ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Viral Video: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೊದಲ್ಲಿ ಮುಸ್ಲಿಮರನ್ನು ಬೆದರಿಸುವ ಘೋಷವಾಕ್ಯ ಜತೆಗೆ "ರಾಮ್, ರಾಮ್" ಘೋಷಣೆಗಳೂ ಇವೆ.  "ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಇರಬೇಕಾದರೆ ಜೈ ಶ್ರೀ ರಾಮ್ ಎಂದು ಹೇಳಬೇಕು)" ಎಂಬ ಘೋಷಣೆ ಕೂಗಲಾಗಿದೆ.

ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು
ಭಾರತ್ ಜೋಡೋ ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಅಶ್ವನಿ ಉಪಾಧ್ಯಾಯ್ ( ಕೃಪೆ: ಟ್ವಿಟರ್)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 09, 2021 | 4:49 PM

ದೆಹಲಿ: ದೆಹಲಿಯ ಹೃದಯ ಭಾಗದಲ್ಲಿರುವ ಜಂತರ್ ಮಂತರ್‌ನಲ್ಲಿ ಭಾನುವಾರ ನಡೆದ ಮೆರವಣಿಗೆಯ ವಿಡಿಯೊ ವೈರಲ್ ಆಗಿದ್ದು, ಈ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅದೇ ವೇಳೆ ಅನುಮತಿ ಇಲ್ಲದೆಯೇ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮೆರವಣಿಗೆಯನ್ನು ಸುಪ್ರೀಂ ಕೋರ್ಟ್ ವಕೀಲ ಹಾಗೂ ದೆಹಲಿ ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಆಯೋಜಿಸಿದ್ದರು ಎಂದು ವರದಿಯಾಗಿದೆ. ಆದರೆ ಅವರು ವಿಡಿಯೊದ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.ಕೇವಲ ಐದು ಅಥವಾ ಆರು ಜನರು ಘೋಷಣೆಗಳನ್ನು ಕೂಗುತ್ತಿದ್ದಾರೆ, ಅವರು ಅಂತಹ ಘೋಷಣೆಗಳನ್ನು ಕೂಗಬಾರದಿತ್ತು ಎಂದು ಅವರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೊದಲ್ಲಿ ಮುಸ್ಲಿಮರನ್ನು ಬೆದರಿಸುವ ಘೋಷವಾಕ್ಯ ಜತೆಗೆ “ರಾಮ್, ರಾಮ್” ಘೋಷಣೆಗಳೂ ಇವೆ.  “ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಇರಬೇಕಾದರೆ ಜೈ ಶ್ರೀ ರಾಮ್ ಎಂದು ಹೇಳಬೇಕು)” ಎಂಬ ಘೋಷಣೆ ಕೂಗಲಾಗಿದೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ವಿಡಿಯೊದಲ್ಲಿರುವವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ದ್ವೇಷದ ಭಾಷಣಗಳಿಗೆ ಕುಖ್ಯಾತರಾಗಿರುವ ಧಾರ್ಮಿಕ ಮುಖಂಡ ನರಸಿಂಗಾನಂದ ಸರಸ್ವತಿಯವರ ಉಪಸ್ಥಿತಿಯಲ್ಲಿ ಘೋಷಣೆಗಳನ್ನು ಕೂಗಲಾಯಿತು. ವಸಾಹತು ಕಾನೂನುಗಳು ಮತ್ತು ಏಕರೂಪದ ಕಾನೂನುಗಳನ್ನು ಮಾಡಿ” ಎಂದು ಒತ್ತಾಯಿಸಿ ನಡೆಸಲಾದ ಮೆರವಣಿಗೆಯನ್ನು ಹಳೆಯ ವಸಾಹತುಶಾಹಿ ಯುಗದ ಕಾನೂನುಗಳ ವಿರುದ್ಧವಾಗಿ ಆಯೋಜಿಸಲಾಗಿದೆ.

ಕೊವಿಡ್ ನಿಯಮಗಳಿಂದಾಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಹೇಳುತ್ತಾರೆ. “ಅಲ್ಲಿ ನೆರೆದಿದ್ದ ಜನರಿಗೆ ಯಾವುದೇ ಅನುಮತಿಯಿಲ್ಲ. ಕೆಲವರು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದು ನಮ್ಮ ಗಮನಕ್ಕೆ ಬಂದಿದೆ. ನಮಗೂ ಒಂದು ವಿಡಿಯೊ ಸಿಕ್ಕಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಯಾದವ್ ಹೇಳಿದರು. ಈ ಘಟನೆಯನ್ನು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದರು. ಒವೈಸಿ ಲೋಕಸಭೆಯಲ್ಲಿ ಮುಸ್ಲಿಮರ ವಿರುದ್ಧ “ನರಮೇಧದ ಘೋಷಣೆಗಳನ್ನು” ಎತ್ತಿದ್ದಾರೆ ಮತ್ತು ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಹೈದರಾಬಾದ್ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿದ್ದು, ಪ್ರಧಾನಿ ನಿವಾಸದಿಂದ 20 ನಿಮಿಷಗಳ ದೂರದಲ್ಲಿರುವ ಜಂತರ್ ಮಂತರ್ ನಲ್ಲಿ ಇಂತಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಿದರು.

ಅಷ್ಟಕ್ಕೂ ಈ ಪುಂಡ ಪೋಕರಿಗಳ ಹೆಚ್ಚುತ್ತಿರುವ ಧೈರ್ಯದ ರಹಸ್ಯವೇನು? ಮೋದಿ ಸರ್ಕಾರವು ಅವರ ಜೊತೆ ನಿಂತಿದೆ ಎಂದು ಅವರಿಗೆ ತಿಳಿದಿದೆ. ಜುಲೈ 24 ರಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಕಾಯಿದೆ (NSA) ಅಡಿಯಲ್ಲಿ ದೆಹಲಿ ಪೊಲೀಸರಿಗೆ ಯಾವುದೇ ವ್ಯಕ್ತಿಯನ್ನು ಬಂಧಿಸುವ ಹಕ್ಕನ್ನು ನೀಡಿತ್ತು. ಆದರೂ ದೆಹಲಿ ಪೊಲೀಸರು ಸದ್ದಿಲ್ಲದೆ ತಮಾಷೆ ನೋಡುತ್ತಿದ್ದಾರೆ “ಎಂದು ಒವೈಸಿ ಹೇಳಿದರು.

ದೆಹಲಿಯ ಹೊರವಲಯದಲ್ಲಿರುವ ದ್ವಾರಕಾದಲ್ಲಿ ಭಾನುವಾರ ನಡೆದ ಮಹಾಪಂಚಾಯತ್ ಅಥವಾ ದೊಡ್ಡ ಸಾರ್ವಜನಿಕ ಸಭೆ ಬಗ್ಗೆ ಉಲ್ಲೇಖಿಸಿದ ಒವೈಸಿ, ಈ ಪ್ರದೇಶದಲ್ಲಿ ಹಜ್ ಹೌಸ್ ನಿರ್ಮಾಣವನ್ನು ವಿರೋಧಿಸಿದರು. ಇಲ್ಲಿನ ವಿಡಿಯೊಗಳಲ್ಲಿ ಪ್ರತಿಭಟನಾಕಾರರು ಕೋಮು ಪ್ರಚೋದನಾತ್ಮಕ ಟೀಕೆಗಳನ್ನು ಮತ್ತು ಹಿಂಸೆಯ ಬೆದರಿಕೆ ಹಾಕುವುದನ್ನು ಕಾಣಬಹುದು.

ಇದನ್ನೂ ಓದಿ:  Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ

ಇದನ್ನೂ ಓದಿ:  ಸ್ವಾತಂತ್ರ್ಯ ಬಂದ ಮೇಲೆ ಮೋದಿ ಹುಟ್ಟಿದ್ದು; ನಾನು ಮೋದಿಗಿಂತ ಸೀನಿಯರ್ ಗೊತ್ತಾ? ನಮಗೇ ಪಾಠ ಮಾಡ್ತಾರೆ: ಸಿದ್ದರಾಮಯ್ಯ

(Communal slogans raised at the event At Delhi’s Jantar Mantar threatening Muslims can be heard)

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ