AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಚಳಿಯೋ ಚಳಿ! ಮಂಜು ಮುಸುಕಿದ ವಾತಾವರಣದಲ್ಲಿ ಜನ ಪರದಾಟ

ದೆಹಲಿ ಲೋಧಿ ರಸ್ತೆಯಲ್ಲಿ ಕನಿಷ್ಠ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ ಭಾಗಗಳಲ್ಲೂ ಚಳಿ ಹವಾಮಾನ ಮುಂದುವರೆದಿದೆ. ದೆಹಲಿ ಭಾಗದಲ್ಲಿ ಶೀತಗಾಳಿ ಪರಿಣಾಮ ಮುಂದಿನ ಮೂರು ದಿನಗಳವರೆಗೆ ಇರಲಿದೆ.

ದೆಹಲಿಯಲ್ಲಿ ಚಳಿಯೋ ಚಳಿ! ಮಂಜು ಮುಸುಕಿದ ವಾತಾವರಣದಲ್ಲಿ ಜನ ಪರದಾಟ
ದೆಹಲಿಯಲ್ಲಿ ಮಂಜು ಮುಸುಕಿದ ವಾತಾವರಣ
TV9 Web
| Edited By: |

Updated on:Apr 06, 2022 | 11:23 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿಯ ಪರಿಸ್ಥಿತಿ ಇಂದೂ ಕೂಡ ಮುಂದುವರೆದಿದೆ. ನಾಲ್ಕೈದು ದಿನಗಳಿಂದ ದೆಹಲಿ ಜನರು ಚಳಿಯಲ್ಲಿ ಗಡಗಡ ನಡುಗುತ್ತಿದ್ದು ಇನ್ನೂ ಮೂರು ದಿನ ಇಷ್ಟೇ ಚಳಿ ಅನುಭವಿಸಬೇಕಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಾಪಮಾನ ಕುಸಿತ ಕಂಡ ಪರಿಣಾಮ ಮಂಜು ಮುಸುಕಿದ ವಾತಾವರಣ ದೆಹಲಿ ಜನರನ್ನು ಕಾಡಿದ್ದು, 201 ಮೀಟರ್​ಗಳ ಗೋಚರತೆ ದಾಖಲಾಗಿದೆ.

ದೆಹಲಿ ಲೋಧಿ ರಸ್ತೆಯಲ್ಲಿ ಕನಿಷ್ಠ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ ಭಾಗಗಳಲ್ಲೂ ಚಳಿ ಹವಾಮಾನ ಮುಂದುವರೆದಿದೆ. ದೆಹಲಿ ಭಾಗದಲ್ಲಿ ಶೀತಗಾಳಿ ಪರಿಣಾಮ ಮುಂದಿನ ಮೂರು ದಿನಗಳವರೆಗೆ ಇರಲಿದೆ. ತಾಪಮಾನ 3 ಡಿಗ್ರಿ ಸೆಲ್ಸಿಯಸ್​ಗೆ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿಕೆ ಕೊಟ್ಟಿದೆ.

ಡಿಸೆಂಬರ್ 26ರಂದು ಹಿಮಾಲಯ ಭಾಗದಲ್ಲಿ ಮತ್ತೊಂದು ಶೀತಗಾಳಿ ಬೀಸುವ ಸಾಧ್ಯತೆ ಇದ್ದು ತಾಪಮಾನ ಕುಸಿತ ಕಾಣಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪಂಜಾಬ್, ಹರ್ಯಾಣ ಸಹಿತ ಉತ್ತರ ಭಾರತದ ಇತರ ಪ್ರದೇಶಗಳಲ್ಲೂ ಮಂಜು ಮುಸುಕಿದ ವಾತಾವರಣ, ಚಳಿ ಹವಾಮಾನ ಕಂಡುಬಂದಿದೆ.

ದೆಹಲಿಯಲ್ಲಿ ಗುರುವಾರ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಶುಕ್ರವಾರ ಗರಿಷ್ಠ 19.8 ಡಿಗ್ರಿ ಸೆಲ್ಸಿಯಸ್ ಮತ್ತು ಶನಿವಾರ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಜಫಾರ್​ಪುರ್ ಕಳೆದ ಶುಕ್ರವಾರ ಕನಿಷ್ಠ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡಿತ್ತು.

ನಗರದ ಗಾಳಿ ಗುಣಮಟ್ಟ ಸೂಚ್ಯಂಕವು (AQI) ಇಂದು ಬೆಳಗ್ಗೆ 9 ಗಂಟೆಯ ವರದಿಯಂತೆ 438 ಆಗಿದೆ. ಹಿಂದಿನ 24 ಗಂಟೆಗಳಲ್ಲಿ 418 AQI ದಾಖಲಾಗಿತ್ತು. ಸೋಮವಾರ 332 ಮತ್ತು ಭಾನುವಾರ 290 AQI ಕಂಡುಬಂದಿತ್ತು. ಈ ಮೂಲಕ ಗಾಳಿ ಗುಣಮಟ್ಟ ಸೂಚ್ಯಂಕದಲ್ಲಿ ಏರಿಕೆ ಕಾಣಬಹುದಾಗಿದೆ.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ

Published On - 12:30 pm, Wed, 23 December 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ