ಮುಂಬೈ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ 35 ದಿನಗಳ ಜೈಲುವಾಸದ ನಂತರ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಸುಪ್ರೀಂಕೋರ್ಟ್ ಮುನಾವರ್ಗೆ ಮಧ್ಯಂತರ ಜಾಮೀನು ನೀಡಿತ್ತು. ಶನಿವಾರ ರಾತ್ರಿ ಇಂದೋರ್ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಮುನಾವರ್, ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ನನಗೆ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.
ಇಂದೋರ್ನ 56 ಡುಕಾನ್ ಎಂಬಲ್ಲಿನ ಕೆಫೆಯೊಂದರಲ್ಲಿ ಹೊಸವರ್ಷಾಚರಣೆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮುನಾವರ್ ಹಿಂದೂ ದೇವತೆಗಳು ಮತ್ತು ಗೃಹ ಸಚಿವ ಅಮಿತ್ ಶಾಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕಿ ಮಾಲಿನಿ ಗೌರ್ ಪುತ್ರ, ಹಿಂದ್ ರಕ್ಷಕ್ ಸಂಘಟನೆಯ ಸಮಾವೇಶಕನೂ ಆಗಿರುವ ಏಕಲವ್ಯ ಗೌರ್ ದೂರು ದಾಖಲಿಸಿದ್ದರು. ಅವರ ದೂರಿನ ಅನ್ವಯ ಮುನಾವರ್ ಫಾರೂಖಿ ಸೇರಿ ಒಟ್ಟು ಆರು ಮಂದಿಯ ಬಂಧನವಾಗಿತ್ತು.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ನಂತರ ಫೆಬ್ರುವರಿ 5 ರಂದು ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.
Munawar Faruqui ಮುನಾವರ್ ಫಾರೂಖಿ ವಿರುದ್ಧ ಕೇಸ್ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !