’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
Follow us
TV9 Web
| Updated By: Lakshmi Hegde

Updated on: Sep 27, 2021 | 3:21 PM

ದೆಹಲಿ: ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗೇ ಹೆಸರಾಗಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ(AIMIM President Asaduddin Owaisi), ಇದೀಗ ಇನ್ನೊಂದು ಅಂಥದ್ದೇ ಮಾತುಗಳನ್ನಾಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಾತನಾಡಿದ ಅವರು, ‘ಈ ದೇಶದಲ್ಲಿ ಮುಸ್ಲಿಮರ ಪರಿಸ್ಥಿತಿ, ಮದುವೆಮನೆಗಳಲ್ಲಿ ಮೆರವಣಿಗೆ ಸಂದರ್ಭದಲ್ಲಿ ಪಾಲ್ಗೊಳ್ಳುವ ವಾದ್ಯದವರಂತೆ ಆಗಿದೆ. ಇಡೀ ಮೆರವಣಿಗೆಯಲ್ಲಿ ಮೊದಲಿಗರಾಗಿ, ಸಂಗೀತ ನುಡಿಸುತ್ತ ಹೋಗುತ್ತಾರೆ. ಆದರೆ ಒಂದು ಸಲ ಮದುವೆ ನಡೆಯುವ ಸ್ಥಳ ತಲುಪುತ್ತಿದ್ದಂತೆ ಅವರಿಗೆ ಹೊರಗೇ ನಿಲ್ಲುವಂತೆ ಹೇಳಲಾಗುತ್ತದೆ’ ಎಂದು ಹೇಳಿದ್ದಾರೆ. ಈ ಮೂಲಕ ಮುಸ್ಲಿಮರನ್ನು ಕೇವಲ ಮತ ಬ್ಯಾಂಕ್​​ನಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದೂ ಓವೈಸಿ ಹೇಳಿದ್ದಾರೆ.  ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವಾಗ ಮೃತಪಟ್ಟವರ ಬಗ್ಗೆ ಮಾತನಾಡಿದ ಓವೈಸಿ, ಸಿಎಎ ಮತ್ತು ಎನ್​ಆರ್​ಸಿ ವಿರುದ್ಧದ ಪ್ರತಿಭಟನೆಯಲ್ಲಿ ಜೀವ ಬಿಟ್ಟವರನ್ನೆಲ್ಲ ನಾವು ಹುತಾತ್ಮರೆಂದೇ ಪರಿಗಣಿಸುತ್ತೇವೆ. ಅವರನ್ನು ಕೊಂದವರೆಲ್ಲರೂ ನಾಶವಾಗಿ ಹೋಗಲಿ ಎಂದು ಹೇಳಿದ್ದಾರೆ.

ಹೈದರಾಬಾದ್​ ಸಂಸದ ಅಸಾದುದ್ದೀನ್​ ಓವೈಸಿ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಭರ್ಜರಿ ಸಿದ್ಧತೆಯಲ್ಲಿ ತೊಡಗಿದ್ದಾರೆ. ತಿಂಗಳ ಪ್ರಾರಂಭದಲ್ಲಿ ಅಯೋಧ್ಯೆಯಿಂದ ಪ್ರಚಾರ ಶುರು ಮಾಡಿರುವ ಅವರು, ಒಂದೊಂದೇ ಕ್ಷೇತ್ರದಲ್ಲಿ ಸಾರ್ವಜನಿಕರ ಸಭೆ ನಡೆಸುತ್ತಿದ್ದಾರೆ.  ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗ ಘೋಷಣೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೇ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರ ಅಬ್ಬಾ ಜಾನ್​ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದರು.

ಇದನ್ನೂ ಓದಿ: ಬುದ್ಧಿ ಹೇಳಿದ ಪೊಲೀಸ್ ಕಾನ್ಸ್​​ಟೇಬಲ್​ಗೆ ಪ್ರೇಮಿಗಳಿಂದ ಹಲ್ಲೆ; ಮೈಸೂರಿನಲ್ಲಿ ಪ್ರಕರಣ ದಾಖಲು

‘ಯುವರತ್ನ’ ನಾಯಕಿ ಸಾಯೆಶಾ ಮಗಳಿಗೆ ಅರಿಯಾನಾ ಎಂದು ನಾಮಕರಣ; ಇದರ ಅರ್ಥವೇನು?

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ