AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿಯಂದು ನಡೆದ ಕೋಮು ಘರ್ಷಣೆ ಪ್ರಕರಣ; 14 ಮಂದಿ ಬಂಧನ

ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಅವರೆಲ್ಲರೂ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿಯಂದು ನಡೆದ ಕೋಮು ಘರ್ಷಣೆ ಪ್ರಕರಣ; 14 ಮಂದಿ ಬಂಧನ
ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿಯಂದು ಕೋಮು ಘರ್ಷಣೆ
Follow us
ರಶ್ಮಿ ಕಲ್ಲಕಟ್ಟ
|

Updated on: Apr 17, 2022 | 2:59 PM

ದೆಹಲಿ: ಶನಿವಾರ ಹನುಮಾನ್ ಜಯಂತಿಯಂದು (Hanuman Jayanti) ಆಯೋಜಿಸಲಾದ ಶೋಭಾ ಯಾತ್ರೆಯ ನಂತರ ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ (Jahangirpuri) ಕೋಮು ಘರ್ಷಣೆಗಳು (communal clash) ಭುಗಿಲೆದ್ದ ಕೆಲವು ಗಂಟೆಗಳ ನಂತರ, ಗಲಭೆ ಮತ್ತು ಇತರರ ಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಹದಿನಾಲ್ಕು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ವಿಶೇಷ ಪೊಲೀಸ್ ಕಮಿಷನರ್ (ಉತ್ತರ ವಲಯದ ಕಾನೂನು ಮತ್ತು ಸುವ್ಯವಸ್ಥೆ) ದೇವೇಂದ್ರ ಪಾಠಕ್ ಅವರು ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದು ಬಂಧನಗಳನ್ನು ಖಚಿತಪಡಿಸಿದ್ದಾರೆ. ಪೊಲೀಸರು ಸೆಕ್ಷನ್ 147 (ಗಲಭೆ), 148 (ಗಲಭೆ, ಮಾರಕ ಆಯುಧಗಳಿಂದ ಶಸ್ತ್ರಸಜ್ಜಿತ), 149 (ಕಾನೂನುಬಾಹಿರ ಸಭೆ), 307 (ಕೊಲೆ ಯತ್ನ), 120-ಬಿ (ಅಪರಾಧ ಪಿತೂರಿ), 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕನಿಗೆ ಅಡ್ಡಿಪಡಿಸುವುದು) 353 (ಸಾರ್ವಜನಿಕ ಸೇವಕನನ್ನು ಅವನ ಕರ್ತವ್ಯದಿಂದ ತಡೆಯಲು ಆಕ್ರಮಣ), 332 (ಸಾರ್ವಜನಿಕ ಸೇವಕನನ್ನು ಅವನ ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 323 (ನೋವು ಉಂಟುಮಾಡುವುದು), 436 ( ಬೆಂಕಿಯಿಂದ ಕಿಡಿಗೇಡಿತನ), 34 (ಸಾಮಾನ್ಯ ಉದ್ದೇಶ) ಮತ್ತು 427 (ಐವತ್ತು ರೂಪಾಯಿಗಳ ಮೊತ್ತಕ್ಕೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಭಾರತೀಯ ದಂಡ ಸಂಹಿತೆ (IPC) ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 27 ಅಡಿಯಲ್ಲಿ ಜಹಾಂಗೀರಪುರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಅವರೆಲ್ಲರೂ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಒಬ್ಬ ಸಬ್ ಇನ್ಸ್‌ಪೆಕ್ಟರ್‌ಗೆ ಬುಲೆಟ್ ಗಾಯವಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ” ಎಂದು ಅಧಿಕಾರಿ ಹೇಳಿದರು.

ಅಧಿಕಾರಿಗಳ ಪ್ರಕಾರ, ಶನಿವಾರ ಸಂಜೆ ಈ ಪ್ರದೇಶದಲ್ಲಿ ಕಲ್ಲು ತೂರಾಟವಾಗಿದ್ದು ಮತ್ತು ತಡರಾತ್ರಿಯವರೆಗೂ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಭಾನುವಾರ ಈ ಪ್ರದೇಶದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಅರೆಸೇನಾಪಡೆಯ ಭದ್ರತಾ ಸಿಬ್ಬಂದಿಗಳೊಂದಿಗೆ ಧ್ವಜ ಮೆರವಣಿಗೆ ನಡೆಸಲಾಯಿತು, ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಇದು ಮೊದಲ ಪ್ರಮುಖ ಕೋಮು ಸಂಘರ್ಷವಾಗಿದೆ. ಈ ಪ್ರಕರಣದಲ್ಲಿ 53 ಜನರನ್ನು ಸಾವಿಗೀಡಾಗಿದ್ದು ಅನೇಕರು ಗಾಯಗೊಂಡಿದ್ದರು. ದೇಶದ ಇತರ ಭಾಗಗಳಲ್ಲಿ ಘರ್ಷಣೆಗಳ ನಂತರ ಹಿರಿಯ ಅಧಿಕಾರಿಗಳು ಈಗಾಗಲೇ ಪೊಲೀಸ್ ಉಪ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಶಾಖೆಯು ಅಲರ್ಟ್ ಆಗಿರಲು ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತಹ ಮೆರವಣಿಗೆಗಳ ಸಮಯದಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲು ಅವರನ್ನು ಕೇಳಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೋಭಾ ಯಾತ್ರೆಗೆ ಪೊಲೀಸ್ ಅನುಮತಿ ಇತ್ತು ಮತ್ತು ಜಹಾಂಗೀರ್‌ಪುರಿಯಲ್ಲಿ ಪಿಸಿಆರ್‌ಗಳು, ಎಂವಿಪಿಗಳು ಮತ್ತು ಡ್ರೋನ್‌ಗಳೊಂದಿಗೆ ಸುಮಾರು 50 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಹನುಮಾನ್​ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ; ಹಿಂಸಾಚಾರದಲ್ಲಿ 6 ಪೊಲೀಸರಿಗೆ ಗಾಯ