Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ

Comedian Munawar Faruqui ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು

Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ
ಮುನಾವರ್ ಫರೂಖಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 7:30 PM

ಮುಂಬೈ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ 35 ದಿನಗಳ ಜೈಲುವಾಸದ ನಂತರ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್ ಮುನಾವರ್​ಗೆ ಮಧ್ಯಂತರ ಜಾಮೀನು ನೀಡಿತ್ತು. ಶನಿವಾರ ರಾತ್ರಿ ಇಂದೋರ್ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಮುನಾವರ್, ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ನನಗೆ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದೋರ್​ನ 56 ಡುಕಾನ್​​ ಎಂಬಲ್ಲಿನ ಕೆಫೆಯೊಂದರಲ್ಲಿ ಹೊಸವರ್ಷಾಚರಣೆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮುನಾವರ್​ ಹಿಂದೂ ದೇವತೆಗಳು ಮತ್ತು ಗೃಹ ಸಚಿವ ಅಮಿತ್​ ಶಾಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕಿ ಮಾಲಿನಿ ಗೌರ್​ ಪುತ್ರ, ಹಿಂದ್​ ರಕ್ಷಕ್​ ಸಂಘಟನೆಯ ಸಮಾವೇಶಕನೂ ಆಗಿರುವ ಏಕಲವ್ಯ ಗೌರ್​ ದೂರು ದಾಖಲಿಸಿದ್ದರು. ಅವರ ದೂರಿನ ಅನ್ವಯ ಮುನಾವರ್​ ಫಾರೂಖಿ ಸೇರಿ ಒಟ್ಟು ಆರು ಮಂದಿಯ ಬಂಧನವಾಗಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ನಂತರ ಫೆಬ್ರುವರಿ 5 ರಂದು ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Munawar Faruqui ಮುನಾವರ್​ ಫಾರೂಖಿ ವಿರುದ್ಧ ಕೇಸ್​ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ