ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದ ರಾಹುಲ್ ಗಾಂಧಿ

Nayana Rajeev

Nayana Rajeev |

Updated on: Jan 24, 2023 | 2:28 PM

ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್(Digvijaya Singh)ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್(Digvijaya Singh)ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಸೇನೆ ಏನೇ ಮಾಡಿದರೂ ಅದಕ್ಕೆ ಪುರಾವೆ ಬೇಕಿಲ್ಲ. ದಿಗ್ವಿಜಯ್ ಸಿಂಗ್ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದ ಅವರು, ಕಾಂಗ್ರೆಸ್ ಮತ್ತು ನಾನು ಅದನ್ನು ಒಪ್ಪುವುದಿಲ್ಲ. ಸೇನೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.

ದಿಗ್ವಿಜಯ ಸಿಂಗ್ ಹೇಳಿಕೆ ಬಳಿಕ ಕಾಂಗ್ರೆಸ್ ವಿರುದ್ಧ ತುಂಬಾ ಟೀಕೆಗಳು ವ್ಯಕ್ತವಾಗಿದ್ದವು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಬಗ್ಗೆ ಭಾರತ ಸರ್ಕಾರದ ಬಳಿ ಯಾವುದೇ ಪುರಾವೆಗಳಿಲ್ಲ, ಸರ್ಕಾರವು ಸುಳ್ಳು ಹೇಳುತ್ತಿದೆ ಎಂದು ಸಿಂಗ್ ಹೇಳಿದ್ದರು.

ತಾಜಾ ಸುದ್ದಿ

ಪುಲ್ವಾಮಾ ಭಯೋತ್ಪಾದನೆಯ ಕೇಂದ್ರವಾಗಿದ್ದು, ಪ್ರತಿ ಕಾರನ್ನು ಅಲ್ಲಿ ತಪಾಸಣೆ ಮಾಡಲಾಗುತ್ತದೆ. ರಾಂಗ್ ಸೈಡ್‌ನಿಂದ ಸ್ಕಾರ್ಪಿಯೋ ಕಾರು ಬಂದಿದೆ, ಏಕೆ ತಪಾಸಣೆ ಮಾಡಲಿಲ್ಲ? ನಂತರ ಡಿಕ್ಕಿ ಹೊಡೆದು ನಮ್ಮ 40 ಜವಾನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಸರ್ಕಾರ ಮಾಹಿತಿ ನೀಡಿಲ್ಲ. ಸರ್ಜಿಕಲ್ ಸ್ಟ್ರೈಕ್‌ಗಳ ಬಗ್ಗೆ ಮಾತನಾಡುತ್ತಾರೆ ನಾವು ಇಷ್ಟು ಜನರನ್ನು ಕೊಂದಿದ್ದೇವೆ. ಆದರೆ ಯಾವುದೇ ಪುರಾವೆಗಳಿಲ್ಲ. ಅವರು ಸುಳ್ಳಿನ ಕಂತೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Bharat Jodo Yatra: 3,000 ಕಿ.ಮೀ. ಕ್ರಮಿಸಿ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ

ಕೆಲವು ಗಂಟೆಗಳ ನಂತರ, ಸಿಂಗ್ ಅವರು ಪಕ್ಷದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಇದಕ್ಕೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಸ್ಪಷ್ಟನೆ ನೀಡಿದ್ದರು. ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಅವರದೇ ಆಗಿದ್ದು, ಕಾಂಗ್ರೆಸ್ ನಿಲುವನ್ನು ಪ್ರತಿಬಿಂಬಿಸುತ್ತಿಲ್ಲ. ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ ಸರ್ಕಾರವು 2014 ರ ಮೊದಲು ಸರ್ಜಿಕಲ್ ಸ್ಟ್ರೈಕ್‌ಗಳನ್ನು ಮಾಡಿತ್ತು. ರಾಷ್ಟ್ರದ ಹಿತದೃಷ್ಟಿಯಿಂದ ಕೈಗೊಳ್ಳಲಾದ ಎಲ್ಲಾ ಸೇನಾ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ ಮತ್ತು ಬೆಂಬಲಿಸುತ್ತದೆ.

ಸರ್ಜಿಕಲ್ ಸ್ಟ್ರೈಕ್ ಗಲಾಟೆಗೆ ಸಂಬಂಧಿಸಿದ ಎಲ್ಲಾ ಪ್ರಶ್ನೆಗಳಿಗೆ ಅವರ ಪಕ್ಷವು ಉತ್ತರಿಸಿದೆ ಮತ್ತು ಮಾಧ್ಯಮಗಳು ಪ್ರಧಾನಿಗೆ ಪ್ರಶ್ನೆಗಳನ್ನು ಕೇಳಬೇಕಾಗಿದೆ ಎಂದು ಅವರು ಹೇಳಿದರು.

ದಿಗ್ವಿಜಯ್ ಸಿಂಗ್ ಅವರು ಸರ್ಜಿಕಲ್ ಸ್ಟ್ರೈಕ್ ಹೇಳಿಕೆಯ ನಂತರ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ವಿರೋಧ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ದ್ವೇಷದಲ್ಲಿ ಕುರುಡಾಗಿದೆ ಮತ್ತು ಸಶಸ್ತ್ರ ಪಡೆಗಳನ್ನು ಅವಮಾನಿಸಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada