AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ

19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ ಎಂದುಕೊಂಡು ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದಿದ್ದಾನೆ. ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಸುಷ್ಮಾ ಚಕ್ರೆ
|

Updated on: Oct 30, 2024 | 4:22 PM

Share

ಕೊಯಮತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನಗೆ ಸೂಪರ್ ಪವರ್ ಇದೆ ಮತ್ತು ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದ ಘಟನೆ ಕೊಯಮತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಬಿಟೆಕ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ, ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನಿಂದ ಜಿಗಿದಿದ್ದಾನೆ.

ಕೊಯಮತ್ತೂರಿನ ಮೈಲೇರಿಪಾಳ್ಯಂನಲ್ಲಿ ವರದಿಯಾದ ಆಘಾತಕಾರಿ ಘಟನೆಯಲ್ಲಿ, 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಳ್ಳಲು ಈ ರೀತಿ ಮಾಡಿಲ್ಲ. ಬದಲಾಗಿ ಅವನು ತನ್ನಲ್ಲಿ ಸೂಪರ್ ಪವರ್ ಇದೆ, ನಾನು ಆಕಾಶದಲ್ಲಿ ಹಾರಬಲ್ಲೆ ಎಂದು ಬಲವಾಗಿ ನಂಬಿದ್ದ. ಇದರಿಂದ ಆತ ಕೆಳಗೆ ಹಾರಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ಕೊಯಮತ್ತೂರು ಬಳಿಯ ಖಾಸಗಿ ಕಾಲೇಜೊಂದರ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಎ. ಪ್ರಭು ಅಕ್ಟೋಬರ್ 28ರಂದು ತನ್ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿರುವ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಮೆಕ್ಕೂರು ಗ್ರಾಮದ ಪ್ರಭು ಮೂರನೇ ವರ್ಷದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿದ್ಯಾರ್ಥಿಯಾಗಿದ್ದಾನೆ. ಅವನ ಕಾಲು, ತೋಳುಗಳಿಗೆ ತೀವ್ರ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More