AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲಿ ಕೋಮು ಘರ್ಷಣೆ: 3 ಮಂದಿ ಸಾವು, ಇಂಟರ್​ನೆಟ್ ಸ್ಥಗಿತ

ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತು. ಈ ಕೋಮು ಘರ್ಷಣೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ.

ಹರ್ಯಾಣದಲ್ಲಿ ಕೋಮು ಘರ್ಷಣೆ: 3 ಮಂದಿ ಸಾವು, ಇಂಟರ್​ನೆಟ್ ಸ್ಥಗಿತ
ಗಲಭೆImage Credit source: India Today
ನಯನಾ ರಾಜೀವ್
|

Updated on: Aug 01, 2023 | 8:56 AM

Share

ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತು. ಈ ಕೋಮು ಘರ್ಷಣೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ಹೆಚ್ಚಿದ್ದರಿಂದ ಕಲ್ಲು ತೂರಾಟ ನಡೆಸಿ ಕಾರುಗಳಿಗೆ ಬೆಂಕಿ ಹಚ್ಚಲಾಯಿತು.

ನುಹ್‌ನಲ್ಲಿ ಹಿಂಸಾಚಾರದ ಸುದ್ದಿ ಹರಡುತ್ತಿದ್ದಂತೆ, ಎರಡು ಸಮುದಾಯಗಳ ಪ್ರತಿಭಟನಾಕಾರರು ಗುರುಗ್ರಾಮ್ನದ ಸೊಹ್ನಾ ರಸ್ತೆಯ ಬಳಿ ಘರ್ಷಣೆ ನಡೆಸಿದರು, ಇದರ ಪರಿಣಾಮವಾಗಿ ಹಲವಾರು ವಾಹನಗಳಿಗೆ ಹಾನಿಯಾಗಿದೆ. ಪ್ರತಿಭಟನಾಕಾರರು ಗಂಟೆಗಟ್ಟಲೆ ರಸ್ತೆ ತಡೆ ನಡೆಸಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯನ್ನು ಗುರುಗ್ರಾಮ-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪೊಂದು ತಡೆದಿತ್ತು.

ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ಸರ್ಕಾರಿ ಮತ್ತು ಖಾಸಗಿ ವಾಹನಗಳ ಮೇಲೆ ಗುಂಪು ದಾಳಿ ನಡೆಸಲಾಯಿತು. ಸಂಜೆಯ ಹೊತ್ತಿಗೆ, ಹಿಂಸಾಚಾರವು ಗುರುಗ್ರಾಮ-ಸೋಹ್ನಾ ಹೆದ್ದಾರಿಗೆ ಹರಡಿತು, ಅಲ್ಲಿ ಹಲವಾರು ಕಾರುಗಳಿಗೆ ಬೆಂಕಿ ಹಚ್ಚಲಾಯಿತು ಮತ್ತು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಹರ್ಯಾಣದ ನುಹ್‌ನಲ್ಲಿ ಹಿಂದೂ ಸಂಘಟನೆ ಆಯೋಜಿಸಿದ ಯಾತ್ರೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ನೂಹ್‌ಗೆ ಬಂದಿದ್ದ ಸುಮಾರು 2,500 ಜನರು ಹಿಂಸಾಚಾರದಿಂದಾಗಿ ದೇವಸ್ಥಾನದಲ್ಲಿ ಸಿಲುಕಿಕೊಂಡರು. ಸಂಜೆಯ ನಂತರ ಪೊಲೀಸರು ಅವರನ್ನು ರಕ್ಷಿಸಿದರು.

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ನಾಯಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇಂದಿನ ಘಟನೆ ದುರದೃಷ್ಟಕರವಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ನಾನು ಎಲ್ಲ ಜನರಿಗೆ ಮನವಿ ಮಾಡುತ್ತೇನೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಸಿಎಂ ಹೇಳಿದರು.

ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸಹಾಯ ಮಾಡುವಂತೆ ಎರಡು ಸಮುದಾಯಗಳ ಮುಖಂಡರಿಗೆ ಮನವಿ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಗೆ ನುಹ್‌ನಲ್ಲಿ ಎರಡು ಸಮುದಾಯಗಳ ಸದಸ್ಯರ ನಡುವೆ ಸಭೆ ನಡೆಯಲಿದೆ. ಸಧ್ಯಕ್ಕೆ ಇಂಟರ್​ನೆಟ್ ಸ್ಥಗಿತಗೊಳಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ, ಪರಸ್ಪರ ಭಾವೈಕ್ಯತೆಗೆ ಧಕ್ಕೆಯುಂಟುಮಾಡುವ ಮತ್ತು ಅಶಾಂತಿ ಹರಡುವ ಯಾವುದೇ ಪೋಸ್ಟ್‌ಗಳನ್ನು ಹಾಕಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಯಾರಾದರೂ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್‌ನಲ್ಲಿ ಹಾಕಿದರೆ, ಅವರ ವಿರುದ್ಧ ಗುರುಗ್ರಾಮ ಪೊಲೀಸರು ಕ್ರಮ ತೆಗೆದುಕೊಳ್ಳಳಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಬ್ರಿಜ್ ಮಂಡಲ ಜಲಾಭಿಷೇಕ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಗುರುಗ್ರಾಮದ ನೂರಾರು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಶಿವನ ಜಲಾಭಿಷೇಕ ಮಾಡಲು ನಲ್ ಹಾಡ್ ಶಿವ ದೇವಾಲಯ ಮೇವಾತ್‌ಗೆ ತೆರಳಿದ್ದರು.

ಗದ್ದಲದ ನಂತರ ನುಹ್‌ನಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನೋವಾದಲ್ಲಿ ಸೆಕ್ಷನ್ 144 ಹೇರಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಪೀಕರ್ ಮೂಲಕ ಜನರು ತಮ್ಮ ಮನೆಗಳಲ್ಲಿ ಇರುವಂತೆ ನಿರಂತರವಾಗಿ ಸೂಚನೆ ನೀಡಲಾಗುತ್ತಿದೆ.

ಫರಿದಾಬಾದ್‌ನಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನುಹ್‌ನಲ್ಲಿ ಉದ್ವಿಗ್ನತೆಯ ನಂತರ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ತಕ್ಷಣವೇ ಜಾರಿಗೆ ಬರುವಂತೆ ಫರಿದಾಬಾದ್‌ನಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ ಎಂದು ಫರಿದಾಬಾದ್ ಪೊಲೀಸ್ ವಕ್ತಾರ ಸುಬೆ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ