕಾರ್ತಿಕ್ ಎಂಬುವವರ ಮೇಲೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರೆಲ್ಲರೂ ಮಧುರೈ ಜಿಲ್ಲೆಯಿಂದ ಬಂದವರು ಮತ್ತು ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಯಮತ್ತೂರಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಗುಂಡೇಟಿನಿಂದಾಗಿ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಮೂವರಿಂದ ಸಾಮೂಹಿಕ ಅತ್ಯಾಚಾರ

ಅತ್ಯಾಚಾರಕ್ಕೊಳಗಾದ ಯುವತಿಗೆ ಶಂಕಿತರ 60ಕ್ಕೂ ಹೆಚ್ಚು ಫೋಟೋಗಳನ್ನು ನೀಡಲಾಗಿದ್ದರೂ ಆಕೆ ತನ್ನ ಮೇಲೆ ದಾಳಿ ನಡೆಸಿದವರನ್ನು ಇನ್ನೂ ಗುರುತಿಸಲು ಸಾಧ್ಯವಾಗಲಿಲ್ಲ. ಪೊಲೀಸ್ ಮೂಲದ ಪ್ರಕಾರ, ಆ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು ಕೂಡ ಅವರ ಮುಖಗಳನ್ನು ಸೆರೆಹಿಡಿಯಲು ಸಾಧ್ಯವಾಗಿಲ್ಲ. ಆಘಾತಕ್ಕೊಳಗಾಗಿರುವ ಯುವತಿ ಚೇತರಿಸಿಕೊಂಡ ನಂತರ ಆಕೆಯನ್ನು ಮತ್ತೊಮ್ಮೆ ವಿಚಾರಣೆ ನಡೆಸಲಾಗುವುದು, ಆಗ ಆಕೆ ಅಪರಾಧಿಗಳನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?