ದೆಹಲಿ: ರೋಜ್‌ಗಾರ್ ಉದ್ಯೋಗ ಮೇಳ ( Rozgar Mela) ಯೋಜನೆಯಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ನೇಮಕವಾಗಿರುವ 70,000 ಅಭ್ಯರ್ಥಿಗಳಿಗೆ ಉದ್ಯೋಗ ನೇಮಕಾತಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜು.22) ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಉದ್ಯೋಗ ನೇಮಕಾತಿ ಪ್ರಮಾಣ ಪತ್ರ ವಿತರಣೆಗೆ ಚಾಲನೆ ನೀಡಿದರು. ದೇಶಾದ್ಯಂತ 44 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯುತ್ತಿದೆ. ಪ್ರಧಾನಮಂತ್ರಿಗಳ ಕಚೇರಿ (PMO) ಹೊರಡಿಸಿದ ಹೇಳಿಕೆಯ ಪ್ರಕಾರ, ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಸರ್ಕಾರಿ ನೇಮಕಾತಿಗಳು ನಡೆಯುತ್ತಿವೆ.
ಇನ್ನೂ ಈ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿ ಪ್ರಧಾನಿ ಮೋದಿ ಮಾತನಾಡಿದ್ದು, ದೇಶದ ಯುವ ಪ್ರತಿಭೆಗಳಿಗೆ ಗರಿಷ್ಠ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಸರಿಯಾದ ದೃಷ್ಟಿಕೋನದಿಂದ ನಿರ್ಧಾರಗಳನ್ನು ತೆಗೆದುಕೊಂಡಾಗ ಮತ್ತು ಸರಿಯಾದ ನೀತಿಗಳನ್ನು ಮಾಡಿದಾಗ, ಅದು ಫಲಪ್ರದವಾಗುತ್ತದೆ. ಐದು ವರ್ಷಗಳಲ್ಲಿ 13 ಕೋಟಿ ಭಾರತೀಯರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ನೀತಿ ಆಯೋಗದ ವರದಿಯೇ ಇದಕ್ಕೆ ಸಾಕ್ಷಿ. ಇಂದು, ಭಾರತದ ಬ್ಯಾಂಕಿಂಗ್ ಕ್ಷೇತ್ರವು ವಿಶ್ವದಲ್ಲೇ ಬಲಿಷ್ಠವಾಗಿದೆ ಎಂದು ಪರಿಗಣಿಸಲಾಗಿದೆ. ಆದರೆ, ಒಂಬತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಜುಲೈ 22, 1947 ರಂದು, ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜ ಎಂದು ಸಂವಿಧಾನ ಸಭೆಯು ಅಂಗೀಕರಿಸಿತು. ಇಂದು ಅದೇ ಐತಿಹಾಸಿಕ ದಿನದಂದು, ಹೊಸದಾಗಿ ಸರ್ಕಾರಿ ಇಲಾಖೆಗಳಿಗೆ ನೇಮಕಾತಿ ಆಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವುದು ಒಂದು ಸ್ಫೂರ್ತಿದಾಯಕ ಕೆಲಸವಾಗಿದೆ ಎಂದು ಹೇಳಿದರು.
#WATCH | Prime Minister Narendra Modi distributes more than 70,000 appointment letters to newly inducted recruits in Government departments and organisations, under Rozgar Mela through video conferencing. pic.twitter.com/MjCQaBpQQc
— ANI (@ANI) July 22, 2023
ಇದನ್ನೂ ಓದಿ: ಉದ್ಯೋಗ ಮೇಳದಲ್ಲಿ 70 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ಕೇಂದ್ರ ಪ್ರಕಾರ, ದೇಶಾದ್ಯಂತ ಕಂದಾಯ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ಜಲಸಂಪನ್ಮೂಲ ಇಲಾಖೆ, ಗೃಹ ಸಚಿವಾಲಯ ಮತ್ತು ವಿವಿಧ ಸರ್ಕಾರಿ ಇಲಾಖೆಗಳಿಗೆ ಹೊಸ ನೇಮಕಾತಿ ಮಾಡಲಾಗಿದೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಈ ರೋಜ್‌ಗಾರ್ ಮೇಳ ಒಂದು ಹೆಜ್ಜೆಯಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ತಿಳಿಸಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ, ರಾಷ್ಟ್ರದ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:59 am, Sat, 22 July 23